ವಲಸಿಗ ಮುಸ್ಲಿಮರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕು – ಅಸ್ಸಾಂ ಸಿಎಂ

Public TV
1 Min Read
Himant biswa 2

ದಿಸ್ಪುರ: ವಲಸಿಗ ಅಲ್ಪಸಂಖ್ಯಾತರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸಲಹೆ ನೀಡಿದ್ದಾರೆ.

ಅಸ್ಸಾಂ ಸರ್ಕಾರಕ್ಕೆ 1 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳದಿಂದಾಗಿ ಅಲ್ಪಸಂಖ್ಯಾತರಲ್ಲಿ ಬಡತನ ಹೆಚ್ಚಾಗುತ್ತಿದೆ. ಹೀಗಾಗಿ ಬಡತನವನ್ನು ಕಡಿಮೆ ಮಾಡಲು ಸಮುದಾಯದ ಜನ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

Himant biswa arabanand

ನಾವು ಈಗಾಗಲೇ ಕಳೆದ ವಿಧಾನಸಭೆ ಅಧಿವೇಶನದಲ್ಲಿ ಜನಸಂಖ್ಯಾ ನೀತಿಯನ್ನು ಜಾರಿಗೆ ತಂದಿದ್ದೇವೆ. ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು ನಾವು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದೊಂದಿಗೆ ಕೆಲಸ ಮಾಡಲು ಬಯಸುತ್ತೇವೆ ಎಂದು ಅವರು ಹೇಳಿದರು.

ನಮ್ಮ ಸರ್ಕಾರ ಸಮುದಾಯದ ಮಹಿಳೆಯರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಇದರಿಂದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು ಎಂದು ಶರ್ಮಾ ಹೇಳಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಮದರಸಾ, ಸಂಸ್ಕೃತ ಶಾಲೆಗಳು ಬಂದ್

ನಾವು ಜನಸಂಖ್ಯೆಯನ್ನು ನಿಯಂತ್ರಿಸಿದರೆ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

Share This Article
Leave a Comment

Leave a Reply

Your email address will not be published. Required fields are marked *