– ಸಂಚಾರಿ ಕೋವಿಡ್ ಆಸ್ಪತ್ರೆ ಬಸ್‍ಗಳು ಇಂದಿನಿಂದ ಕಾರ್ಯಾರಂಭ
ರಾಯಚೂರು: ಜಿಲ್ಲೆಯಲ್ಲಿನ ಕೋವಿಡ್ ಸೋಂಕಿತರು ಹಾಗೂ ರಿಮ್ಸ್ ಆಸ್ಪತ್ರೆ ರೋಗಿಗಳ ಆಮ್ಲಜನಕ ಕೊರತೆ ನೀಗಿಸಲು ಸಿದ್ದಪಡಿಸಿದ್ದ 20 ಕೆ.ಎಲ್. ಆಮ್ಲಜನಕ ಪ್ಲಾಂಟ್ ಇಂದು ಲೋಕಾರ್ಪಣೆಯಾಗಿದೆ. ನಗರದ ರಿಮ್ಸ್ ಆಸ್ಪತ್ರೆ ಆವರಣದಲ್ಲಿ ಸ್ಥಾಪಿಸಲಾದ ಘಟಕವನ್ನು ಉಪಮುಖ್ಯಮಂತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಉದ್ಘಾಟನೆ ಮಾಡಿದರು.
ಸಾರಿಗೆ ಇಲಾಖೆಯ ಮೂರು ಬಸ್‍ಗಳನ್ನು ಸಂಚಾರಿ ಕೋವಿಡ್ ಚಿಕಿತ್ಸಾ ಕೇಂದ್ರಗಳನ್ನಾಗಿ ಪರಿವರ್ತಿಸಲಾಗಿದ್ದು, ಕೋವಿಡ್ ಮೊಬೈಲ್ ಆಸ್ಪತ್ರೆಗೆ ಸಾರಿಗೆ ಸಚಿವರಾಗಿರುವ ಲಕ್ಷ್ಮಣ ಸವದಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಚಾಲನೆ ನೀಡಿದರು. ಇದನ್ನು ಓದಿ: ಮುಳಬಾಗಿಲು ಪಟ್ಟಣದಲ್ಲಿ ಸುಸಜ್ಜಿತ ಕೋವಿಡ್ ಕೇರ್ ಆಸ್ಪತ್ರೆ ಉದ್ಘಾಟಿಸಿದ ಡಿಸಿಎಂ
ಪ್ರತಿ ಬಸ್‍ನಲ್ಲಿ 4 ಬೆಡ್ ಹಾಗೂ ಸೋಂಕಿತರು ಕುಳಿತುಕೊಂಡು ಆಕ್ಸಿಜನ್ ಪಡೆಯಲು 4 ಸೀಟ್ ವ್ಯವಸ್ಥೆ ಮಾಡಲಾಗಿದೆ. ಬಸ್‍ನಲ್ಲಿ 5 ಆಕ್ಸಿಜನ್ ಸಿಲಿಂಡರ್, ವೆಂಟಿಲೇಟರ್, ಆಕ್ಸಿಜನ್ ಕಾನ್ಸಂಟ್ರೇಟರ್ ವ್ಯವಸ್ಥೆಯಿದೆ. ಈ ಮೂರು ಬಸ್ ಗಳನ್ನ ಜಿಲ್ಲೆಯ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ, ತಾಲೂಕು ಆಸ್ಪತ್ರೆ ಮುಂದೆ ನಿಲ್ಲಿಸಲಾಗುತ್ತಿದೆ.
ಜಿಲ್ಲಾ ಭೇಟಿಯಲ್ಲಿರುವ ಡಿಸಿಎಂ ಕೋವಿಡ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೋವಿಡ್ ನಿಯಂತ್ರಣ ಹಿನ್ನೆಲೆ ಜಿಲ್ಲಾಡಳಿತದ ಕ್ರಮಗಳ ಕುರಿತಾಗಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಮಾರಂಭದಲ್ಲಿ ಸಂಸದ ರಾಜಾ ಅಮರೇಶ್ವರ ನಾಯಕ್, ರಾಯಚೂರು ನಗರ ಶಾಸಕ ಡಾ. ಶಿವರಾಜ್ ಪಾಟೀಲ್ ಡಿಸಿಎಂ ಲಕ್ಷ್ಮಣ ಸವದಿ ಜೊತೆ ಪಾಲ್ಗೊಂಡಿದ್ದರು. ಇದನ್ನು ಓದಿ:ಜಿಲ್ಲೆಗಳಲ್ಲಿ ಕೇಸ್ ಇಳಿಕೆಯಾದ್ರೂ, ಸಾವಿನ ಪ್ರಮಾಣ ಇಳಿಕೆ ಇಲ್ಲ – ವಾರ್ ರೂಮ್ ಡೆತ್ ರಿಪೋರ್ಟ್