ಯಾದಗಿರಿ: ಈಗಾಗಲೇ ಕೊರೊನಾ ಸೋಂಕಿನಿಂದ ಕಂಗಾಲಾಗಿರುವ ಜಿಲ್ಲೆಯಲ್ಲಿ ಸಾವಿನ ಸಪ್ಪಳ ಕೇಳಿಬರುತ್ತಿದೆ. ಕಳೆದ ಬಾರಿ ಸಾವಿನ ಸಂಖ್ಯೆಯಲ್ಲಿ ತೀರಾ ಹಿಂದಿದ್ದ ಯಾದಗಿರಿ ಜಿಲ್ಲೆಯಲ್ಲಿ ಇದೀಗ ಸೋಂಕಿತರ ಮರಣದ ಸಂಖ್ಯೆ ಹೆಚ್ಚಾಗಿದೆ.
ಮೊದಲ ಅಲೆ ಮತ್ತು ಎರಡನೇ ಅಲೆಯಲ್ಲಿ ಒಟ್ಟು 172 ಜನ ಸಾವಿನಪ್ಪಿದ್ದಾರೆ. ಕೊರೊನಾ ಎರಡನೇ ಅಲೆಯಲ್ಲೇ ಯಾದಗಿರಿ ಜಿಲ್ಲೆಯಲ್ಲಿ 105 ಜನ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ. ಯಾದಗಿರಿ, ಶಹಾಪುರ ತಾಲೂಕಿನಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೋವಿಡ್ ಸಾವು ಪ್ರಕರಣ ಬೆಳಕಿಗೆ ಬಂದಿವೆ.
ಸುರಪುರ ತಾಲೂಕಿನಲ್ಲಿ ಕೋವಿಡ್ ನಿಂದ ಅತಿ ಕಡಿಮೆ ಜನ ಪ್ರಾಣ ಕಳೆದುಕೊಂಡಿದ್ದಾರೆ. ಮೊದಲನೇ ಅಲೆಯಲ್ಲಿ 0.5 ಪ್ರತಿಶತವಿದ್ದ ಸಾವಿನ ಪ್ರಮಾಣ ಈ ಬಾರಿ 0.9ರಷ್ಟು ಏರಿಕೆ ಕಂಡಿದೆ. ಇದರಿಂದಾಗಿ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಸಾಕಷ್ಟು ಆತಂಕದಲ್ಲಿವೆ.