ವಿದೇಶಗಳಲ್ಲಿ ಓದುವ ಕನ್ನಡಿಗ ವಿದ್ಯಾರ್ಥಿಗಳು, ಉದ್ಯೋಗಸ್ಥರಿಗೆ ಶುಕ್ರವಾರದವರೆಗೆ ಲಸಿಕೆ: ಡಿಸಿಎಂ

Public TV
1 Min Read
ashwath narayan 1

– 2ನೇ ಡೋಸ್ ಅಂತರ 4-6 ವಾರಕ್ಕೆ ಕುಗ್ಗಿಸಲು ಕೇಂದ್ರ ಸಮ್ಮತಿ

ಬೆಂಗಳೂರು: ವಿದೇಶಗಳಲ್ಲಿ ವ್ಯಾಸಂಗ ಮಾಡುತ್ತಿರುವ ರಾಜ್ಯದ ವಿದ್ಯಾರ್ಥಿಗಳು, ಉದ್ಯೋಗ ಮಾಡುವವರಿಗೆ ನಗರದ ಸೆಂಟ್ರಲ್ ಕಾಲೇಜ್ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶೇಷ ಲಸಿಕೆ ಅಭಿಯಾನವು ಜೂನ್ 11 ರ ವರೆಗೂ ನಡೆಯಲಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

vaccine medium

ಈ ಬಗ್ಗೆ ಮಂಗಳವಾರ ಹೇಳಿಕೆ ನೀಡಿರುವ ಆವರು, ಕಳೆದ ಮಂಗಳವಾರದಿಂದ ಅರಂಭಿಸಲಾದ ಈ ವ್ಯಾಕ್ಸಿನೇಷನ್ ಕ್ಯಾಂಪ್‍ನಲ್ಲಿ ಈವರೆಗೆ 1,200 ಜನರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಗಿದೆ. ಇಂದು ಕೂಡ 50 ಜನ ಬಂದು ಲಸಿಕೆ ಪಡೆದಿದ್ದಾರೆ. ಶುಕ್ರವಾರ ಸಂಜೆಯೊಳಗೆ ವಿದೇಶಕ್ಕೆ ಹೋಗುವವರು ಇದ್ದರೆ ಬಂದು ಲಸಿಕೆ ತೆಗೆದುಕೊಳ್ಳಬಹುದು ಎಂದರು ಅವರು ಕೋರಿದ್ದಾರೆ.

ashwathnarayan 4

ಆದ್ಯತಾ ಗುಂಪಿನ ಕೋಟಾದಲ್ಲಿ ಇವರೆಲ್ಲರಿಗೂ ಲಸಿಕೆ ಕೊಡಲಾಗಿದ್ದು, 2ನೇ ಡೋಸ್ ನೀಡುವ ದಿನಾಂಕವನ್ನು ಶೀಘ್ರವೇ ತಿಳಿಸಲಾಗುವುದು. ಈವರೆಗೆ ನೀಡಲಾಗುವ ಎರಡನೇ ಡೋಸ್ ಅವಧಿಯನ್ನು 4ರಿಂದ 6 ವಾರಗಳಿಗೆ ಕುಗ್ಗಿಸುವ ರಾಜ್ಯದ ಕ್ರಮಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ಸೂಚಿಸಿದೆ. ಈ ಬಗ್ಗೆ ರಾಜ್ಯ ಸರಕಾರ ಪತ್ರ ಬರೆದು ಮನವಿ ಮಾಡಿತ್ತು ಎಂದು ಅವರು ಮಾಹಿತಿ ನೀಡಿದ್ದಾರೆ.

vaccine 1 1 medium

ಜಿಲ್ಲೆಗಳ್ಲಲೂ ಇವರಿಗೆ ಲಸಿಕೆ:
ಬೆಂಗಳೂರಿನಲ್ಲಿ ಈ ಲಸಿಕೆ ಶಿಬಿರ ಯಶಸ್ವಿಯಾದ ಬೆನ್ನಲ್ಲೇ ಎಲ್ಲ ಜಿಲ್ಲೆಗಳಲ್ಲಿಯೂ ವಿದೇಶಗಳಲ್ಲಿ ವ್ಯಾಸಂಗ ಮತ್ತು ಉದ್ಯೋಗ ಮಾಡುವ ಕನ್ನಡಿಗರಿಗೆ ಇದೇ ರೀತಿಯ ಲಸಿಕೆ ಅಭಿಯಾನ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *