ಬೆಂಗಳೂರು: ರಂಗಭೂಮಿ, ಸಿನಿಮಾ ಹಾಗೂ ಧಾರಾವಾಹಿಯಲ್ಲಿ ನಟಿಸುವ ಮೂಲಕ ಖ್ಯಾತಿ ಹೊಂದಿದ್ದ ಹಿರಿಯ ನಟ ಬಿ.ಎಂ. ಕೃಷ್ಣೇಗೌಡ(80) ಮಂಗಳವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಕಳೆದ 20 ದಿನಗಳ ಹಿಂದೆ ಕೃಷ್ಣೇಗೌಡರಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು. ನಂತರ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರು. ಆದರೆ ಮತ್ತೆ ಅನಾರೋಗ್ಯ ಕಾಣಿಸಿಕೊಂಡ ಕಾರಣ ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅವರು ಮಂಗಳವಾರ ಮುಂಜಾನೆ 4:15ಕ್ಕೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.
ಕಳೆದ ತಿಂಗಳು ಕೃಷ್ಣೇಗೌಡರ ಪುತ್ರ ಸತೀಶ್ ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಮುಖ್ಯಮಂತ್ರಿ ನಾಟಕದಲ್ಲಿ ಪಕ್ಷದ ಅಧ್ಯಕ್ಷನಾಗಿ ಅಭಿನಯಿಸುವ ಮೂಲಕ ಕೃಷ್ಣೇ ಗೌಡರವರು ಖ್ಯಾತಿ ಪಡೆದಿದ್ದರು. ಕನ್ನಡ ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸುತ್ತಿದ್ದರು.
ಸದ್ಯ ಕೃಷ್ಣೇಗೌಡರ ಅಗಲಿಕೆ ಸ್ಯಾಂಡಲ್‍ವುಡ್‍ನ ನಟ-ನಟಿಯರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.