Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್‍ನವರು ಚೀನಾ, ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ: ನಳಿನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕಾಂಗ್ರೆಸ್‍ನವರು ಚೀನಾ, ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ: ನಳಿನ್

Bengaluru City

ಕಾಂಗ್ರೆಸ್‍ನವರು ಚೀನಾ, ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿದ್ದಾರೆ: ನಳಿನ್

Public TV
Last updated: June 12, 2021 10:35 pm
Public TV
Share
3 Min Read
Nalin Kumar Kateel
SHARE

ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಮತ್ತೆ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಜಮ್ಮು ಕಾಶ್ಮೀರಕ್ಕೆ 370ನೇ ವಿಧಿಯಡಿ ವಿಶೇಷ ಸ್ಥಾನಮಾನ ಕೊಡುವ ಮಾತನ್ನಾಡಿದ್ದಾರೆ. ಇದು ಕಾಂಗ್ರೆಸ್ ಟೂಲ್‍ಕಿಟ್‍ನ ಇನ್ನೊಂದು ಭಾಗವಾಗಿದೆ. ಕಾಂಗ್ರೆಸ್ ಪಕ್ಷ ಮತ್ತು ಅದರ ಮುಖಂಡರು ಚೀನಾ ಹಾಗೂ ಪಾಕಿಸ್ತಾನದ ಏಜೆಂಟರಂತೆ ವರ್ತಿಸುತ್ತಿರುವುದು ಇದರಿಂದ ಸ್ಪಷ್ಟಗೊಳ್ಳುತ್ತದೆ. ಕಾಂಗ್ರೆಸ್‍ನ ಈ ದುರುದ್ದೇಶ ಫಲ ಕೊಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಕಿಡಿಕಾರಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಪ್ರತಿಷ್ಠೆ ಮಣ್ಣು ಪಾಲು ಮಾಡುವುದು, ವಿಶ್ವವಂದ್ಯ ಪ್ರಧಾನಿಯವರ ಘನತೆಗೆ ಧಕ್ಕೆ ತರುವ ದುರುದ್ದೇಶ ಇದರ ಹಿಂದಿದೆ. ಟೂಲ್‍ಕಿಟ್ ವಿಷಯದಲ್ಲಿ ಬಿಜೆಪಿ ಈಗಾಗಲೇ ಕಾಂಗ್ರೆಸ್ಸಿಗರ ದುರುದ್ದೇಶವನ್ನು ಜನರ ಗಮನಕ್ಕೆ ತಂದಿದೆ. ಇದು ಟೂಲ್‍ಕಿಟ್‍ನ ಮುಂದುವರಿದ ಭಾಗವಷ್ಟೇ, ಇದು ಸರ್ವಥಾ ಖಂಡನೀಯ ಎಂದರು.

digvijaya singh 1584509424

ದಿಗ್ವಿಜಯ್ ಸಿಂಗ್ ಕ್ಲಬ್‍ಹೌಸ್ ಆ್ಯಪ್ ಮೂಲಕ ಸಂದರ್ಶನ ನೀಡಿದ್ದು, ಆ ಪಕ್ಷವು ಪಾಕಿಸ್ತಾನದ ಪರ ಇರುವುದು ಸ್ಪಷ್ಟಗೊಳ್ಳುತ್ತಿದೆ. ಆದ್ದರಿಂದ ಕಾಂಗ್ರೆಸ್ಸಿನ ಹೆಸರನ್ನು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಐಎನ್‍ಸಿ) ಹೆಸರಿನ ಬದಲಾಗಿ `ಆ್ಯಂಟಿ ನ್ಯಾಷನಲ್ ಕ್ಲಬ್‍ಹೌಸ್’ (ಎಎನ್‍ಸಿ) ಎಂದು ಬದಲಿಸಿಕೊಳ್ಳಲಿ. ವಿದೇಶಿ ಮಾಧ್ಯಮ ಪ್ರತಿನಿಧಿ ಜೊತೆ ಸಂದರ್ಶನದಲ್ಲಿ ನರೇಂದ್ರ ಮೋದಿ ಅವರು ಅಧಿಕಾರ ಕಳೆದುಕೊಂಡರೆ ಎಂಬ ಊಹಾತ್ಮಕ ಪ್ರಶ್ನೆಗೆ ದಿಗ್ವಿಜಯ್ ಸಿಂಗ್ ಅವರು ಈ ಉತ್ತರ ನೀಡಿರುವುದು ಕಾಂಗ್ರೆಸ್‍ನ ಪಾಕ್ ಪರ- ಚೀನಾಪರ ನೀತಿಯ ಪ್ರತಿಬಿಂಬದಂತಿದೆ. ಅಲ್ಲದೆ ಜಮ್ಮು ಕಾಶ್ಮೀರದಲ್ಲಿ ಶಾಂತಿಯುತ ವಾತಾವರಣ ಬೇಡ ಎಂಬುದರ ಪ್ರತೀಕದಂತಿದೆ. ಈ ಸಂದರ್ಶನದಲ್ಲಿ ಇದೇ ಪ್ರಶ್ನೆ ಕೇಳಲು ಕಾಂಗ್ರೆಸ್‍ನ ಮುಖಂಡರು ಹೇಳಿರುವಂತಿದೆ ಅಥವಾ ದಿಗ್ವಿಜಯ್ ಸಿಂಗ್ ಅವರೇ ಈ ಪ್ರಶ್ನೆ ಕೇಳಲು ಮೊದಲೇ ಹೇಳಿರುವ ಸಾಧ್ಯತೆ ಇದೆ. ಇದು ಟೂಲ್‍ಕಿಟ್‍ನ ಮತ್ತೊಂದು ಭಾಗದಂತಿದೆ. ಈ ಕುರಿತು ಕಾಂಗ್ರೆಸ್ ಮುಖಂಡರು ಸ್ಪಷ್ಟಪಡಿಸಲಿ ಎಂದು ಅವರು ಒತ್ತಾಯಿಸಿದ್ದಾರೆ.

CongressFlags1

ವಿಶ್ವದಾದ್ಯಂತ ತಮ್ಮ ಜನಪ್ರಿಯತೆಯನ್ನು ಹೆಚ್ಚಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಧಿಕಾರದಿಂದ ಕೆಳಕ್ಕಿಳಿಸಬೇಕು ಮತ್ತು ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಈ ಹಿಂದೆ ಕಾಂಗ್ರೆಸ್ ಮುಖಂಡರಾದ ಮಣಿಶಂಕರ್ ಅಯ್ಯರ್ ಅವರೂ ಪಾಕಿಸ್ತಾನದ ಸಂದರ್ಶನವೊಂದರಲ್ಲಿ ತಿಳಿಸಿದ್ದರು. 2014ರಲ್ಲಿ ಅಯ್ಯರ್ ಅವರು ಈ ಸಂದರ್ಶನ ಕೊಟ್ಟಾಗ ಈ ಹೇಳಿಕೆ ಕೇಳಿ ಟಿ.ವಿ. ಆ್ಯಂಕರ್ ಆತಂಕಗೊಂಡಿದ್ದರು. ಇದರಲ್ಲಿ ನಮ್ಮ ಪಾತ್ರ ಏನಿದೆ ಎಂಬ ಪ್ರಶ್ನೆಯನ್ನೂ ಅವರು ಮುಂದಿಟ್ಟಿದ್ದರು. ಇದು ಕಾಂಗ್ರೆಸ್ಸಿಗರ ಷಡ್ಯಂತ್ರವಲ್ಲದೆ ಮತ್ತೇನು? ಪಾಕಿಸ್ತಾನ ಪರ ಕಾಂಗ್ರೆಸ್ ಇರುವುದಕ್ಕೆ ಇದಕ್ಕಿಂತ ದೊಡ್ಡ ಸಾಕ್ಷಿ ಬೇಕೇ ಎಂದು ಅವರು ಪ್ರಶ್ನಿಸಿದ್ದಾರೆ. ಇದೇ ಮಣಿಶಂಕರ್ ಅಯ್ಯರ್ ಅವರು ಈ ಹಿಂದೆ ಜಮ್ಮು ಕಾಶ್ಮೀರವನ್ನು ಅಫಘಾನಿಸ್ತಾನಕ್ಕೆ ಹೋಲಿಸಿದ್ದರು ಎಂಬುದೂ ಗಮನಾರ್ಹ ಎಂದಿದ್ದಾರೆ.

PM MODI 1 medium

ರಾಹುಲ್ ಗಾಂಧಿ ಅವರೂ 370ನೇ ವಿಧಿ ರದ್ದತಿ ಬಹುದೊಡ್ಡ ಪ್ರಮಾದ ಎಂದು ಟ್ವೀಟ್ ಮಾಡಿದ್ದರು. 2019ರ ಆಗಸ್ಟ್‍ನಲ್ಲಿ ಈ ಟ್ವೀಟ್ ಮಾಡಲಾಗಿತ್ತು. ಜಮ್ಮು ಕಾಶ್ಮೀರದಲ್ಲಿ ಸಾವಿರಾರು ಜನರ ಹತ್ಯೆ ಆಗಿದೆ, ಜಮ್ಮು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವವೇ ಇಲ್ಲ ಎಂದಿದ್ದರು. ಇದಾದ ಎರಡು ದಿನಗಳ ಬಳಿಕ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರು ಈ ಕುರಿತು ವಿಶ್ವಸಂಸ್ಥೆಗೆ ಪತ್ರ ಬರೆದಿದ್ದರು, ಜಮ್ಮು ಕಾಶ್ಮೀರದ ಪರಿಸ್ಥಿತಿ ಚೆನ್ನಾಗಿಲ್ಲ ಎಂಬ ರಾಹುಲ್ ಗಾಂಧಿ ಅವರ ಟ್ವೀಟ್ ಅನ್ನೂ ಅವರು ಉಲ್ಲೇಖಿಸಿದ್ದರು. ಇದು ಪಾಕಿಸ್ತಾನ ಮತ್ತು ಕಾಂಗ್ರೆಸ್ ನಡುವಿನ ಗುಪ್ತ ಒಪ್ಪಂದಕ್ಕೆ ಸಾಕ್ಷಿ ಅಲ್ಲವೇ ಎಂದು ನಳಿನ್‍ಕುಮಾರ್ ಅವರು ಪ್ರಶ್ನಿಸಿದ್ದು, ಈ ಕುರಿತು ಕಾಂಗ್ರೆಸ್ ಮುಖಂಡರು ಸ್ಪಷ್ಟನೆ ಕೊಡಲಿ ಎಂದು ಆಗ್ರಹಿಸಿದ್ದಾರೆ.

Rahul Gandhi 1 1

ರಾಹುಲ್ ಗಾಂಧಿ ಅವರು ಕೋವಿಡ್ ಹೆಚ್ಚಳದ ಕುರಿತು 2020ರ ಫೆಬ್ರವರಿ 13ರಂದು ಟ್ವೀಟ್‍ನಲ್ಲಿ ಜಮ್ಮು ಕಾಶ್ಮೀರವನ್ನು ಪಾಕಿಸ್ತಾನದ ಭಾಗ ಎಂದು ಭೂಪಟದಲ್ಲಿ ತೋರಿಸಿದ್ದರು. ಇದು ಕಾಂಗ್ರೆಸ್ಸಿಗರ ದೇಶವಿರೋಧಿ ಚಿಂತನೆಯ ಭಾಗವಲ್ಲವೇ ಎಂದು ಅವರು ಕೇಳಿದ್ದಾರೆ. ಪುಲ್ವಾಮಾ ದಾಳಿಯನ್ನು ನರೇಂದ್ರ ಮೋದಿ- ಇಮ್ರಾನ್ ಖಾನ್ ನಡುವಿನ ಮ್ಯಾಚ್ ಫಿಕ್ಸಿಂಗ್ ಎಂದು ಕಾಂಗ್ರೆಸ್ ನೇತಾರ- ನಮ್ಮ ರಾಜ್ಯದವರೇ ಆದ ಬಿ.ಕೆ.ಹರಿಪ್ರಸಾದ್ ಅವರು ಹೇಳಿದ್ದರು. ಇದು ನಮ್ಮ ದೇಶದ ಸೇನೆಯ ಧೈರ್ಯ ಸ್ಥೈರ್ಯವನ್ನು ಕುಂದಿಸುವ ಕಾಂಗ್ರೆಸ್ಸಿಗರ ದೇಶವಿರೋಧಿ ಮನಸ್ಥಿತಿಗೆ ಹಿಡಿದ ಕೈಗನ್ನಡಿ ಅಲ್ಲವೇ ಎಂದೂ ಪ್ರಶ್ನಿಸಿದ್ದಾರೆ.

TAGGED:bjpcongressNalin Kumar KateelPublic TVಕಾಂಗ್ರೆಸ್ನಳಿನ್ ಕುಮಾರ್ ಕಟೀಲ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

kavya gowda
ನಟಿ ಕಾವ್ಯ ಗೌಡ, ಪತಿ ಮೇಲೆ ಹಲ್ಲೆ ಆರೋಪ; ದೂರು ದಾಖಲು
Cinema Latest Main Post Sandalwood
Raghavendra Chitravani 1
ರಾಘವೇಂದ್ರ ಚಿತ್ರವಾಣಿಗೆ 50ರ ಸಂಭ್ರಮ – ಸಿನಿ ಗಣ್ಯರಿಂದ ಲೋಗೋ ಲಾಂಚ್
Cinema Latest Sandalwood Top Stories
Gilli Nata 6
ಚನ್ನಪಟ್ಟಣದಲ್ಲಿ ಗಿಲ್ಲಿ ಕ್ರೇಜ್ – ವೇದಿಕೆ ಏರಿದ ಅಭಿಮಾನಿಗಳ ನಿಯಂತ್ರಣಕ್ಕೆ ಪೊಲೀಸರ ಹರಸಾಹಸ
Cinema Districts Karnataka Latest Ramanagara States Top Stories
Anantha Padmanabha
ಹಿಟ್‌ ಡೈಲಾಗ್‌ ರೈಟರ್‌ ಪ್ರಶಾಂತ್‌ ರಾಜಪ್ಪ ನಿರ್ದೇಶನದ ಚೊಚ್ಚಲ ಚಿತ್ರದ ಟೈಟಲ್ ರಿವೀಲ್
Cinema Latest Sandalwood

You Might Also Like

MICHAEL RAJEEV
Chikkaballapur

ರಾಜೀವ್‌ ಗೌಡಗೆ ತಲೆಮರೆಸಿಕೊಳ್ಳಲು ಸಹಾಯ – ಮಂಗಳೂರಿನ ಉದ್ಯಮಿ ಅರೆಸ್ಟ್‌

Public TV
By Public TV
27 minutes ago
India European Union Trade Deal
Latest

ಭಾರತ-ಯುರೋಪ್‌ ಒಕ್ಕೂಟ ಒಪ್ಪಂದದಿಂದ ಉತ್ಪಾದನೆ, ಬೆಂಬಲ ಸೇವಾ ವಲಯಕ್ಕೆ ಉತ್ತೇಜನ: ಮೋದಿ ಬಣ್ಣನೆ

Public TV
By Public TV
34 minutes ago
10 month old tiger cub captured in chamarajanagar
Chamarajanagar

ತಾಯಿ ಹುಲಿ ಜೊತೆ ಮರಿಗಳು ಕಾಣಿಸಿಕೊಂಡಿದ್ದ ಪ್ರಕರಣ – ಮತ್ತೊಂದು ಮರಿ ಸೆರೆ, ಇನ್ನೊಂದು ಮಾತ್ರ ಬಾಕಿ

Public TV
By Public TV
1 hour ago
Jana Nayagan Vijay
Astrology

ಜನ ನಾಯಗನ್ ಚಿತ್ರಕ್ಕೆ ಹಿನ್ನಡೆ; ಸದ್ಯಕ್ಕಿಲ್ಲ ಬಿಡುಗಡೆ ಭಾಗ್ಯ

Public TV
By Public TV
1 hour ago
Husband commits suicide after wife elopes with her Lover in Davanagere
Crime

ಮದುವೆಯಾದ ಎರಡೇ ತಿಂಗಳಿಗೆ ಮತ್ತೊಬ್ಬನ ಜೊತೆ ಪತ್ನಿ ಪರಾರಿ – ನೇಣಿಗೆ ಕೊರಳೊಡ್ಡಿದ ಪತಿ

Public TV
By Public TV
2 hours ago
arrest crime
Latest

ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪರ ಬೇಹುಗಾರಿಕೆ ಶಂಕೆ; ರಾಜಸ್ಥಾನದ ಜೈಸಲ್ಮೇರ್‌ ವ್ಯಕ್ತಿ ಬಂಧನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?