ನಾಯಕತ್ವ ಬದಲಾವಣೆ ವಿಚಾರ ಕೋವಿಡ್ ಗಿಂತಲೂ ಅಪಾಯಕಾರಿ: ಮುರುಘಾ ರಾಜೇಂದ್ರಸ್ವಾಮೀಜಿ

Public TV
1 Min Read
murugarajendra swamiji Shivamogga

ಶಿವಮೊಗ್ಗ: ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ವಿಚಾರ ಕೇಳಿ ಬರುತ್ತಿದೆ. ಈ ನಾಯಕತ್ವ ಬದಲಾವಣೆ ವಿಚಾರ ಕೊರೊನಾಗಿಂತ ಅಪಾಯಕಾರಿ ಎಂದು ಬೆಕ್ಕಿನ ಕಲ್ಮಠದ ಮುರುಘಾ ರಾಜೇಂದ್ರ ಸ್ವಾಮೀಜಿಯವರು ಹೇಳಿದ್ದಾರೆ.

murugarajendra swamiji Shivamogga4 medium

ಜಿಲ್ಲೆಯ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಮಠಕ್ಕೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಭೇಟಿ ಕೊಟ್ಟ ಸಂದರ್ಭದಲ್ಲಿ ಮಾತನಾಡಿದ ಸ್ವಾಮೀಜಿಯವರು, ಕರ್ನಾಟಕಕ್ಕೆ ಎಂತಹ ನಾಯಕತ್ವ ಬೇಕು ಎಂಬುದನ್ನು ಜನತೆ ನಿರ್ಧರಿಸಬೇಕು. ನಾಯಕತ್ವಕ್ಕೆ ಅಡೆತಡೆ ತರುವ ಕೆಲಸವನ್ನು ಯಾರೂ ಮಾಡಬಾರದು. ಅಂತಹ ಕೆಲಸವನ್ನು ಯಾರಾದರೂ ಮಾಡಿದರೆ ತಮ್ಮ ತಲೆಯ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಂಡ ಹಾಗೆ ಎಂದು ಎಚ್ಚರಿಕೆಯನ್ನು ನೀಡಿದ್ದಾರೆ. ಇದನ್ನೂ ಓದಿ: ವರ್ಲ್ಡ್​ ಚೆಸ್ ಚಾಂಪಿಯನ್ ಜೊತೆಗೆ ಕಿಚ್ಚನ ಆಟ
murugarajendra swamiji Shivamogga9 mediumಯಡಿಯೂರಪ್ಪ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರವಾಹ ಎದುರಾಯಿತು. ಈ ಪ್ರವಾಹವನ್ನು ಒಬ್ಬರೇ ಎದುರಿಸಿದರು. ಪ್ರವಾಹ ಮುಗಿಯಿತು ಎನ್ನುವಷ್ಟರಲ್ಲಿ ಕೊರೊನಾ ಎದುರಾಗಿದೆ. ಕೊರೊನಾ ಮಹಾಮಾರಿಯನ್ನು ತಡೆಗಟ್ಟಲು ಮುಖ್ಯಮಂತ್ರಿ ಯಡಿಯೂರಪ್ಪ ಸಮರ್ಥವಾಗಿ ನಿಭಾಯಿಸುತ್ತಿದ್ದಾರೆ. ಬೇರೆ ಯಾರಾದರೂ ಆಗಿದ್ದರೆ ಧೃತಿಗೆಟ್ಟು ಹೋಗುತ್ತಿದ್ದರು. ಬೇರೆ ಯಾರಿಂದಲೂ ಇಂತಹ ಸಂಕಷ್ಟ ಎದುರಿಸಲು ಸಾಧ್ಯವಾಗುತ್ತಿರಲಿಲ್ಲ. ಆದರೆ ಯಡಿಯೂರಪ್ಪ ಅವರು ಹೋರಾಟದ ಹಿನ್ನೆಲೆಯಿಂದ ಬಂದವರು ಈಗಾಗಿಯೇ ಎಲ್ಲವನ್ನು ಸಮರ್ಥವಾಗಿ ಎದುರಿಸುತ್ತಿದ್ದಾರೆ ಎಂದಿದ್ದಾರೆ.  ಇದನ್ನೂ ಓದಿ: ರೋಹಿಣಿ ಸಿಂಧೂರಿ ಕೆಲಸಗಾತಿ ಅಲ್ಲ, ಪ್ರಚಾರ ಪ್ರಿಯೆ ಅಂತ ಹೇಳೋಕೆ ಬಂದೆ: ಎ. ಮಂಜು

murugarajendra swamiji Shivamogga0 medium

ರಾಜ್ಯದ ರೈತರಿಗೆ, ಮಠ ಮಾನ್ಯಗಳಿಗೆ ದೇಣಿಗೆ ನೀಡಿದ ಮುಖ್ಯಮಂತ್ರಿ ಇದ್ದರೆ ಅದು ಯಡಿಯೂರಪ್ಪ ಮಾತ್ರ. ಯಡಿಯೂರಪ್ಪ ಅವರು ಉತ್ತಮವಾಗಿ ಕೆಲಸ ಮಾಡುತ್ತಾರೆ ಎಂದು ಜನರು ಅವರನ್ನು ನೆನಪಿಸಿಕೊಳ್ಳುತ್ತಾರೆ. ಕೆಲಸ ಮಾಡದಿದ್ದರೆ ಯಾರು ನೆನಪಿಸಿಕೊಳ್ಳುತ್ತಾರೆ, ಅವರ ಮುಂದೆ ಏನು ಹೇಳುವುದಕ್ಕೆ ಸಾಧ್ಯವಾಗುತ್ತದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *