Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

Bengaluru City

ಹೋಟೆಲ್, ರೆಸಾರ್ಟ್, ವಸತಿ ಗೃಹಗಳ ವಿದ್ಯುತ್, ನೀರಿನ ಬಿಲ್ ಮನ್ನಾ ಮಾಡಿ: ಸಿದ್ದರಾಮಯ್ಯ ಪತ್ರ

Public TV
Last updated: June 23, 2021 1:51 pm
Public TV
Share
3 Min Read
BSY Siddu
SHARE

ಬೆಂಗಳೂರು: ಹೋಟೆಲ್, ರೆಸಾರ್ಟ್, ವಸತಿಗೃಹಗಳ ಕೊರೋನಾ ಕಾಲದ ವಿದ್ಯುತ್, ನೀರಿನ ಶುಲ್ಕವನ್ನು ಮನ್ನಾ ಮಾಡುವುದು ಸೇರಿದಂತೆ ಈ ಉದ್ಯಮ ನೆಲಕಚ್ಚದಂತೆ ಅಗತ್ಯ ನೆರವನ್ನು ನೀಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

FotoJet 4 28

ಸಿದ್ದರಾಮಯ್ಯ ಬರೆದ ಪತ್ರದಲ್ಲೇನಿದೆ..?:
ಕರ್ನಾಟಕ ಸರ್ಕಾರಕ್ಕೆ ಹೋಟೆಲ್ ಕಾರ್ಮಿಕರು, ದೀಪಾಲಂಕಾರದ ಕೆಲಸಗಾರರು, ಫೋಟೋಗ್ರಾಫರ್ ಗಳು ಸೇರಿ ಇನ್ನಿತರೆ ನಾನಾ ಜನ ಸಮುದಾಯಗಳು ಪಡುತ್ತಿರುವ ಕಷ್ಟ ಕಣ್ಣಿಗೆ ಬಿದ್ದಿಲ್ಲ. ಬೆಂಗಳೂರು ಸೇರಿ ರಾಜ್ಯದ ನಾನಾ ಭಾಗಗಳಲ್ಲಿ ಸಾವಿರಾರು ಹೋಟೆಲ್‍ಗಳು ಬಂದ್ ಆಗಿ ಮಾರಾಟಕ್ಕಿವೆ. ಹೋಟೆಲ್, ಕ್ಯಾಂಟೀನ್ ಕಟ್ಟಡಗಳ ಬಾಡಿಗೆ ಕಟ್ಟಲಾಗದೆ ಮಾಲೀಕರು ಪರಿತಪಿಸುತ್ತಿದ್ದಾರೆ. ಬ್ಯಾಂಕ್ ಸಾಲದ ಬಡ್ಡಿ ಬೆಳೆಯುತ್ತಲೇ ಇರುವ ಕಾರಣ ಸಣ್ಣ ಮತ್ತು ಮಧ್ಯಮ ಹೋಟೆಲ್‍ಗಳ ಮಾಲೀಕರು ಮಾತ್ರವಲ್ಲ ದೊಡ್ಡ ಹೋಟೆಲ್‍ಗಳ ಮಾಲೀಕರೂ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೊಂದು ಕಡೆ ಹೋಟೆಲ್ ಕಾರ್ಮಿಕರು ಎರಡು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ಇದೆ. ಬೆಂಗಳೂರು ನಗರ ಮತ್ತು ಅಕ್ಕ ಪಕ್ಕದ ನಾಲ್ಕೈದು ಜಿಲ್ಲೆಗಳಲ್ಲೇ 20 ಸಾವಿರಕ್ಕೂ ಅಧಿಕ ಮಂದಿ ಹೋಟೆಲ್ ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ. ಇವರು ಕುಟುಂಬ ನಿರ್ವಹಣೆ ಮಾಡಲಾಗದೆ ಸಂಕಷ್ಟದಲ್ಲಿದ್ದಾರೆ. ಈ ಕಾರ್ಮಿಕರ ಮಕ್ಕಳು ಶಿಕ್ಷಣ ತೊರೆಯಬೇಕಾದ ಸ್ಥಿತಿ ಬಂದೊದಗಿದೆ. ಇಡೀ ಸೇವಾ ವಲಯವೇ ಸ್ಥಗಿತಗೊಂಡಿರುವುದರಿಂದ ಪ್ರವಾಸೋದ್ಯಮವನ್ನು ನೆಚ್ಚಿಕೊಂಡಿದ್ದ ವಸತಿ ಗೃಹಗಳ ಮಾಲೀಕರು ಮತ್ತು ಕೆಲಸಗಾರರೂ ದುಡಿಮೆ ಇಲ್ಲದೆ ಕಂಗಾಲಾಗಿದ್ದಾರೆ. ಶುಭ ಕಾರ್ಯಗಳು ನಡೆಯದಿರುವುದರಿಂದ, ಧಾರ್ಮಿಕ ಕಾರ್ಯಗಳು, ಹಬ್ಬಗಳ ಆಚರಣೆಗೂ ಅವಕಾಶ ಇಲ್ಲವಾಗಿದ್ದರಿಂದ ಫೋಟೋಗ್ರಾಫರ್‍ಗಳು, ಡೆಕೊರೇಟರ್‍ಗಳು, ದೀಪದ ಅಲಂಕಾರ ಮಾಡುವ ಕೆಲಸಗಾರರು ಸೇರಿ ಪ್ರತಿಯೊಂದೂ ದುಡಿಯುವ ವರ್ಗದ ಸಹಸ್ರ ಸಹಸ್ರ ಕುಟುಂಬಗಳು ಕಣ್ಣೀರಲ್ಲಿ ಕೈತೊಳೆಯುತ್ತಿವೆ.

bsy medium

ಇವರೆಲ್ಲರ ಸಂಕಷ್ಟ ಮತ್ತು ನೋವುಗಳು ಸರ್ಕಾರಕ್ಕೆ ಕಾಣಬೇಕಿತ್ತು. ಸರ್ಕಾರ ಕುರುಡಾಗಿರುವುದರಿಂದ ಈ ಶ್ರಮಿಕ ವರ್ಗಗಳೇ ಸ್ವತಃ ಸರ್ಕಾರವನ್ನು ಇನ್ನಿಲ್ಲದಂತೆ ಒತ್ತಾಯಿಸುತ್ತಿದ್ದರೂ ಅವರಿಗೆ ಸೂಕ್ತವಾದ ನೆರವು ಸಿಕ್ಕಿಲ್ಲ. ಕೊರೋನಾ ಮೊದಲ ಅಲೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ಘೋಷಿಸಿದ ಪ್ಯಾಕೇಜ್‍ನಲ್ಲಿ ಅರ್ಧದಷ್ಟು ಕೂಡ ತಲುಪಬೇಕಾದವರಿಗೆ ತಲುಪಲಿಲ್ಲ. ಕಾರ್ಮಿಕ ನಿಧಿ ಹೊರತುಪಡಿಸಿ ಕೇವಲ 800-900 ಕೋಟಿಯಷ್ಟು ಹಣ ನೆಪಮಾತ್ರಕ್ಕೆ ಹಂಚಿಕೆಯಾಗಿದೆ. ಇದನ್ನೂ ಓದಿ: ಮುಂದಿನ ಸಿಎಂ ಬಗೆಗಿನ ಚರ್ಚೆ ಕಾಂಗ್ರೆಸ್ಸಿಗೆ ಅಧಿಕಾರದ ದಾಹ ಎಷ್ಟಿದೆ ಎಂಬುದನ್ನು ತೋರಿಸುತ್ತಿದೆ: ಶೆಟ್ಟರ್

BSY SIDDU

ಎರಡನೇ ಅಲೆ ಸಂದರ್ಭದಲ್ಲೂ ಸರ್ಕಾರ ಘೋಷಿಸಿರುವ 2 ಸಾವಿರ ಕೋಟಿ ರೂ.ಗಳ ಪ್ಯಾಕೇಜು ರಾಜ್ಯದ ಜನರಿಗೆ ಮಾಡಿರುವ ಅವಮಾನ ಎಂದು ಮತ್ತೊಮ್ಮೆ ಹೇಳಬೇಕಾಗಿದೆ. ಈ 2 ಸಾವಿರ ಕೋಟಿಯಲ್ಲಿ ಕಟ್ಟಡ ಕಾರ್ಮಿಕರಿಗೆ ಘೋಷಿಸಿರುವ ಅವರದ್ದೇ ಹಣದ ಪ್ಯಾಕೇಜು ಬಿಟ್ಟರೆ ಉಳಿಯುವುದು ಕೇವಲ 1500 ಕೋಟಿ ರೂ.ಗಳು ಮಾತ್ರ. ಅತಿ ಕಡಿಮೆ ಪ್ಯಾಕೇಜು ಘೋಷಿಸಿದ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲಿಗೆ ನಿಂತಿದೆ ಎಂಬ ಆರೋಪದಿಂದ ಹೊರಬರಬೇಕಾದರೆ ರಾಜ್ಯ ಸರ್ಕಾರ ಈಗಲಾದರೂ ಉತ್ತಮ ಪ್ಯಾಕೇಜನ್ನು ಘೋಷಿಸಿ ಅಕ್ಕ ಪಕ್ಕದ ರಾಜ್ಯಗಳ ಮುಂದೆ ಮರ್ಯಾದೆ ಉಳಿಸಿಕೊಳ್ಳಬೇಕಿದೆ. ಆದ್ದರಿಂದ ಎಲ್ಲ ಬಿಪಿಎಲ್ ಕುಟುಂಬಗಳಿಗೆ ತಲಾ 10,000 ರೂ.ಗಳನ್ನು ಘೋಷಿಸಬೇಕೆಂದು ಮತ್ತೊಮ್ಮೆ ಒತ್ತಾಯಿಸುತ್ತಿದ್ದೇನೆ. ಜೊತೆಗೆ ಈ ಕೆಳಕಂಡ ವಲಯಗಳ ಜನರೂ ಸಹ ಉಳಿದವರಂತೆ ತೀವ್ರ ಬಿಕ್ಕಟ್ಟಿನಲ್ಲಿದ್ದಾರೆ.

siddaramaiah

ಆದ್ದರಿಂದ ಹೋಟೆಲ್, ವಸತಿ ಗೃಹ, ಫೋಟೋಗ್ರಾಫರ್ ಗಳು, ಅಲಂಕಾರಿಕ ವೃತ್ತಿಯಲ್ಲಿ ತೊಡಗಿರುವವರಿಗೆ ತಕ್ಷಣ ಸೂಕ್ತ ಪ್ಯಾಕೇಜ್ ಘೋಷಣೆ ಮಾಡಬೇಕು. ಹೋಟೆಲ್, ಕ್ಯಾಂಟೀನ್ ಮಾಲೀಕರ ಬ್ಯಾಂಕ್ ಸಾಲ ವಸೂಲಾತಿಯನ್ನು ಮುಂದೂಡಬೇಕು. ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು. ಜೊತೆಗೆ ಎಲ್ಲಾ ಉತ್ಪಾದಕ ಮತ್ತು ಸೇವಾ ವಲಯಗಳ ಜನರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನೂ ಮನ್ನಾ ಮಾಡಬೇಕು ಎಂದು ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

TAGGED:bengalurubs yeddyurappaletterPublic TVsiddaramaiahಪತ್ರಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

dhanush maari sai pallavi
8 ವರ್ಷಗಳ ಬಳಿಕ ಒಂದಾದ ರೌಡಿಬೇಬಿ
Cinema Latest South cinema Top Stories
Ram Charan Mob At Hospital
ರಾಮ್ ಚರಣ್ ತಳ್ಳಾಟ ನೂಕಾಟ..ಆಸ್ಪತ್ರೆ ಅನ್ನೋದನ್ನೂ ನೋಡದ ಜನ
Cinema Latest Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ಜಟಾಪಟಿ – ಒಂದೇ ಜಾಗಕ್ಕೆ ಎರಡೆರಡು ದಾಖಲೆ ನೀಡಿ ಅಧಿಕಾರಿಗಳ ಯಡವಟ್ಟು?
Cinema Districts Hassan Karnataka Latest Sandalwood States Top Stories
Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories

You Might Also Like

gold silver
Latest

ಭಾರತ-ಯುಎಸ್ ವಾಣಿಜ್ಯ ಒಪ್ಪಂದ ಫೈನಲ್: ಚಿನ್ನ, ಬೆಳ್ಳಿ ದರದಲ್ಲಿ ಚೇತರಿಕೆ – ಬೆಂಗಳೂರಲ್ಲಿ ದರ ಎಷ್ಟು?

Public TV
By Public TV
31 minutes ago
R Ashoka 1
Bengaluru City

ಪೆನ್‌ಡ್ರೈವ್ ನನ್ನ ಬಳಿ ಇದೆ – ಸದನದಲ್ಲಿ ವಿಪಕ್ಷ ನಾಯಕ ಆರ್‌. ಅಶೋಕ್‌ ಹೊಸ ಬಾಂಬ್‌

Public TV
By Public TV
32 minutes ago
Russia Launches Drone Missile Attack On Ukraine
Latest

ಶಾಂತಿ ಒಪ್ಪಂದ ಮಾತುಕತೆ ಮುನ್ನವೇ ಉಕ್ರೇನ್‌ ಮೇಲೆ ರಷ್ಯಾ ಡ್ರೋನ್‌, ಕ್ಷಿಪಣಿ ದಾಳಿ

Public TV
By Public TV
1 hour ago
putin pm modi donald trump
Latest

ತೈಲ ಖರೀದಿಸಲ್ಲ ಅಂತ ಭಾರತ ಹೇಳಿಲ್ಲ – ಟ್ರಂಪ್‌ ಹೇಳಿಕೆಗೆ ರಷ್ಯಾ ಪ್ರತಿಕ್ರಿಯೆ

Public TV
By Public TV
2 hours ago
Lok Sabha MPs 2
Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
By Public TV
2 hours ago
bagalakote arrest
Bagalkot

ಬಾಗಲಕೋಟೆ| ಕುಡಿದ ಮತ್ತಿನಲ್ಲಿ ಪತ್ನಿಯ ತಲೆ ಬೋಳಿಸಿದ ಪತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?