ಕಷ್ಟ ಕಾಲದಲ್ಲಿ ಹಿರಿಯ ಕಲಾವಿದರ ಕೈ ಹಿಡಿದ ಉಪೇಂದ್ರ

Public TV
1 Min Read
upendra2

ಬೆಂಗಳೂರು: ಎಲ್ಲೆಡೆ ಲಾಕ್‍ಡೌನ್ ಇರುವುದರಿಂದ ಮನೆಯಿಂದ ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸುವುದು ಹಿರಿಯ ನಾಗರಿಕರಿಗೆ ಕಷ್ಟ ಆಗುತ್ತದೆ. ಈ ಸಂದರ್ಭದಲ್ಲಿ ಉಪೇಂದ್ರ ಸಹಾಯ ಮಾಡುತ್ತಿರುವುದರಿಂದ ಅನೇಕ ಹಿರಿಯ ಕಲಾವಿದರು ನಿಟ್ಟುಸಿರು ಬಿಡುವಂತಾಗಿದೆ.

ಪ್ರತಿ ದಿನ ಸಿನಿಮಾ ಚಟುವಟಿಕೆಗಳನ್ನೇ ನಂಬಿಕೊಂಡಿದ್ದ ಬಡ ಕಲಾವಿದರು ಸಂಕಷ್ಟದಲ್ಲಿ ಇದ್ದಾರೆ. ಅದರಲ್ಲೂ ಕೆಲವು ಹಿರಿಯ ಕಲಾವಿದರು ಕಣ್ಣೀರಿನಲ್ಲಿ ದಿನ ದೂಡುತ್ತಿದ್ದಾರೆ. ಅಂಥವರ ನೆರವಿಗೆ ರಿಯಲ್ ಸ್ಟಾರ್ ಉಪೇಂದ್ರ ಧಾವಿಸಿದ್ದಾರೆ.

ಹಲವು ವರ್ಷಗಳಿಂದ ಸಿನಿಮಾವನ್ನೇ ಜೀವನಾಧಾರವಾಗಿ ನಂಬಿದ್ದ ಹಿರಿಯ ಕಲಾವಿದರಿಗೆ ಇಂದು ಚಿತ್ರರಂಗದಲ್ಲಿ ಸರಿಯಾಗಿ ಅವಕಾಶಗಳು ಸಿಗುತ್ತಿಲ್ಲ. ಲಾಕ್‍ಡೌನ್ ಸಂದರ್ಭದಲ್ಲಿ ಅಂಥವರ ಕಷ್ಟ ಇನ್ನಷ್ಟು ಹೆಚ್ಚಿದೆ. ಅದನ್ನು ಮನಗಂಡಿರುವ ಉಪೇಂದ್ರ ಅವರು ಸ್ಯಾಂಡಲ್‍ವುಡ್‍ನ ಅನೇಕ ಹಿರಿಯ ನಟ-ನಟಿಯರಿಗೆ ನೆರವು ನೀಡಿದ್ದಾರೆ. ದಿನಸಿ ಸಾಮಗ್ರಿ ಮತ್ತು ಅಗತ್ಯ ವಸ್ತುಗಳಲ್ಲಿ ಅವರವರ ಮನೆಗಳಿಗೆ ಕಳಿಸಿಕೊಟ್ಟಿದ್ದಾರೆ.

ಮೋಹನ್ ಜುನೇಜಾ, ಶ್ರೀಲಲಿತಾ, ಕಾಮಿನಿಧರನ್, ಬೆಂಗಳೂರು ನಾಗೇಶ್, ಎಟಿ ರಘು, ಉಮೇಶ್ ಮುಂತಾದವರ ಮನೆಗೆ ಉಪೇಂದ್ರ ಅವರು ದಿನಸಿ ಕಿಟ್‍ಗಳನ್ನು ಕಳಿಸಿದ್ದಾರೆ. ಅದನ್ನು ಸ್ವೀಕರಿಸಿರುವ ಈ ಹಿರಿಯ ಜೀವಗಳು ಉಪೇಂದ್ರ ಅವರಿಗೆ ಮನಸಾರೆ ಆಶೀರ್ವಾದ ಮಾಡಿವೆ. ಇಷ್ಟು ದಿನ ನಿಮ್ಮ ಕಾರ್ಯವನ್ನು ಟಿವಿಯಲ್ಲಿ ನೋಡುತ್ತಿದ್ದೆವು. ಇಂದು ನಾನು ಪ್ರತ್ಯಕ್ಷವಾಗಿ ನೋಡಿದೆ. ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಧನ್ಯವಾದ ಅರ್ಪಿಸುತ್ತೇನೆ. ನಿಮಗೆ ಒಳ್ಳೆಯದಾಗಲಿ ಎಂದು ಹಿರಿಯ ನಟ ಉಮೇಶ್ ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *