Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆ ಮಾಡುವಂತೆ ಸಿಎಂ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆ ಮಾಡುವಂತೆ ಸಿಎಂ ಸೂಚನೆ

Bengaluru City

ರಾಜ್ಯದಲ್ಲಿ ಕೊರೊನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಕಡಿಮೆ ಮಾಡುವಂತೆ ಸಿಎಂ ಸೂಚನೆ

Public TV
Last updated: May 29, 2021 3:33 pm
Public TV
Share
2 Min Read
BSY 18
SHARE

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಸಂಸದರು ಮತ್ತು ಶಾಸಕರೊಂದಿಗೆ ವೀಡಿಯೋ ಸಂವಾದ ನಡೆಸಿ, ಕೋವಿಡ್ 19 ಸೋಂಕು ತಡೆಗಟ್ಟುವ ಕುರಿತಂತೆ ಚರ್ಚೆ ನಡೆಸಿದರು.

ಎರಡೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಈ ಸಭೆಯಲ್ಲಿ ಕೋವಿಡ್ ನಿರ್ವಹಣೆಯಲ್ಲಿ ಎದುರಾಗುತ್ತಿರುವ ಸಮಸ್ಯೆಗಳು, ಸವಾಲುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಪಾಸಿಟಿವಿಟಿ ದರ ಶೇ. 10 ಕ್ಕಿಂತ ಕಡಿಮೆ ಮಾಡುವಂತೆ ಸೂಚಿಸಲಾಯಿತು. ಅಂತೆಯೇ ಮರಣ ಪ್ರಮಾಣ ರಾಜ್ಯದಲ್ಲಿ ಶೇ.1.7 ರಷ್ಟು ಇದ್ದು, ಇದನ್ನು ಕಡಿಮೆ ಮಾಡುವಂತೆ ಸೂಚಿಸಲಾಯಿತು.

ರಾಜ್ಯದಲ್ಲಿ ಒಟ್ಟು ವರದಿಯಾಗುತ್ತಿರುವ ಪ್ರಕರಣಗಳಲ್ಲಿ ಬೆಂಗಳೂರು ನಗರ, ಮೈಸೂರು, ತುಮಕೂರು, ಹಾಸನ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಒಟ್ಟು ಶೇ. 60 ಪ್ರಕರಣಗಳು ವರದಿಯಾಗುತ್ತಿದೆ. ಇದನ್ನು ಕಡಿಮೆಗೊಳಿಸಲು ತಿಳಿಸಲಾಯಿತು. ಅಂತೆಯೇ ಮರಣ ಪ್ರಮಾಣವೂ ಹೆಚ್ಚಾಗಿದ್ದು, ಇದನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.

ಕೋವಿಡ್-19 ಸಾಂಕ್ರಾಮಿಕ ತಡೆಗಟ್ಟುವ ಹಿನ್ನೆಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತಂತೆ ಚರ್ಚಿಸಲು ಮೈಸೂರು, ಹಾಸನ, ಬೆಳಗಾವಿ, ಕಲಬುರಗಿ ಮತ್ತು ವಿಜಯಪುರ ಜಿಲ್ಲೆಗಳ ಶಾಸಕರು, ಸಂಸದರೊಂದಿಗೆ ಮುಖ್ಯಮಂತ್ರಿ @BSYBJP ರವರು ಇಂದು ವೀಡಿಯೋ ಸಂವಾದ ನಡೆಸಿದರು. (1/2)#KarnatakaFightsCorona pic.twitter.com/reeIMk2WXJ

— CM of Karnataka (@CMofKarnataka) May 29, 2021

ಕೋವಿಡ್ 19ರ ಎರಡನೇ ಅಲೆ, ನಿರೀಕ್ಷೆಗೂ ಮೀರಿ ತೀವ್ರವಾಗಿ ಬಾಧಿಸಿದೆ. ಆದರೆ ಈಗ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಸಮಾಧಾನದ ಸಂಗತಿ. ಕೋವಿಡ್ 19 ಸೋಂಕು ತೀವ್ರವಾಗಿದ್ದಾಗ ಎಲ್ಲ ಜನಪ್ರತಿನಿಧಿಗಳೂ ಅಧಿಕಾರಿಗಳೊಂದಿಗೆ ಕೈಜೋಡಿಸಿ, ಸೋಂಕು ನಿಯಂತ್ರಣಕ್ಕೆ ಶ್ರಮಿಸಿದ್ದಕ್ಕೆ ಮುಖ್ಯಮಂತ್ರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

ಆದರೆ ಪ್ರಕರಣ ಕಡಿಮೆಯಾಗುತ್ತಿರುವ ಕುರಿತು ಕೈಕಟ್ಟಿ ಕೂರುವಂತಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಪ್ರಕರಣಗಳ ಪ್ರಮಾಣ ಹೆಚ್ಚಾಗುತ್ತಿದೆ. ಈ ಕುರಿತು ನಾವು ಹೆಚ್ಚಿನ ಗಮನ ಹರಿಸಬೇಕಾಗಿದೆ. ಗ್ರಾಮೀಣ ಭಾಗದಲ್ಲಿ ಹೋಂ ಐಸೋಲೇಷನ್ ಬದಲು ಸೋಂಕಿತರನ್ನು ಕೋವಿಡ್ ಕೇರ್ ಸೆಂಟರುಗಳಿಗೆ ದಾಖಲಿಸಲು ಮನವೊಲಿಸಬೇಕಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಶಾಸಕರು ಹಾಗೂ ಸಂಸದರು ತಮ್ಮ ಕ್ಷೇತ್ರಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ನಡೆಸಿ, ಸೋಂಕಿತರನ್ನು ಪತ್ತೆ ಹಚ್ಚಿ ಸಕಾಲದಲ್ಲಿ ಅವರಿಗೆ ಸೂಕ್ತ ಚಿಕಿತ್ಸೆ ದೊರೆಯುವಂತೆ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಇದರಿಂದ ಮರಣ ಪ್ರಮಾಣ ಕಡಿಮೆಯಾಗುವುದು. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳು, ಔಷಧ, ಆಮ್ಲಜನಕ, ವಿವಿಧ ಉಪಕರಣಗಳು ಅಗತ್ಯಕ್ಕೆ ಅನುಗುಣವಾಗಿ ಸಮರ್ಪಕವಾಗಿ ಹಂಚಿಕೆಯಾಗಬೇಕು. ಎಲ್ಲಿಯೂ ಸಮಸ್ಯೆ ತಲೆದೋರದಂತೆ ಸಂಪನ್ಮೂಲಗಳ ದಕ್ಷ ಬಳಕೆಯನ್ನು ಖಾತರಿಪಡಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಉಪಮುಖ್ಯಮಂತ್ರಿಗಳಾದ @GovindKarjol, @drashwathcn ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಮತ್ತಿತರರು ಉಪಸ್ಥಿತರಿದ್ದರು. (2/2)#Unite2FightCorona pic.twitter.com/i34zarryOE

— CM of Karnataka (@CMofKarnataka) May 29, 2021

ಸಂವಾದದಲ್ಲಿ ಭಾಗವಹಿಸಿದ ಶಾಸಕರು, ಸಂಸದರು, ಕೋವಿಡ್ 19 ನಿರ್ವಹಣೆ ಜೊತೆಗೆ ತಳಹಂತದ ಹಲವಾರು ಸಮಸ್ಯೆಗಳ ಕುರಿತು ಮುಖ್ಯಮಂತ್ರಿಗಳ ಗಮನ ಸೆಳೆದರು. ಇವುಗಳನ್ನು ಶೀಘ್ರವೇ ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿಗಳು ನೀಡಿದರು. ಆಶಾ ಕಾರ್ಯಕರ್ತೆಯರ ಬಾಕಿ ವೇತನ ಬಿಡಗಡೆಗೆ ಈಗಾಗಲೇ ಕ್ರಮ ವಹಿಸಲಾಗಿದ್ದು, ಎರಡು ಮೂರು ದಿನಗಳಲ್ಲಿಯೇ ದೊರೆಯಲಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಪ್ರತಿ ತಾಲೂಕಿಗೆ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದರು. ಸರ್ಕಾರವು ಈಗಾಗಲೇ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಲ್ಲಿ 50 ಲಕ್ಷ ರೂ. ಗಳನ್ನು ಕೋವಿಡ್ ನಿರ್ವಹಣೆಗೆ ಬಳಕೆ ಮಾಡಲು ಅನುಮತಿ ನೀಡಲಾಗಿದೆ. ಅಲ್ಲದೆ ಗ್ರಾಮ ಪಂಚಾಯ್ತಿಗಳಿಗೆ ತಲಾ 50 ಸಾವಿರ ರೂ. ಬಿಡುಗಡೆ ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಸಭೆಯಲ್ಲಿ ವೈದ್ಯರ ಕೊರತೆ ಕುರಿತು ಚರ್ಚೆ ನಡೆಯಿತು. ಇದಕ್ಕೆ ಉತ್ತರಿಸಿದ ಮುಖ್ಯಮಂತ್ರಿಗಳು ರಾಜ್ಯ ಸರ್ಕಾರ ಈಗಾಗಲೇ 1200 ವೈದ್ಯರ ನೇಮಕ ಮಾಡಿಕೊಳ್ಳುತ್ತಿದ್ದು, ಶೀಘ್ರವೇ ಸಮಸ್ಯೆ ಬಗೆಹರಿಯಲಿದೆ ಎಂದು ತಿಳಿಸಿದರು.

TAGGED:bengalurubs yeddyurappaCorona VirusCovid 19Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರು
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
39 minutes ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
43 minutes ago
LPG Commercial Cylinder
Latest

ಕಮರ್ಷಿಯಲ್ ಸಿಲಿಂಡರ್ ಅಭಾವ – ತಮಿಳುನಾಡಲ್ಲಿ ರೆಸ್ಟೋರೆಂಟ್‌ಗಳು ಬಂದ್‌

Public TV
By Public TV
59 minutes ago
Haryana Gurugram Wall Collapse
Latest

ಹರಿಯಾಣ | ನಿರ್ಮಾಣ ಹಂತದ ಗೋಡೆ ಕುಸಿತ – 7 ಕಾರ್ಮಿಕರು ಸಾವು, ಐವರ ಸ್ಥಿತಿ ಚಿಂತಾಜನಕ

Public TV
By Public TV
1 hour ago
Bengaluru Kempegowda International Airport 4
Bengaluru City

ನಗ್ನ ಜೋಡಿ ಫೋಟೋ ಪಾರ್ಸೆಲ್ – ಬೆಂಗ್ಳೂರು ಏರ್‌ಪೋರ್ಟ್‌ಗೆ ವಾಮಾಚಾರ?

Public TV
By Public TV
2 hours ago
White Phosphorus Bomb
Latest

ಕಾನೂನು ಉಲ್ಲಂಘಿಸಿದ ಇಸ್ರೇಲ್‌ – ಲೆಬನಾನ್‌ ವಸತಿ ಪ್ರದೇಶದ ಮೇಲೆ ಬಿಳಿ ರಂಜಕ ಬಳಸಿ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?