ಬಿಜೆಪಿ ಶಾಸಕ ಸಿಎಂ ಉದಾಸಿ ನಿಧನ

Public TV
1 Min Read
cm udasi

ಬೆಂಗಳೂರು:  ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ(81) ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಉದಾಸಿ  ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಹಾನಗಲ್‍ನಲ್ಲಿ ನಾಳೆ ಉದಾಸಿ ಅವರ ಅಂತ್ಯಸಂಸ್ಕಾರ ನಡೆಯಲಿದೆ.

ಈ ಹಿಂದೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದರು.

cm udasi 1 medium
ಸಿಎಂ ಸಂತಾಪ: ಹಿರಿಯ ಶಾಸಕ ಸಿ.ಎಂ.ಉದಾಸಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿ.ಎಂ.ಉದಾಸಿಯವರು ಸಜ್ಜನ ಹಾಗೂ ಕ್ರಿಯಾಶೀಲ ರಾಜಕಾರಣಿ. ಲೋಕೋಪಯೋಗಿ ಸಚಿವರಾಗಿಯೂ ಅತ್ಯಂತ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಅಭಿವೃದ್ಧಿ ಪರ ಚಿಂತಕರಾಗಿದ್ದ ಅವರು ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸಿ, ಆ ಭಾಗದಲ್ಲಿ ಮಾತ್ರವಲ್ಲದೆ ರಾಜ್ಯದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ಅವರ ನಿಧನದಿಂದ ಅಪರೂಪದ ನೇತಾರರೊಬ್ಬರನ್ನು ನಾಡು ಕಳೆದುಕೊಂಡಂತಾಗಿದೆ.

ಅವರ ಆತ್ಮಕ್ಕೆ ಸದ್ಗತಿ ದೊರೆಯಲಿ. ಭಗವಂತ ಅವರ ಕುಟುಂಬದವರಿಗೆ ಹಾಗೂ ಅಪಾರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *