ಬೆಂಗಳೂರು ಹೊರತುಪಡಿಸಿ ಉಳಿದೆಡೆ ಇಂದಿರಾ ಕ್ಯಾಂಟೀನ್ ಆರಂಭ- ಸರ್ಕಾರದಿಂದ ಆದೇಶ

Public TV
1 Min Read
hbl indira canteen 1

– ಮೂರು ಹೊತ್ತು ಉಚಿತ ಆಹಾರ

ಬೆಂಗಳೂರು: ಲಾಕ್‍ಡೌನ್ ವೇಳೆ ಕೂಲಿ ಕಾರ್ಮಿಕರು, ಬಡವರು ಅನುಭವಿಸುತ್ತಿರುವ ಕಷ್ಟದ ಕುರಿತು ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಸರ್ಕಾರ ಎಚ್ಚೆತ್ತುಕೊಂಡು ಮಹತ್ವದ ಆದೇಶ ಹೊರಡಿಸಿದ್ದು, ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಆದೇಶಿಸಿದೆ. ಅಲ್ಲದೆ ಉಚಿತವಾಗಿ ಉಪಹಾರ, ಊಟ ಹಾಗೂ ರಾತ್ರಿ ನೀಡಲು ಸೂಚಿಸಿದೆ.

hbl indira canteen 2

ಮೇ 10ರಿಂದ 24ರ ವರೆಗೆ ಲಾಕ್‍ಡೌನ್ ಜಾರಿಯಲ್ಲಿದೆ. ಹೀಗಾಗಿ ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರಿಗೆ ಅನುಕೂಲವಾಗುವಂತೆ ಉಚಿತ ಉಪಹಾರ ಊಟವನ್ನು ನೀಡಲು ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ಆದೇಶಿಸಿದೆ. ಬೆಂಗಳೂರು ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಇಂದಿರಾ ಕ್ಯಾಂಟೀನ್ ಆರಂಭಿಸಲು ತಿಳಿಸಲಾಗಿದೆ. ಮಾರ್ಗಸೂಚಿಗಳ ಅನ್ವಯ ಇಂದಿರಾ ಕ್ಯಾಂಟೀನ್‍ಗಳಲ್ಲಿ ಊಟ ನೀಡಲು ತಿಳಿಸಿದೆ.

ನಗರಗಳ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಪಹಾರ, ಮಧ್ಯಾಹ್ನ ಊಟ, ರಾತ್ರಿ ಊಟವನ್ನು ಉಚಿತವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ. ಅಲ್ಲದೆ ಆಹಾರ ಸೇವಿಸಿದ ಜನಸಂಖ್ಯೆ ವಿವರಗಳನ್ನು ಕಡ್ಡಾಯವಾಗಿ ನಿರ್ವಹಿಸಬೇಕು. ಅಲ್ಲದೆ ಯೋಜನಾ ನಿರ್ದೇಶಕರು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಪರಿವೀಕ್ಷಣೆ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳುವುಂತೆ ಸರ್ಕಾರ ಆದೇಶ ಹೊರಡಿಸಿದೆ.

INDIRA CANTEEN e1620715804405

ಲಾಕ್‍ಡೌನ್‍ನಿಂದಾಗಿ ಹಲವು ಕೂಲಿ ಕಾರ್ಮಿಕರು, ಬಡವರು, ನಿರ್ಗತಿಕರು ಊಟಕ್ಕಾಗಿ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ತಿಳಿಸಿದೆ. ಜನ ಸ್ವಲ್ಪ ಮಟ್ಟಿಗೆ ಸಮಾಧಾನಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *