ಬೆಂಗಳೂರು: ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಲಾಕ್‍ಡೌನ್ ಮುಂದುವರಿಸುವುದಾ ಎನ್ನುವ ಕುರಿತಾಗಿ ನಾವು ಮೂರು ಗಂಟೆಗಳ ಕಾಲ ಚರ್ಚೆ ಮಾಡಿದ್ದೇವೆ. ಹಲವರು ತಮ್ಮ ಸಲಹೆಗಳನ್ನು ನೀಡಿದ್ದಾರೆ. ಪ್ರತಿ ಗ್ರಾಮ ಪಂಚಾಯ್ತಿಗೆ 50 ಸಾವಿರ ಅನುದಾನ ನೀಡಲಾಗುತ್ತದೆ ಎಂದು ಹೇಳಿದ್ದಾರೆ.
ಜೂನ್ 7ರ ತನಕ ಲಾಕ್ ಡೌನ್ ಮುಂದುವರಿಯಲಿದೆ. ಕೊರೊನಾ ಸ್ಥಿತಿಗತಿ ತಿಳಿದುಕೊಂಡು ಲಾಕ್ಡೌನ್ ವಿಸ್ತರಣೆ ಬಗ್ಗೆ ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಸಹಕರಿಸಿದರೆ ಲಾಕ್‍ಡೌನ್ ಮುಂದುವರಿಸುವ ಸಂದರ್ಭ ಉದ್ಭವ ಆಗಲ್ಲ. ಇಲ್ಲದಿದ್ದರೆ ಪರಿಸ್ಥಿತಿ ನೋಡಿ ತೀರ್ಮಾನ ಮಾಡಬೇಕಾಗುತ್ತೆ ಎಂದಿದ್ದಾರೆ.
ಸದ್ಯ ಪಾಸಿಟಿವಿಟಿ ರೇಟ್ 16% ತಲುಪಿದೆ. ನಾಲ್ಕೈದು ದಿನಗಳಲ್ಲಿ 8ಕ್ಕೆ ಇಳಿದರೂ ವಾರಗಳ ಕಾಲ ಲಾಕ್‍ಡೌನ್ ವಿಸ್ತರಣೆ ಮಾಡಬಹುದು. ನಂತರ ಪಾಸಿಟಿವಿಟಿ ರೇಟ್ 6%ಕ್ಕಿಂತ ಕೆಳಗೆ ಇಳಿದ್ರೆ ಲಾಕ್‍ಡೌನ್ ವಿನಾಯ್ತಿ ಕೊಡುವ ಸಾಧ್ಯತೆ ಇದೆ. ಇದನ್ನೂ ಓದಿ: ಸಿಎಂ ಬದಲಾವಣೆ ವದಂತಿ – ಬಿಎಸ್‍ವೈ ಬಣ ಹೇಳೋದು ಏನು? ರೇಸ್‍ನಲ್ಲಿ ಯಾರಿದ್ದಾರೆ?
5 ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ಗೃಹ ಕಚೇರಿ ಕೃಷ್ಣಾದಿಂದ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ವೀಡಿಯೋ ಕಾನ್ಫರೆನ್ಸ್ ಮಾಡಿದ್ದಾರೆ. ಡಿಸಿಎಂಗಳಾದ ಗೋವಿಂದ ಕಾರಜೋಳ, ಅಶ್ವಥನಾರಾಯಣ್, ಕಂದಾಯ ಸಚಿವ ಆರ್.ಅಶೋಕ್ ಭಾಗಿಯಾಗಿದ್ದರು. 5 ಜಿಲ್ಲೆಗಳಿಂದ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಸಂಸದರು ಭಾಗಿ ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ, ವಿಜಯಪುರ ಜಿಲ್ಲೆಗಳ ಜನಪ್ರತಿನಿಧಿಗಳ ಜೊತೆ ವೀಡಿಯೋ ಕಾನ್ಫರೆನ್ಸ್ ಮಾಡಿ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಜಿಲ್ಲೆಗಳ ಕೊರೊನಾ ಸ್ಥಿತಿಗತಿ, ಜಿಲ್ಲೆಗಳ ಜನಪ್ರತಿನಿಧಿಗಳ ಅಭಿಪ್ರಾಯದ ಮೇರೆಗೆ ಲಾಕ್‍ಡೌನ್ ವಿಸ್ತರಣೆ ಭವಿಷ್ಯ ನಿರ್ಧಾರವಾಗುತ್ತದೆ.