ತುಮಕೂರು: ಮುಂಬರುವ 2024ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ಜೆಡಿಎಸ್ ಪಕ್ಷವು 120 ಸ್ಥಾನಗಳನ್ನು ಗೆಲ್ಲುವುದಿಲ್ಲ, ನಮ್ಮ ಪಕ್ಷದ ನಾಯಕರು ಮುಖ್ಯಮಂತ್ರಿಯೂ ಆಗುವುದಿಲ್ಲ ಎಂದು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಸ್ವಪಕ್ಷದ ವಿರುದ್ಧವೇ ಹೇಳಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ವಿಕಲಚೇತನರು ದೇವರ ಮಕ್ಕಳಿದ್ದಂತೆ: ಲಕ್ಷ್ಮೀ ಹೆಬ್ಬಾಳ್ಕರ್
ಗುಬ್ಬಿ ತಾಲೂಕಿನ ಎಂ.ಎಚ್ ಪಟ್ಟಣ ಗ್ರಾಮ ಪಂಚಾಯಿತಿ ಆವರಣದಲ್ಲಿ ಕೃಷಿ ಇಲಾಖೆಯ ಮಾಹಿತಿ ರಥಕ್ಕೆ ಚಾಲನೆ ನೀಡಿ ಅಮಾತನಾಡಿದ ಅವರು, ನಮ್ಮ ಜೆಡಿಎಸ್ ಪಕ್ಷದಲ್ಲಿ ಇನ್ನೇನು ಮಾತನಾಡುವ ಹಾಗಿಲ್ಲ. ನಾವು ಮುಖ್ಯಮಂತ್ರಿ ಆಗೋದಿಲ್ಲ. ಜೆಡಿಎಸ್ 125 ಸ್ಥಾನಗಳನ್ನು ಗೆಲ್ಲುವುದಿಲ್ಲ ಎಂದು ಸ್ವಪಕ್ಷದ ಬಗ್ಗೆಯೇ ಮಾತನಾಡಿದರು.
ಕಾಂಗ್ರೆಸ್ ಪಕ್ಷದವರು ಸಿಎಂ ಕುರ್ಚಿ ಬಗ್ಗೆ ಯಾಕೆ ಮಾತನಾಡುತ್ತಾರೋ ತಿಳಿಯುತ್ತಿಲ್ಲ. ಕಾಂಗ್ರೆಸ್ ಪಕ್ಷವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗೆದ್ದಾಗ ಮಾತ್ರ ಸಿಎಂ ಕುಸ್ತಿ ಬಗ್ಗೆ ಚಿಂತನೆ ಮಾಡಬೇಕು. ಅದನ್ನು ಬಿಟ್ಟು ಪ್ರಚಾರಕ್ಕೆ ಮಾತನಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ಪಕ್ಷದ ವಿರುದ್ಧ ಕಿಡಿ ಕಾರಿದ್ದಾರೆ.
ಪ್ರಸ್ತುತ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಇಂಧನಗಳ ಬೆಲೆ ಏರಿಕೆ ಕೃಷಿ ಕ್ಷೇತ್ರದ ಮೇಲೆ ಮಾತ್ರವಲ್ಲದೆ ದೇಶದ ಪ್ರತಿಯೊಂದು ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿದೆ ಹಾಗೂ ಸಾರ್ವಜನಿಕವಾಗಿ ತೊಂದರೆಯಾಗಿದೆ. ಕೈಗಾರಿಕೆಗಳಿಗೂ ಬೆಲೆ ಏರಿಕೆಯ ಬಿಸಿ ತಟ್ಟಿದೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಇಂಧನಗಳ ಮೇಲಿನ ತೆರಿಗೆಯನ್ನು ಕಡಿಮೆ ಮಾಡಬೇಕು ಕೇಂದ್ರ 33 ರೂ.ಗಳು, ರಾಜ್ಯ ಸರ್ಕಾರ 28 ರೂ.ಗಳ ತೆರಿಗೆ ಹಾಕುತ್ತಿವೆ. ಕೇಂದ್ರ ಸರ್ಕಾರ 20 ರೂಪಾಯಿ ರಾಜ್ಯ ಸರ್ಕಾರ ಹತ್ತು ರೂಪಾಯಿ ತೆರಿಗೆ ಕಡಿಮೆ ಮಾಡಿದರೆ ಜನರಿಗೆ ಹೆಚ್ಚು ಅನುಕೂಲವಾಗುತ್ತದೆ ಎಂದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬಗ್ಗೆ ಮಾಧ್ಯಮಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಸಾರ್ವಜನಿಕರಿಂದ ವ್ಯಾಪಕ ವಿರೋಧ ವ್ಯಕ್ತವಾದರೂ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿದ್ದೆ ಮಾಡುತ್ತಿರುವುದು ಅಸಹನೀಯವಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜನರನ್ನು ದರೋಡೆ ಮಾಡುತ್ತಿದೆ. ಇದನ್ನು ಸಾರ್ವಜನಿಕರು ಅರ್ಥಮಾಡಿಕೊಳ್ಳಬೇಕು ಎಂದಿದ್ದಾರೆ.