ಬೆಂಗಳೂರು: ಸ್ಯಾಂಡಲ್‍ವುಡ್ ನಟ ಸೆಂಚುರಿ ಸ್ಟಾರ್ ಡಾ. ಶಿವರಾಜ್ ಕುಮಾರ್‌ರವರು ಸಂಕಷ್ಟದಲ್ಲಿರುವ ಸಿನಿಕಾರ್ಮಿಕರಿಗೆ ಸಹಾಯ ಮಾಡಿದ್ದಾರೆ. ಕೊರೊನಾ ಲಾಕ್‍ಡೌನ್‍ನಿಂದ ಸಂಕಷ್ಟಕ್ಕೆ ಸಿಲುಕಿದ್ದ ಅನೇಕ ಸಿನಿಮಾ ಕಾರ್ಮಿಕರಿಗೆ ಡಾ. ಶಿವರಾಜ್ ಕುಮಾರ್‌ರವರು 10 ಲಕ್ಷ ರೂ. ಚೆಕ್ ನೀಡುವ ಮೂಲಕ ನೆರವು ನೀಡಿದ್ದಾರೆ.
ಇಂದು ಪತ್ನಿ ಗೀತಾರವರ ಹುಟ್ಟುಹಬ್ಬವನ್ನು ಆಚರಿಸಿದ ಶಿವರಾಜ್ ಕುಮಾರ್‌ರವರು ಇದೇ ಖುಷಿಯಲ್ಲಿ ಶಿವರಾಜ್ ಕುಮಾರ್‍ರವರು ನಿರ್ಮಾಪಕ ಕೆ.ಪಿ ಶ್ರೀಕಾಂತ್‍ರವರ ಜೊತೆಗೂಡಿ 10 ಲಕ್ಷ ರೂ. ಚೆಕ್‍ನನ್ನು ಕಾರ್ಮಿಕರ ಒಕ್ಕೂಟಕ್ಕೆ ಹಸ್ತಾಂತರಿಸಿದ್ದಾರೆ. ಜೊತೆಗೆ ಶಿವರಾಜ್ ಕುಮಾರ್‌ರವರು ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ಗೀತಾರವರ ಫೋಟೋವನ್ನು ಹಂಚಿಕೊಂಡಿದ್ದು, ಹ್ಯಾಪಿ ಬರ್ತ್‍ಡೇ ಮೇಡಮ್, ನೂರಾರು ಕಾಲ ಖುಷಿ ಖುಷಿಯಾಗಿರಿ.. ಎಂದು ಬರೆದುಕೊಂಡಿದ್ದಾರೆ.
View this post on Instagram
ಈ ಮುನ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್‌ರವರು ಕೂಡ ಕರ್ನಾಟಕ ಚಲನಚಿತ್ರ ಕಾರ್ಮಿಕರ ಒಕ್ಕೂಟಕ್ಕೆ 10 ಲಕ್ಷ ರೂಪಾಯಿ ನೆರವು ನೀಡಿದ್ದರು. ಅಲ್ಲದೇ ರಾಕಿಂಗ್ ಸ್ಟಾರ್ ಯಶ್ ಕೂಡ ಸುಮಾರು 3 ಸಾವಿರಕ್ಕೂ ಹೆಚ್ಚು ಸಿನಿಮಾ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರ ಅಧಿಕೃತ ಖಾತೆಗಳಿಗೆ ತಲಾ 5 ಸಾವಿರ ರೂ. ಗಳನ್ನು ತಮ್ಮ ಸಂಪಾದನೆಯಿಂದ ನೀಡುವುದಾಗಿ ಘೋಷಿಸಿದ್ದರು.
#togetherwestand #humanity pic.twitter.com/46FYT9pThz
— Yash (@TheNameIsYash) June 1, 2021