Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಿಮ್ಮ ಜೇಬು ತುಂಬಿದ್ರೆ ಸಾಕೆ?, ಬಡವರ ಸ್ಥಿತಿ ಏನಾಗ್ಬೇಕು?: ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chitradurga | ನಿಮ್ಮ ಜೇಬು ತುಂಬಿದ್ರೆ ಸಾಕೆ?, ಬಡವರ ಸ್ಥಿತಿ ಏನಾಗ್ಬೇಕು?: ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ

Chitradurga

ನಿಮ್ಮ ಜೇಬು ತುಂಬಿದ್ರೆ ಸಾಕೆ?, ಬಡವರ ಸ್ಥಿತಿ ಏನಾಗ್ಬೇಕು?: ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಪ್ರಶ್ನೆ

Public TV
Last updated: June 12, 2021 1:26 pm
Public TV
Share
3 Min Read
DKSHI 3
SHARE

ಹಿರಿಯೂರು(ಚಿತ್ರದುರ್ಗ): ಸರ್ಕಾರದ ಬೊಕ್ಕಸ ತುಂಬಿದರೆ ಸಾಕೇ..? ಬಡವರು, ಜನಸಾಮಾನ್ಯರು ಜೀವನ ನಡೆಸುವುದು ಹೇಗೆ? ಅವರ ಪರಿಸ್ಥಿತಿ ಏನಾಗಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಕೇಂದ್ರ ಹಾಗೂ ರಾಜ್ಯ ಸರ್ಕಾರವನ್ನು ಪ್ರಶ್ನಿಸಿದ್ದಾರೆ.

ಇಂಧನ ತೈಲ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಐದು ದಿನಗಳ ಕಾಲ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘100 ನಾಟ್ ಔಟ್’ ಆಂದೋಲನ ಭಾಗವಾಗಿ ಶಿವಕುಮಾರ್ ಅವರು ಚಿತ್ರದುರ್ಗದ ಹಿರಿಯೂರು ತಾಲೂಕು ಕೇಂದ್ರದಲ್ಲಿ ಶನಿವಾರ ಪ್ರತಿಭಟನೆಯಲ್ಲಿ ಪಾಲ್ಗೊಂಡರು.

CTD 1 1 medium

ಈ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಅವರು ಸರ್ಕಾರದ ವಿರುದ್ಧ ಹರಿಹಾಯ್ದರು. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಮಾಡುತ್ತಿರುವ ಐದು ದಿನಗಳ ಪ್ರತಿಭಟನಾ ಆಂದೋಲನ ಭಾಗವಾಗಿ ಹಿರಿಯೂರು ತಾಲೂಕು ಕೇಂದ್ರಕ್ಕೆ ಇಂದು ಆಗಮಿಸಿದ್ದೇನೆ. ನಿನ್ನೆ ರಾಜ್ಯ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಮಾಡಿದ್ದು, ಇಂದು ತಾಲೂಕು ಕೇಂದ್ರಗಳಲ್ಲಿ, ನಾಳೆ ಹೋಬಳಿ ಹಾಗೂ ಜಿಲ್ಲಾ ಪಂಚಾಯಿತಿ ಕೇಂದ್ರಗಳಲ್ಲಿ, ನಾಡಿದ್ದು ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿ, ಉಳಿದ ಕೇಂದ್ರಗಳಲ್ಲಿ 15ರಂದು ಪ್ರತಿಭಟನೆ ಮಾಡುತ್ತೇವೆ. ಐದು ದಿನ ಐದು ಸಾವಿರ ಪೆಟ್ರೋಲ್ ಬಂಕ್ ಗಳಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ. ಇದು ಒಬ್ಬರ ಕಾರ್ಯಕ್ರಮ ಅಲ್ಲ. ಕಾಂಗ್ರೆಸ್ ಕಾರ್ಯಕ್ರಮ ಅಲ್ಲ. ಇದು ಜನತಾದಳ, ಬಿಜೆಪಿ ಹಾಗೂ ಎಲ್ಲ ಜನರ ಕಾರ್ಯಕ್ರಮ ಅಂತ ತಿಳಿಸಿದರು.

CTD 1 2 medium

ಬಿಜೆಪಿಯವರೇ ಕಲಿಸಿದ ಪಾಠವಿದು:
ಬಿಜೆಪಿಯವರು ಈ ಹಿಂದೆ ಇದೇ ಕೆಲಸ ಮಾಡಿದ್ದರಲ್ಲ, ಅವರು ಪ್ರತಿಭಟನೆ ಮಾಡಿದ್ದನ್ನು ನಾವು ಈಗ ಮುಂದುವರಿಸುತ್ತಿದ್ದೇವೆ. ಅವರು ಪೆಟ್ರೋಲ್ ಬೆಲೆ 52 ರೂ. ತಲುಪಿದಾಗ ದೊಡ್ಡ ಹೋರಾಟ ಮಾಡಿದ್ದರು. ಈಗ 100 ರೂ. ಆಗಿದೆ. ಪೆಟ್ರೋಲ್ ಮೇಲೆ 62 ರೂ. ತೆರಿಗೆ ವಿಧಿಸಲಾಗಿದೆ. ಇದೊಂದೇ ವರ್ಷ ತಿಂಗಳಿಗೆ ಸರಾಸರಿ 18 ಬಾರಿಯಂತೆ ಬೆಲೆ ಹೆಚ್ಚಿಸಲಾಗಿದೆ. ಆ ಮೂಲಕ ಇಂಧನ ತೈಲ ಬೆಲೆಯಲ್ಲಿ ಶತಕ ಬಾರಿಸಿದೆ. ಇದಕ್ಕಾಗಿ ಹಲವೆಡೆ ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಕೆಲವೆಡೆ ತಮಟೆ, ಜಾಗಟೆ ಹೊಡೆದು ಪ್ರತಿಭಟನೆ ಮಾಡುತ್ತಿದ್ದಾರೆ. ಬಿಜೆಪಿಯವರೇ ಇದನ್ನೆಲ್ಲ ನಮಗೆ ಹೇಳಿಕೊಟ್ಟರು ಎಂದರು ಹೇಳಿದರು.

DKSHI 6

ಪೆಟ್ರೋಲ್ ಡೀಸೆಲ್ ಬೆಲೆ ಇಷ್ಟು ಬಾರಿ ಹೆಚ್ಚಳ ಮಾಡಿದ್ದೀರಲ್ಲಾ, ರೈತರ ಬೆಂಬಲ ಬೆಲೆ ಎಷ್ಟು ಬಾರಿ ಹೆಚ್ಚಿಸಿದ್ದೀರಿ? ರೈತನ ಎಲ್ಲ ಬೆಳೆಯ ಬೆಲೆಯನ್ನು ಎಷ್ಟು ಬಾರಿ ಹೆಚ್ಚಿಸಿದ್ದೀರಿ? ದಿನಗೂಲಿ, ಖಾಸಗಿ ಕಾರ್ಮಿಕರು, ನೌಕರರು, ನರೇಗಾ ಕಾರ್ಮಿಕರ ವೇತನ ಎಷ್ಟು ಬಾರೀ ಹೆಚ್ಚಿಸಿದ್ದೀರಿ? ಎಂದು ಯಡಿಯೂರಪ್ಪ ಹಾಗೂ ಮೋದಿ ಅವರನ್ನು ಕೇಳಲು ಬಯಸುತ್ತೇನೆ ಎಂದರು.

CTD 1 3 medium

ಎಲ್ಲ ಸೇರಿ ಸರ್ಕಾರ ಕಿತ್ತೊಗೆಯಬೇಕು:
ನಿಮ್ಮ ಜೇಬು ಮಾತ್ರ ತುಂಬಬೇಕಾ? ಬಡವರು ಏನು ಮಾಡಬೇಕು? ಇದಕ್ಕಾಗಿ ನಾವು ಹೋರಾಟ ಮಾಡುತ್ತಿದ್ದೇವೆ. ಬಿಜೆಪಿ, ದಳದವರು ಹಾಗೂ ಜನ ಸಾಮಾನ್ಯರು ಎಲ್ಲ ಸೇರಿ ಈ ಸರ್ಕಾರ ಕಿತ್ತೊಗೆಯಬೇಕು. ಹೀಗಾಗಿ ದೇಶದ ಉದ್ದಗಲಕ್ಕೂ ಈ ಪ್ರತಿಭಟನೆ ಮಾಡಲಾಗುತ್ತಿದೆ. ನಮ್ಮ ಕಾರ್ಯಕ್ರಮವನ್ನು ನಮ್ಮ ನಾಯಕರು ಜೂಮ್ ಮೂಲಕ ಪರಿಶೀಲಿಸುತ್ತಿದ್ದಾರೆ. ಅವರಿಗೆ ಜವಾಬ್ದಾರಿ ನೀಡಿದ್ದೇವೆ. ಹೀಗೆ ಮುಂದಿನ ದಿನಗಳಲ್ಲೂ ಜನರ ಸಮಸ್ಯೆಗಳಿಗೆ ನಾವು ಧ್ವನಿಯಾಗುತ್ತೇವೆ. ಅದಕ್ಕೆ ಬೇಕಾದ ಕಾರ್ಯಕ್ರಮ ರೂಪಿಸುತ್ತೇವೆ ಎಂದರು.

DKSHI 2 3

ಹೆಣ ಸುಡಲು ಕ್ಯೂ:
ರಾಜ್ಯದಲ್ಲಿ ಹೆಣ ಸುಡಲು ಕ್ಯೂ ನಿಲ್ಲಬೇಕಾದ ಸ್ಥಿತಿ ನಿರ್ಮಾಣವಾಯ್ತಲ್ಲ, ಬೆಡ್ ಪಡೆಯಲು, ಆಂಬುಲೆನ್ಸ್ ಸೇವೆಗೆ, ಔಷಧಿ, ಲಸಿಕೆಗೂ ಕ್ಯೂ ಆಯ್ತಲ್ಲ. ಅವರ ಆಡಳಿತಕ್ಕೆ ಇಸಕ್ಕಿಂಥ ಬೇರೆ ಸಾಕ್ಷಿ ಬೇಕೇ? ಔಷಧಿ, ಹಾಸಿಗೆ, ಲಸಿಕೆ ಎಲ್ಲದರಲ್ಲೂ ಹಣ ಮಾಡುತ್ತಿದ್ದಾರೆ. ಅವರೇ ಕಾಯಿಲೆ ತಂದವರು. ಈಗ ಏನು ಮಾಡಿದ್ದಾರೆ? ಜನ ಈ ಸರ್ಕಾರಕ್ಕೆ ಉಗಿಯುತ್ತಿದ್ದಾರೆ. ಸರ್ಕಾರದ ನಾಯಕತ್ವ ಬದಲಾವಣೆ ವಿಚಾರವಾಗಿ ಯಾವ ಸಿನಿಮಾ ತೋರಿಸುತ್ತಾರೋ ನಾವು ನೋಡುತ್ತೇವೆ ಎಂದು ವಾಗ್ದಾಳಿ ನಡೆಸುತ್ತಿದ್ದಾರೆ.

TAGGED:bjpChitradurgacongressDK ShivakumarpetrolPublic TVಕಾಂಗ್ರೆಸ್ಚಿತ್ರದುರ್ಗಡಿಕೆ ಶಿವಕುಮಾರ್ಪಬ್ಲಿಕ್ ಟಿವಿಪೆಟ್ರೋಲ್ಬಿಜೆಪಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Chikkodi suicide
Belgaum

ಗಂಡನ ಕಿರುಕುಳಕ್ಕೆ ಬೇಸತ್ತು ಪತ್ನಿ ಆತ್ಮಹತ್ಯೆ – ಪತಿ ವಿರುದ್ಧ ಕೊಲೆ ಆರೋಪ

Public TV
By Public TV
4 minutes ago
Siddaramaiah 1 7
Bengaluru City

ಬೌರಿಂಗ್‌ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿ – ಕಾರ್ಯಪಾಲಕ ಎಂಜಿನಿಯರ್‌ ಅಮಾನತ್ತಿಗೆ ಸಿಎಂ ಆದೇಶ

Public TV
By Public TV
25 minutes ago
IPL 2026 Riyan Parag Caught Vaping In Rajasthan Royals Dressing Room As Fresh Controversy
Cricket

ಡ್ರೆಸ್ಸಿಂಗ್‌ ರೂಮ್‌ನಲ್ಲೇ ವೇಪಿಂಗ್‌ – ರಿಯಾನ್‌ ಪರಾಗ್‌ಗೆ ಪಂದ್ಯ ಶುಲ್ಕದ 25% ದಂಡ, 1 ಡೀಮೆರಿಟ್ ಪಾಯಿಂಟ್

Public TV
By Public TV
56 minutes ago
MC SUDHAKAR
Bengaluru City

ಹಿಜಬ್‌, ಜನಿವಾರದಿಂದ ಸಮಸ್ಯೆಗೊಳಗಾದ ಪರೀಕ್ಷಾರ್ಥಿಗಳಿಗೆ ಸಿಟಿಇ ಮರುಪರೀಕ್ಷೆ: ಎಂ.ಸಿ ಸುಧಾಕರ್‌

Public TV
By Public TV
1 hour ago
SUPREME COURT
Latest

ಅವಳ ನೋವು, ಅವಮಾನ ಊಹಿಸಿ – ಅತ್ಯಾಚಾರ ಕೇಸಲ್ಲಿ 20 ವಾರ ಮೀರಿದ ಗರ್ಭಪಾತಕ್ಕೆ ಅವಕಾಶ ನೀಡಿ: ಕೇಂದ್ರಕ್ಕೆ ಸುಪ್ರೀಂ ತರಾಟೆ

Public TV
By Public TV
1 hour ago
Google Gemini Misused in AI Deepfake Loan Scam Ahmedabad Police Expose Aadhaar OTP Bypass four arrested Cyber Crime
Crime

ಒಟಿಪಿ ಬರಲ್ಲ ಆದ್ರೂ ಬ್ಯಾಂಕ್‌ ಖಾತೆ ಓಪನ್‌| AI, ಡೀಪ್‌ಫೇಕ್‌ ಬಳಸಿ ಆಧಾರ್‌ ಬೈಪಾಸ್‌ – ಕೊನೆಗೂ ಹೈಟೆಕ್‌ ಕಳ್ಳರು ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?