Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಲಬುರಗಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಆದ್ಯತೆ: ಡಾ.ವೈ.ಎಸ್ ರವಿಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಲಬುರಗಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಆದ್ಯತೆ: ಡಾ.ವೈ.ಎಸ್ ರವಿಕುಮಾರ್

Districts

ಕಲಬುರಗಿ ನಗರದಲ್ಲಿ ಕಾನೂನು ಸುವ್ಯವಸ್ಥೆಗೆ ಆದ್ಯತೆ: ಡಾ.ವೈ.ಎಸ್ ರವಿಕುಮಾರ್

Public TV
Last updated: June 26, 2021 8:53 am
Public TV
Share
2 Min Read
GLB 1 3
SHARE

ಕಲಬುರಗಿ: ಜಿಲ್ಲಾ ಪೊಲೀಸ್ ಆಯುಕ್ತಾಲಯದ ವ್ಯಾಪ್ತಿಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಶಾಂತಿಯುತವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಣೆ ನಿಟ್ಟಿನಲ್ಲಿ ಅಪರಾಧ, ಅನೈತಿಕ ಚಟುವಟಿಕೆ ಸೇರಿ ವಿವಿಧ ಕುಕೃತ್ಯಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ವೈ. ಎಸ್ ರವಿಕುಮಾರ ಅವರು ತಿಳಿಸಿದರು.

ಶುಕ್ರವಾರ ಇಲ್ಲಿನ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಪ್ರತಿನಿತ್ಯ ಅನೇಕ ರೀತಿಯ ಅಪರಾಧ ಚಟುವಟಿಕೆಗಳು ನಡೆಯುತ್ತಿವೆ. ಅವುಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಗರದ ಪ್ರಮುಖ ಸ್ಥಳಗಳಲ್ಲಿ ರಾತ್ರಿ ವೇಳೆಯಲ್ಲಿ ಪೊಲೀಸ್ ಅಧಿಕಾರಿಗಳ ಗಸ್ತು ಹೆಚ್ಚಿಸಲಾಗುವುದು ಎಂದು ಅವರು ಹೇಳಿದರು.

ಮನೆ ಕಳವು, ರಾತ್ರಿಯಲ್ಲಿ ಸಂಚರಿಸುವ ವಾಹನಗಳ ತಡೆದು ಹಣ ವಸೂಲಿ, ಕಳತನ ಕೃತ್ಯಗಳನ್ನು ನಿಯಂತ್ರಿಸಲು ಓರ್ವ ಎಸಿಪಿ ಹಾಗೂ 3 ಇನ್ಸ್‍ಸ್ಪೆಕ್ಟರ್ ಗಳು ನಗರದಲ್ಲಿ ನೈಟ್ ಪ್ಯಾಟ್ರೋಲಿಂಗ್ ಮಾಡಲಿದ್ದಾರೆ. ಇದಲ್ಲದೆ ಗ್ರಾಮೀಣ ಭಾಗದಲ್ಲಿ ಸಹ ಹಗಲು ಹಾಗೂ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳ ಗಸ್ತು ಸಹ ಹೆಚ್ಚಿಸಲಾಗುವುದು ಎಂದು ಪೊಲೀಸ್ ಆಯುಕ್ತರು ತಿಳಿಸಿದರು.

GLB 12 medium

ನಗರದಲ್ಲಿ ಸಾರ್ವಜನಿಕರ ಹಿತದೃಷ್ಟಿಯಿಂದ ತುರ್ತು ಪರಿಸ್ಥಿತಿಗೆ ಸ್ಪಂದಿಸಲು ಎಮರ್ಜೆನ್ಸಿ 112 ಸಂಖ್ಯೆಯ 12 ವಾಹನಗಳು ಕಳೆದ ಒಂದು ತಿಂಗಳಿಂದ ಚಾಲ್ತಿಯಲ್ಲಿದ್ದು, ಸುಮಾರು 750 ಸಾರ್ವಜನಿಕರ ಕರೆಗಳನ್ನು ಸ್ವೀಕರಿಸಿ ಪ್ರಕರಣ ಇತ್ಯರ್ಥ ಮಾಡುವಲ್ಲಿ ಯಶಸ್ವಿಯಾಗಿದೆ. ಗುಂಪು ಜಗಳ, ಮನೆಗಳ್ಳತನ ಮುಂತಾದ ಪ್ರಕರಣಗಳು ಎಂದು ರವಿಕುಮಾರ್ ಅವರು ತಿಳಿಸಿದರು. ಇದನ್ನೂ ಓದಿ: ಬಿಜೆಪಿಯಲ್ಲಿ ಮುಗಿದಿಲ್ಲ ನಾಯಕತ್ವ ಗೊಂದಲ- ರಾತ್ರೋರಾತ್ರಿ ದೆಹಲಿಗೆ ಸಿಪಿವೈ ದೌಡು

ಅಕ್ರಮ ಮರಳುಗಾರಿಕೆ ವಿರುದ್ಧ ಕ್ರಮ ಅಕ್ರಮವಾಗಿ ಮರಳು ದಂಧೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸಕ್ರಮ ಮರುಳುಗಾರಿಕೆಗೆ ಮಾತ್ರ ಜಿಲ್ಲೆಯಲ್ಲಿ ಅನುಮತಿಸಿದೆ. ಇದಲ್ಲದೆ ನಗರದ ಅನೇಕ ಕಡೆ ಅಪಘಾತ ಪ್ರಕರಣಗಳು ಕಂಡು ಬರುತ್ತಿದ್ದು, ಹೊರಗಡೆಯಿಂದ ನಗರ ಪ್ರವೇಶಿಸುವ ರಿಂಗ್ ರಸ್ತೆಗಳಲ್ಲಿ ಹೆಚ್ಚು ಸಂಭವಿಸುತ್ತಿವೆ. ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಬೆಳಗ್ಗೆ 8 ರಿಂದ ಬೆಳಗ್ಗೆ 10 ಗಂಟೆಯವರೆಗೆ ಹಾಗೂ ಸಾಯಂಕಾಲ 4 ರಿಂದ ರಾತ್ರಿ 8 ಗಂಟೆಯವರೆಗೆ ಸಿಗ್ನಲ್‍ಗಳಲ್ಲಿ ಅತಿವೇಗವಾಗಿ ನಗರ ಪ್ರವೇಶಿಸುವ ವಾಹನಗಳ ನಿಯಂತ್ರಿಸಲು ಟ್ರಾಫಿಕ್ ಪೊಲೀಸರ (ಇಂಟರ್ಸೆಪ್ಟರ್) ನಿಯೋಜನೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ವಿವರಿಸಿದರು.

ಸಿಸಿಟಿವಿ ಹೆಚ್ಚಳ:
ನಗರದಲ್ಲಿ ಸುಮಾರು 7 ಲಕ್ಷಕ್ಕೂ ಅಧಿಕ ಜನಸಂಖ್ಯೆ ಇದ್ದು, ಕೇವಲ 1,000 ದಷ್ಟು ಸಿಸಿಟಿವಿಗಳು ಇವೆ. ಇವುಗಳನ್ನು ಹೆಚ್ಚಿಸುವ ಅವಶ್ಯಕತೆ ಇದ್ದು, ಮುಂದಿನ ದಿನಗಳಲ್ಲಿ 5000 ಕ್ಕಿಂತ ಹೆಚ್ಚಿನ ಸಿಸಿಟಿವಿಗಳನ್ನು ನಗರದಲ್ಲಿ ಅಳವಡಿಸಿ, ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದರು.

ಹೊಸದಾಗಿ ರಚನೆಗೊಂಡಿರುವ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸದ್ಯ ಶೇ. 50 ರಷ್ಟು ಅಧಿಕಾರಿಗಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಇನ್ನುಳಿದ ಅಧಿಕಾರಿಗಳ ನೇಮಕ ಆದಷ್ಟು ಬೇಗ ಪೂರ್ಣಗೊಳ್ಳಲಿದೆ ಎಂದ ಅವರು, ಸದ್ಯ 300 ಮಂದಿ ತರಬೇತಿ ಪಡೆಯುತ್ತಿದ್ದು, ಅವರು ಮರಳಿದ ಬಳಿಕ ಮತ್ತಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಲಾಗುವುದು ಎಂದು ತಿಳಿಸಿದರು.

TAGGED:dr. y s ravi kumarKalaburagiPublic TVಕಲಬುರಗಿಡಾ. ವೈ.ಎಸ್ ರವಿ ಕುಮಾರ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
13 seconds ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
19 seconds ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
22 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
25 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
25 minutes ago
karnataka trekking SOP
Bengaluru City

ರಾಜ್ಯದಲ್ಲಿ ಟ್ರೆಕ್ಕಿಂಗ್‌ಗೆ ಹೊಸ ಗೈಡ್‌ಲೈನ್ಸ್ – ಚಾರಣಿಗರ ಮೊಬೈಲ್‌ಗೆ ಟ್ರ್ಯಾಕಿಂಗ್ ಆ್ಯಪ್ ಕಡ್ಡಾಯ: ಈಶ್ವರ್ ಖಂಡ್ರೆ

Public TV
By Public TV
38 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?