Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನ್ಯಾನೋ ಯೂರಿಯಾಕ್ಕೆ ಸದಾನಂದ ಗೌಡ ಹಸಿರು ನಿಶಾನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ನ್ಯಾನೋ ಯೂರಿಯಾಕ್ಕೆ ಸದಾನಂದ ಗೌಡ ಹಸಿರು ನಿಶಾನೆ

Bengaluru City

ನ್ಯಾನೋ ಯೂರಿಯಾಕ್ಕೆ ಸದಾನಂದ ಗೌಡ ಹಸಿರು ನಿಶಾನೆ

Public TV
Last updated: June 12, 2021 11:07 pm
Public TV
Share
3 Min Read
IFFCO DVS 4
SHARE

– ರಾಜ್ಯದಲ್ಲಿಯೂ ಇಫ್ಕೊ ನ್ಯಾನೋ ಯೂರಿಯಾ ಘಟಕ

ಬೆಂಗಳೂರು: ಗುಜರಾತಿನ ಕಲೋಲ್’ನಲ್ಲಿರುವ ಇಫ್ಕೋ ನ್ಯಾನೋ ಯುರೀಯಾ ಕಾರ್ಖಾನೆಯಿಂದ 500-ಎಂ.ಎಲ್. ಸಾಮಥ್ರ್ಯದ 16,600 ನ್ಯಾನೋ ಯೂರಿಯಾ ಬಾಟಲಿಗಳನ್ನು ಹೊತ್ತ ಮೊದಲ ವಾಹನ ಇಂದು ಕರ್ನಾಟಕದತ್ತ ಪಯಣ ಬೆಳೆಸಿತು. ನ್ಯಾನೋ ಯೂರಿಯಾ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡುವುದು ಎಂದು ನಿರೀಕ್ಷಿಸಲಾಗಿದೆ. 500- ಎಂ.ಎಲ್. ನ್ಯಾನೋ ಯೂರಿಯಾ 45 ಕೆಜಿ ಮಾಮೂಲಿ ಯೂರಿಯಾಕ್ಕೆ ಸಮನಾಗಿದೆ. ಬೆಲೆ ಒಂದು ಬಾಟಲಿಗೆ 240 ರೂಪಾಯಿ. ಸಹಕಾರಿ ವಲಯದ ಇಫ್ಕೋ ಕಂಪನಿಯು ಗುಜರಾತಿನ ಕಲೋಲ್ ಸೇರಿದಂತೆ ದೇಶದಲ್ಲಿ ಈಗಾಗಲೇ 3 ಕಡೆ ನ್ಯಾನೋ ಯೂರಿಯಾ ಘಟಕ ಸ್ಥಾಪಿಸಿದ್ದು ಇನ್ನೂ ನಾಲ್ಕು ಕಡೆ ಹೊಸ ಘಟಕಗಳನ್ನು ತೆರೆಯಲಿದೆ. ಇಫ್ಕೋ ಈ ಹಂಗಾಮಿನಲ್ಲಿ 28 ಕೋಟಿ ಬಾಟಲಿ (500 ಎಂಎಲ್) ನ್ಯಾನೋ ಯೂರಿಯಾ ಉತ್ಪಾದಿಸಲಿದೆ.

IFFCO DVS 2 medium

ಬೆಂಗಳೂರಿನಲ್ಲಿ ಇಂದು ಸಾಯಂಕಾಲ ವಚ್ರ್ವಲ್ ಸಭೆ ಮೂಲಕ ಕಲೋಲ್’ನಿಂದ ಹೊರಟ ನ್ಯಾನೋ ಯೂರಿಯಾ ವಾಹನಕ್ಕೆ ಹಸಿರು ನಿಶಾನೆ ತೋರಿದ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಡಿ ವಿ ಸದಾನಂದ ಗೌಡ ಅವರು ಜಗತ್ತಿನಲ್ಲಿಯೇ ಪ್ರಪ್ರಥಮವಾಗಿ ನ್ಯಾನೋ ಯೂರಿಯಾ ಅಭಿವೃದ್ಧಿಪಡಿಸಿರುವ ಇಫ್ಕೋ ಕಂಪನಿಯನ್ನು ಅಭಿನಂದಿಸಿದರು.

ಕರ್ನಾಟಕದಲ್ಲಿಯೂ ನ್ಯಾನೋ ಯೂರಿಯಾ ಕಾರ್ಖಾನೆ ಸ್ಥಾಪಿಸಲು ಇಫ್ಕೋ ಆಸಕ್ತಿ ತೋರಿದ್ದು ಇನ್ನು 10 ದಿನದೊಳಗಾಗಿ ಬೆಂಗಳೂರು ವಿಮಾನ ನಿಲ್ದಾಣದ ಸಮೀಪ ಸೂಕ್ತವಾಗದ ಜಾಗವನ್ನು ಗುರುತಿಸಲಾಗುವುದು ಎಂದು ಕೇಂದ್ರ ಸಚಿವ ಸದಾನಂದ ಗೌಡ ಪ್ರಕಟಿಸಿದರು.

IFFCO DVS 3 medium

ನ್ಯಾನೋಗೊಬ್ಬರ ರೈತರಿಗೆ ವರವಾಗಲಿದೆ. ಪರಿಸರ ಸ್ನೇಹಿಯಾಗಿದ್ದು ಮಣ್ಣಿನ ಫಲವತ್ತದೆ ಉಳಿಸಿಕೊಳ್ಳಲು ಸಹಾಯಕವಾಗಲಿದೆ. ಒಂದೆಡೆ ಶೇಕಡಾ 8ರಿಂದ 15ರಷ್ಟು ಖರ್ಚು ಕಡಿಮೆಯಾಗಲಿದೆ. ಇನ್ನೊಂದೆಡೆ ಇಳುವರಿಯು 15ರಿಂದ 20 ಪ್ರತಿಶತ ಹೆಚ್ಚಾಗಲಿದೆ. ಇದರಿಂದ ದೇಶದ ರೈತರಿಗೆ ಈ ಸಲ ಸುಮಾರು 28 ಸಾವಿರ ಕೋಟಿ ಹೆಚ್ಚುವರಿ ಆದಾಯ ದೊರೆಯುವುದು ಎಂದು ಅಂದಾಜಿಸಲಾಗಿದೆ ಎಂದರು.

IFFCO DVS 1 medium

ದೇಶದಲ್ಲಿ ಪ್ರತಿವರ್ಷ ಸರಾಸರಿ 330 ಲಕ್ಷ ಮೆಟ್ರಿಕ್ ಟನ್ ಯೂರಿಯಾ ಬಳಕೆಯಾಗುತ್ತದೆ. ಇದರಲ್ಲಿ ಸುಮಾರು 90 ಲಕ್ಷ ಟನ್ ಆಮದು ಮಾಡಿಕೊಳ್ಳುತ್ತೇವೆ. ನ್ಯಾನೋ ಯೂರಿಯಾ ಪ್ರವೇಶದಿಂದಾಗಿ ಈ ಸಲ ಮಾಮೂಲಿ ಯೂರಿಯಾ ಬಳಕೆಯಲ್ಲಿ ಶೇಕಡಾ 20ರಷ್ಟು ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ. ಇದರಿಂದ ಕೇಂದ್ರ ಸರ್ಕಾರಕ್ಕೆ ಸುಮಾರು 16,000 ಕೋಟಿ ರೂ ಯೂರಿಯಾ ಸಬ್ಸಿಡಿ ಉಳಿತಾಯವಾಗಬಹುದು ಎಂದು ಲೆಕ್ಕಹಾಕಲಾಗಿದೆ. ಇನ್ನು ಕರ್ನಾಟದಲ್ಲಿ, ನ್ಯಾನೋ ಯುರಿಯಾ ಬಂದಿರುವುದರಿಂದ ಮಾಮೂಲಿ ಯೂರಿಯಾ ಬಳಕೆ ಸುಮಾರು 5 ಲಕ್ಷ ಟನ್ ಕಡಿಮೆಯಾಗಬಹುದು ಎಂದು ಅಂದಾಜು ಮಾಡಲಾಗಿದೆ ಎಂದರು.

IFFCO DVS 3 medium

ನಾಯಕತ್ವ ಬದಲಾವಣೆ ಇಲ್ಲ:
ನಂತರ ವರದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಸದಾನಂದ ಗೌಡ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ತಳ್ಳಿಹಾಕಿದರು. ನಮ್ಮ ಪಕ್ಷದಲ್ಲಿ ಪ್ರತಿ ರಾಜ್ಯಕ್ಕೆ ಉಸ್ತುವಾರಿ ಇರ್ತಾರೆ. ಕೇಂದ್ರದ ವರಿಷ್ಠರ ಸಂದೇಶವನ್ನು ಅವರು ನೀಡ್ತಾರೆ. ಹಾಗೆಯೇ ನಮ್ಮ ರಾಜ್ಯದ ಉಸ್ತುವಾರಿ ಅರುಣ್ ಸಿಂಗ್ ಅವರು – ಮುಂದಿನ ಎರಡು ವರ್ಷಗಳು ಕೂಡ ಬಿಎಸ್‍ವೈ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.

#IFFCO ಉತ್ಪಾದಿತ ನ್ಯಾನೋ ಯೂರಿಯಾದ ಮೊದಲ ಕಂತು ಗುಜರಾತಿನ ಕಲೋಲ್ ಸ್ಥಾವರದಿಂದ ಕರ್ನಾಟಕಕ್ಕೆ ಹೊರಟಿತು.
ಇಂದು ಬೆಂಗಳೂರಿನಲ್ಲಿ ವರ್ಚ್ವಲ್ ಸಭೆಯ ಮೂಲಕ ಈ ನ್ಯಾನೋ ಗೊಬ್ಬರ ಹೊತ್ತ ವಾಹನಗಳಿಗೆ ಹಸಿರು ನಿಶಾನೆ ತೋರಿದೆ.
500-ML ನ್ಯಾನೋ ಯೂರಿಯಾ 45-KG ಮಾಮೂಲಿ ಯೂರಿಯಾಕ್ಕೆ ಸಮ. ಇದು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಉಂಟುಮಾಡಲಿದೆ pic.twitter.com/8nSnQiyUhq

— Sadananda Gowda (@DVSadanandGowda) June 12, 2021

ಪೆಟ್ರೋಲ್ ದರ ಏರಿಕೆ ವಿಚಾರವಾಗಿ ಕೇಳಲಾದ ಪ್ರಶ್ನಗೆ ಪ್ರತಿಕ್ರಿಯಿಸಿದ ಸದಾನಂದ ಗೌಡರು – ಪೆಟ್ರೋಲ್ ದರ ಅಂತಾರಾಷ್ಟ್ರೀಯ ಮಟ್ಟ ಮೇಲೆ ಅವಲಂಬಿಸಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೆರಡೂ ಅದರ ಮೇಲೆ ವಿವಿಧ ರೀತಿ ತೆರಿಗೆ ವಿಧಿಸಿಸುತ್ತದೆ. ಇದನ್ನು ಜಿಎಸ್‍ಟಿ ವ್ಯಾಪ್ತಿಗೆ ತರುವುದು ಸೂಕ್ತ ಎಂಬುದು ನನ್ನ ಭಾವನೆ. ಆದರೆ ಜಿಎಸ್ಟಿ ಸ್ವಾಯತ್ತ ಸಂಸ್ಥೆ ಆಗಿದೆ. ಕೇಂದ್ರ ಹಾಗೂ ಎಲ್ಲ ರಾಜ್ಯಗಳ ವಿತ್ತ ಸಚಿವರು ಅದರಲ್ಲಿ ಇರುತ್ತಾರೆ. ಅವರು ಅದನ್ನು ನಿರ್ಧರಿಸಬೇಕು ಎಂದರು.

TAGGED:DV Sadananda GowdaIFFCONano UreaPublic TVಇಫ್ಕೊ ನ್ಯಾನೋ ಯೂರಿಯಾಡಿ.ವಿ.ಸದಾನಂದಗೌಡನ್ಯಾನೋ ಯೂರಿಯಾಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Chitradurga
Chitradurga

ಹಿಂದೂ ದೇವರ ಶಿಲಾಶಾಸನವಿರುವ ಭೂಮಿಗೆ ವಕ್ಫ್ ಕೊಕ್ಕೆ – ಕೋಟೆ ನಾಡಿನಲ್ಲಿ ಧರ್ಮ ದಂಗಲ್‌ ಜೋರು

Public TV
By Public TV
38 minutes ago
crime news honour killing case man kills daughter in Hubballi Manya
Crime

ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ | ಮನೆಗೆ ನುಗ್ಗಿ 7 ತಿಂಗಳ ಗರ್ಭಿಣಿಯನ್ನೇ ಕೊಂದ ತಂದೆ

Public TV
By Public TV
54 minutes ago
Kukke Shri Subrahmanya
Dakshina Kannada

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ಕಿರುಷಷ್ಠಿ ಮಹೋತ್ಸವ; ಅನ್ಯಧರ್ಮಿಯರ ಆಹ್ವಾನಕ್ಕೆ ಭಾರೀ ವಿರೋಧ

Public TV
By Public TV
1 hour ago
Maharashtra Local Polls BJP
Latest

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು

Public TV
By Public TV
8 hours ago
GBA
Bengaluru City

ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

Public TV
By Public TV
9 hours ago
pm modi assam
Latest

ನುಸುಳುಕೋರರಿಗೆ ಕಾಂಗ್ರೆಸ್ ರಕ್ಷಣೆ: ಮೋದಿ ವಾಗ್ದಾಳಿ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?