ಬೆಂಗಳೂರು: ಸ್ಯಾಂಡಲ್‍ವುಡ್ ನ ದಿವಂಗತ ಹಿರಿಯ ನಟ, ರೆಬೆಲ್ ಸ್ಟಾರ್ ಅಂಬರೀಶ್‍ಗೆ ಇಂದು 69ನೇ ಹುಟ್ಟುಹಬ್ಬದ ಸಂಭ್ರಮವಾಗಿದೆ. ಈ ಹಿನ್ನೆಲೆಯಲ್ಲಿ ಇಂದು ರಾಜ್ಯದ್ಯಾಂತ ಅಂಬಿ ಅಭಿಮಾನಿಗಳು ಬರ್ತ್ ಡೇ ಆಚರಿಸುತ್ತಿದ್ದಾರೆ. ಅಂತೆಯೇ ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಅಪ್ಪಾಜಿಯನ್ನು ನೆನಪಿಸಿಕೊಂಡಿದ್ದಾರೆ.
ಟ್ವೀಟ್‍ನಲ್ಲೇನಿದೆ..?
ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು. ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು ಎಂದು ಬರೆದುಕೊಂಡು ಅಂಬಿ ಪತ್ನಿ ಸುಮಲತಾ ಅಂಬರೀಶ್ ಅವರನ್ನು ಟ್ಯಾಗ್ ಮಾಡಿದ್ದಾರೆ.
ಎಂದಿಗೂ ಮಾಸದ ಅಂಬಿ ಅಪ್ಪಾಜಿಯ ಸವಿನೆನಪು. ಅವರ ಭಾಷಾಭಿಮಾನ, ಖಡಕ್ ಜೀವನ ಶೈಲಿ ಎಲ್ಲರಿಗೂ ಸ್ಫೂರ್ತಿಯಾಗಿರುತ್ತದೆ. ಮತ್ತೊಮ್ಮೆ ಕರುನಾಡಲ್ಲೇ ಹುಟ್ಟಿಬರಲಿ ನಮ್ಮ ನೆಚ್ಚಿನ ಮಂಡ್ಯದ ಗಂಡು @sumalathaA pic.twitter.com/r8jrJarA0v
— Darshan Thoogudeepa (@dasadarshan) May 29, 2021
ಮಂಡ್ಯದ ಗಂಡು ನಮ್ಮನ್ನಗಲಿ ಎರಡೂವರೆ ವರ್ಷಗಳಾಗಿವೆ. ಇಂದು ಅವರ ಹುಟ್ಟುಹಬ್ಬವಾಗಿದ್ದು, ನಗರದ ಕಂಠೀರವ ಸ್ಟುಡಿಯೋದಲ್ಲಿರುವ ಅಂಬಿ ಸಮಾಧಿಗೆ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ. ಮಹಾಮಾರಿ ಕೊರೊನಾ ವೈರಸ್ ಕಾಟದಿಂದಾಗಿ ಅಂಬಿ ಹುಟ್ಟುಹಬ್ಬ ಸಡಗರಕ್ಕೆ ಬ್ರೇಕ್ ಬಿದ್ದಿದೆ.
ಅಭಿಮಾನಿಗಳಿಂದ ಅದ್ಧೂರಿಯ ಹುಟ್ಟುಹಬ್ಬ ಆಚರಣೆಗೆ ಅವಕಾಶವಿಲ್ಲ. ಈ ದಿನವನ್ನ ಅಂಬಿ ಡೇ ಅಂತ ಆಚರಿಸಲು ಸುಮಲತಾ ಮನವಿ ಮಾಡಿಕೊಮಡಿದ್ದಾರೆ. ಪೂಜೆಯ ಬಳಿಕ ಸುಮಲತಾ ಅವರು ಮಂಡ್ಯಗೆ ತೆರಳಿದ್ದಾರೆ.
ಕಿಡ್ನಿ ಹಾಗೂ ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಅಂಬರೀಶ್ ಅವರು 2018ರ ನವೆಂಬರ್ 24ರಂದು ರಾತ್ರಿ ನಿಧನರಾಗಿದ್ದರು. ಅಂದೇ ಮಂಡ್ಯದ ಕನಗನಮರಡಿಯಲ್ಲಿ ಬಸ್ ದುರಂತ ನಡೆದಿದ್ದು, ಘಟನೆ ನೋಡಿ ಬೇಸರಗೊಂಡಿದ್ದ ಅಂಬರೀಶ್ ಅವರ ಆರೋಗ್ಯದಲ್ಲಿ ಏರುಪೇರಾಗಿತ್ತು. ಹೀಗಾಗಿ ಹೆಚ್ಚಿನ ಚಿಕಿತ್ಸೆಗೆ ಎಂದು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಂಬರೀಶ್ ನಿಧನರಾಗಿದ್ದರು.