Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ: ಡಿಸಿಎಂ ಅಶ್ವತ್ಥ ನಾರಾಯಣ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ: ಡಿಸಿಎಂ ಅಶ್ವತ್ಥ ನಾರಾಯಣ್

Bengaluru City

ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆ: ಡಿಸಿಎಂ ಅಶ್ವತ್ಥ ನಾರಾಯಣ್

Public TV
Last updated: May 30, 2021 8:57 pm
Public TV
Share
3 Min Read
ashwath narayan 1
SHARE

ಬೆಂಗಳೂರು: ನಗರದ ದಾಸರಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ 100 ಹಾಸಿಗೆಗಳ ಸುಸಜ್ಜಿತ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಹೇಳಿದರು.

ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ 7ನೇ ವರ್ಷಕ್ಕೆ ಕಾಲಿಟ್ಟ ಸಂದರ್ಭದಲ್ಲಿ ಮಲ್ಲೇಶ್ವರ ಹಾಗೂ ದಾಸರಹಳ್ಳಿ ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಆಯೋಜಿಸಿದ್ದ ಸೇವಾ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ದಾಸರಹಳ್ಳಿ ಕ್ಷೇತ್ರಕ್ಕೆ 5 ಆಮ್ಲಜನಕ ಸಾಂದ್ರಕಗಳನ್ನು ಹಸ್ತಾಂತರ ಮಾಡಿದ ನಂತರ ಡಿಸಿಎಂ ಅವರು ಮಾತನಾಡಿದರು.

ashwath narayan 2 1 medium

ಇದೊಂದು ಅತ್ಯುತ್ತಮ ಆಸ್ಪತ್ರೆಯಾಗಲಿದ್ದು ಐಸಿಯು, ವೆಂಟಿಲೇಟರ್ ಸೇರಿ ಪ್ರತ್ಯೇಕ ಆಕ್ಸಿಜನ್ ಜನರೇಟರ್ ಅನ್ನು ಅಳವಡಿಸಲಾಗುವುದು. ಕ್ಷೇತ್ರದ ಜನರಿಗೆ ಉತ್ತಮ ಆರೋಗ್ಯ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಈ ಆಸ್ಪತ್ರೆಯನ್ನು ತ್ವರಿತವಾಗಿ ನಿರ್ಮಾಣ ಮಾಡಲಿದೆ ಎಂದು ಅವರು ಘೋಷಿಸಿದರು.

ಆರೋಗ್ಯದ ಜತೆಗೆ ಶಿಕ್ಷಣಕ್ಕೂ ಸರಕಾರ ಆದ್ಯತೆ ನೀಡುತ್ತಿದೆ. ದಾಸರಹಳ್ಳಿ ಕ್ಷೇತ್ರಕ್ಕೆ ಆಸ್ಪತ್ರೆ ಜತೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಮಂಜೂರು ಮಾಡಲಾಗಿದೆ ಎಂದ ಅವರು, ಕೋವಿಡ್ ನಿರ್ವಹಣೆಗೆ ಸಂಬಂಧಿಸಿದಂತೆ ಕ್ಷೇತ್ರಕ್ಕೆ ಔಷಧಿ, ವೆಂಟಿಲೇಟರ್, ಆಕ್ಸಿಜನ್ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗಿದೆ. ಇದುವರೆಗೂ ದೇಶದಲ್ಲಿ 23 ಕೋಟಿ ಜನರಿಗೆ ಲಸಿಕೆ ನೀಡಲಾಗಿದೆ. ಡಿಸೆಂಬರ್ ಹೊತ್ತಿಗೆ ರಾಜ್ಯದಲ್ಲಿ ಎಲ್ಲರಿಗೂ ಲಸಿಕೆ ಕೊಡಲಾಗುವುದು ಎಂದರು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದೆ.#7yearsofModiGovt ಪ್ರಯುಕ್ತ ವೈದ್ಯಕೀಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರಿಗೆ ರೇಷನ್‌ ಕಿಟ್‌ ವಿತರಿಸಲಾಯಿತು ಹಾಗೂ ಕ್ಷೇತ್ರಕ್ಕೆ 5 #OxygenConcentrators ಹಸ್ತಾಂತರಿಸಲಾಯಿತು. ಶ್ರೀಯುತ ಮುನಿರಾಜು ಅವರು ಉಪಸ್ಥಿತರಿದ್ದರು.#7YearsOfSeva pic.twitter.com/uevhdBi80g

— Dr. C.N. Ashwath Narayan (@drashwathcn) May 30, 2021

ಡಿಸಿಎಂ ನಗರ ಸಂಚಾರ
ಬೆಳಗ್ಗೆಯಿಂದಲೇ ಮಲ್ಲೇಶ್ವರ ವಿಧಾನಸಭೆ ಕ್ಷೇತ್ರವೂ ಸೇರಿ ನಗರದ ವಿವಿಧೆಡೆ ಸಂಚರಿಸಿದ ಡಾ.ಅಶ್ವತ್ಥನಾರಾಯಣ ಅವರು ಪಕ್ಷದ ಕಾರ್ಯಕರ್ತರು, ಕೋವಿಡ್ ಮುಂಚೂಣಿ ಕಾರ್ಯಕರ್ತರು, ಆರೋಗ್ಯ ಸಿಬ್ಬಂದಿಯನ್ನು ಭೇಟಿ ಮಾಡಿದರು.

ಮೊದಲಿಗೆ ಅರಮನೆ ನಗರ ವಾರ್ಡ್ ಆರ್‍ಎಂವಿ ಬಡಾವಣೆ ನಿವಾಸಿಗಳ ಸಂಘದ ಪಾರ್ಕ್‍ನಲ್ಲಿ ವ್ಯಾಕ್ಸಿನೇಷನ್ ಅಭಿಯಾನದಲ್ಲಿ ಪಾಲ್ಗೊಂಡ ಅವರು, ಅಲ್ಲಿ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪಿನ ಜನಕ್ಕೆ ನೀಡಲಾಗುತ್ತಿದ್ದ ಲಸಿಕೆ ಮಾಹಿತಿಯನ್ನು ಪಡೆದುಕೊಂಡರು. ವೈದ್ಯರು, ಸಿಬ್ಬಂದಿ ಹಾಗೂ ಲಸಿಕೆ ಪಡೆಯಲು ಬಂದಿದ್ದ ಹಿರಿಯ ನಾಗರೀಕರ ಯೋಗಕ್ಷೇಮ ವಿಚಾರಿಸಿದರು, ಈ ಸಂದರ್ಭದಲ್ಲಿ ಎಲ್ಲ ಹಿರಿಯರು ಸರಕಾರದ ಕೋವಿಡ್ ನಿರ್ವಹಣೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಇಂದು ಬೆಂಗಳೂರು ಅರಮನೆ ನಗರ ವಾರ್ಡ್‌ನ RMV Residents Welfare Association Parkನಲ್ಲಿ #VaccinationDrive ನಡೆಯಿತು.#COVID19 ನಿರ್ವಹಣೆಯಲ್ಲಿ ವ್ಯಾಕ್ಸಿನ್‌ ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ನಿಟ್ಟಿನಲ್ಲಿ ಜನ ಜಾಗೃತಿ ಮೂಡಿಸುವ ಜತೆ ಅರ್ಹ ನಾಗರಿಕರು, ಆದ್ಯತೆಯ ಗುಂಪಿನವರಿಗೆ ಅಗತ್ಯ ನೆರವು ನೀಡಲಾಗುತ್ತಿದೆ.#7YearsOfSeva pic.twitter.com/2FX0a4Amxa

— Dr. C.N. Ashwath Narayan (@drashwathcn) May 30, 2021

ಗುಟ್ಟಹಳ್ಳಿ ವಾರ್ಡ್ ನಲ್ಲಿ ಸೇವಾ ಹೀ ಸಂಘಟನೆ ಮೂಲಕ ಬಡವರು, ಮುಂಚೂಣಿ ಕಾರ್ಯಕರ್ತರಾದ ಪೌರ ಕಾರ್ಮಿಕರು, ಬೆಸ್ಕಾಂ ಮತ್ತು ಒಳಚರಂಡಿ & ಜಲಮಂಡಳಿ ಕಾರ್ಮಿಕರಿಗೆ ಆಹಾರ ದಾನ್ಯದ ಕಿಟ್?ಗಳನ್ನು ವಿತರಿಸಿದರು. ಬಳಿಕ ಕಾಡುಮಲ್ಲೇಶ್ವರ ವಾರ್ಡ್‍ನ ಸಮುದಾಯ ಭವನದಲ್ಲಿ ವ್ಯಾಕ್ಸಿನ್ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು.

ಸಿಹಿ, ಫುಡ್ ಕಿಟ್ ಹಂಚಿದ ಡಿಸಿಎಂ:
ಮೋದಿ ಸರ್ಕಾರಕ್ಕೆ 7 ವರ್ಷ ತುಂಬಿದ ಕಾರಣ ಎಲ್ಲ ಕಡೆಗಳಲ್ಲೂ ಲಸಿಕೆ ಪಡೆಯಲು ಬಂದು ಸಾಲಿನಲ್ಲಿ ನಿಂತಿದ್ದ ಎಲ್ಲರಿಗೂ ಡಿಸಿಎಂ ಸ್ವತಃ ಸಿಹಿ ಹಂಚಿದರು. ಅದೇ ರೀತಿ ಎಂಎಸ್‍ಆರ್ ನಗರದಲ್ಲಿ ಕೋವಿಡ್ ಮುಂಚೂಣಿ ಕಾರ್ಯಕರ್ತರಾಗಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರಿಗೆ ಆಹಾರ ಕಿಟ್‍ಗಳು ಮತ್ತು ಪ್ರೆಶರ್ ಕುಕ್ಕರ್‍ಗಳನ್ನು ವಿತರಣೆ ಮಾಡಿದರು. ಅಲ್ಲದೆ, ಪೌರ ಕಾರ್ಮಿಕರ ಕುಂದುಕೊರತೆಗಳನ್ನು ಆಲಿಸಿದರು. ಮಾಜಿ ಶಾಸಕ ಮುನಿರಾಜು ಅವರೊಂದಿಗೆ ದಾಸರಹಳ್ಳಿ ಪಿಎಚ್‍ಸಿಗೆ ಭೇಟಿ ನೀಡಿ, ಅಲ್ಲಿನ ಅರೆ ವೈದ್ಯ ಸಿಬ್ಬಂದಿಗೆ ಆಹಾರ ಕಿಟ್‍ಗಳನ್ನು ವಿತರಿಸಿದರು.

#COVID19 ಸಂದರ್ಭದಲ್ಲಿ ದಿನವೂ ಸಮಾಜದ ಸುರಕ್ಷತೆಯ ಕೆಲಸದಲ್ಲಿ ತೊಡಗಿರುವ ಮುಂಚೂಣಿ ಕಾರ್ಯಕರ್ತರ ಸೇವೆ ಶ್ಲಾಘನೀಯ.#7yearsofModiGovt ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಮುಂಚೂಣಿ ಕಾರ್ಯಕರ್ತರಿಗೆ ರೇಷನ್ ಕಿಟ್, ಪೌರ ಕಾರ್ಮಿಕರಿಗೆ ಪ್ರೆಷರ್ ಕುಕ್ಕರ್ ಸೇರಿದಂತೆ ಅಗತ್ಯ ಸೌಕರ್ಯಗಳನ್ನು ಹಂಚಲಾಯಿತು.#7YearsOfSeva #ಸೇವೆಯೇಸಂಘಟನೆ pic.twitter.com/PmH94nLjJZ

— Dr. C.N. Ashwath Narayan (@drashwathcn) May 30, 2021

ಕಾಂಗ್ರೆಸ್ ವಿರುದ್ಧ ವಾಗ್ದಾಳಿ:
ದಾಸರಹಳ್ಳಿ ಮಂಡಲ ವಿಭಾಗ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಡಿಸಿಎಂ ಅವರು, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಕೇಂದ್ರದಲ್ಲಿ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಸೇರಿ ಎಲ್ಲ ಪ್ರತಿಪಕ್ಷಗಳು ಪಕ್ಷವೂ ಒಡೆದಾಳುವ ರಾಜಕೀ ಮಾಡಿಕೊಂಡು ದೇಶದ ಹಿತವನ್ನು ಕಡೆಗಣಿಸಿದವು. ಕೋವಿಡ್‍ನಂಥ ಸಂಕಷ್ಟ ಕಾಲದಲ್ಲಿ ಲಸಿಕೆ ಬಗ್ಗೆ ಅಪಪ್ರಚಾರ ನಡೆಸಿದವು ಎಂದು ಡಾ.ಸಿ.ಎನ್.ಅಶ್ವತ್ಥನಾರಾಯಣ ಕಟುವಾಗಿ ಟೀಕಿಸಿದರು.

ಮೋದಿ ನೇತೃತ್ವದಲ್ಲಿ ಇಡೀ ದೇಶ ಎಲ್ಲ ಕ್ಷೇತ್ರಗಳಲ್ಲಿಯೂ ಸರ್ವತೋಮುಖ ಅಭಿವೃದ್ಧಿ ಕಾಣುತ್ತಿದೆ. ದೇಶದ ಎದುರಿಸುತ್ತಿರುವ ಎಲ್ಲ ಸಮಸ್ಯೆಗಳಿಗೂ ಅವರು ಪರಿಹಾರ ಕಂಡುಕೊಳ್ಳುತ್ತಿದ್ದಾರೆ. ಓರ್ವ ಮಹಾಪುರುಷ, ಯುಗಪುರುಷ ನಮ್ಮ ದೇಶದ ಪ್ರಧಾನಿಯಾಗಿರುವುದು ಅದೃಷ್ಟದ ಸಂಗತಿ. ಇದನ್ನು ಪ್ರತಿಪಕ್ಷಗಳಿಗೆ ಸಹಿಸಲಾಗುತ್ತಿಲ್ಲ ಎಂದರು.

Ashwath Narayan 2 2 medium

ಮೋದಿ ಬರುವ ತನಕ ನಮ್ಮ ದೇಶದಲ್ಲಿ ಒಂದು ವೇಂಟಿಲೇಟರ್ ತಯಾರಾಗುತ್ತಿರಲಿಲ್ಲ. ಮಾಸ್ಕ್, ಸ್ಯಾನಿಟೈರ್, ಪಿಪಿಇ ಕಿಟ್ ಇರಲಿಲ್ಲ. ಪ್ರತಿಯೊಂದಕ್ಕೂ ಇನ್ನೊಂದು ದೇಶವನ್ನು ಅವಲಂಬಿಸಬೇಕಾದ ಅನಿವಾರ್ಯತೆ ಇತ್ತು. ಈಗ ಕೇವಲ ಒಂದೇ ವರ್ಷದಲ್ಲಿ ಸಂಪೂರ್ಣ ಸ್ವಾವಲಂಬನೆ ಸಾಧಿಸಿದ್ದೇವೆ. ಅಷ್ಟೇ ಏಕೆ? ಆಮ್ಲಜನಕ ಸಾಂದ್ರಕಗಳನ್ನೂ ಈಗ ಆತ್ಮನಿರ್ಭರ್ ಭಾರತ ಕಲ್ಪನೆಯಡಿ ನಮ್ಮಲ್ಲಿಯೇ ತಯಾರು ಮಾಡಿಕೊಳ್ಳುತ್ತಿದ್ದೇವೆ ಎಂದರೆ ಹುಡುಗಾಟಿಕೆ ಅಲ್ಲ ಎಂದು ಅವರು ನುಡಿದರು.

Ashwath Narayan 1 1 medium

ಇಡೀ ದಿನದ ಕಾರ್ಯಕ್ರಮಗಳಲ್ಲಿ ಮಾಜಿ ಶಾಸಕ ಮುನಿರಾಜು, ಪಕ್ಷದ ಮಂಡಲಾಧ್ಯಕ್ಷ ಲೊಕೇಶ್, ಅರಮನೆ ನಗರ ವಾರ್ಡಿನ ಬಿಬಿಎಂಪಿ ಮಾಜಿ ಸದಸ್ಯೆ ಸುಮಂಗಲ ಕೇಶವ್, ಮತ್ತೀಕೆರೆ ಬಿಬಿಎಂಪಿ ಮಾಜಿ ಸದಸ್ಯ ಜಯಪ್ರಕಾಶ್, ಅದೇ ವಾರ್ಡಿನ ಪಕ್ಷ ಅಧ್ಯಕ್ಷ ಪ್ರೇಮ್ ಕುಮಾರ್, ಪಕ್ಷದ ಕಾರ್ಯಕರ್ತರು ಡಿಸಿಎಂ ಜತೆಯಲ್ಲಿದ್ದರು.

TAGGED:Ashwaththa NarayanBangaloreCovid 19Public TVಅಶ್ವತ್ಥ ನಾರಾಯಣ್ಕೋವಿಡ್ 19ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Bangladesh Election Results 2
Latest

ಫೆ.17 ರಂದು ಬಾಂಗ್ಲಾ ನೂತನ ಪ್ರಧಾನಿಯಾಗಿ ತಾರಿಕ್ ರೆಹಮಾನ್ ಪ್ರಮಾಣ ಸ್ವೀಕಾರ – ಮೋದಿಗೆ ಆಹ್ವಾನ

Public TV
By Public TV
3 minutes ago
five youths die in horrific road accident in bengaluru
Bengaluru Rural

ಬೆಂಗಳೂರು | ಡಿವೈಡರ್‌ ಹಾರಿ ಬಸ್‌ಗೆ ಡಿಕ್ಕಿಯಾದ ಕಾರು – ಐವರು ದುರ್ಮರಣ

Public TV
By Public TV
13 minutes ago
TAMBITTU 1
Food

ಶಿವನಿಗೆ ಪ್ರಿಯವಾದ ತಂಬಿಟ್ಟು ಹೀಗೆ ಮಾಡಿ!

Public TV
By Public TV
15 minutes ago
Karnataka Student Missing In California
Crime

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶವವಾಗಿ ಪತ್ತೆ

Public TV
By Public TV
25 minutes ago
Ind vs Pak
Cricket

T20 World Cup 2026: ಇಂಡೋ-ಪಾಕ್‌ ಕದನ ಯಾವಾಗಲೂ ಏಕೆ ರಣಕಣ? – ನೆನಪಿದೆಯಾ ಆ ಕರಾಳ ದಿನಗಳು?

Public TV
By Public TV
36 minutes ago
India vs Pakistan shake hands row
Cricket

ಇಂದು ಭಾರತ vs ಪಾಕ್‌ ಕದನ – ಶತಕೋಟಿ ಭಾರತೀಯರಿಗೆ ಶಿವರಾತ್ರಿ ಗಿಫ್ಟ್‌ ಕೊಡಲು ಟೀಂ ಇಂಡಿಯಾ ರೆಡಿ

Public TV
By Public TV
58 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?