ಬೆಂಗಳೂರು: ಸ್ಯಾಂಡಲ್ವುಡ್ನಲ್ಲಿ ಬಹುನೀರಿಕ್ಷೆಯನ್ನು ಹುಟ್ಟಿಸಿರುವ ಸಿನಿಮಾ ವಿಕ್ರಾಂತ್ ರೋಣ. ಕಿಚ್ಚ ಸುದೀಪ್ ತಮ್ಮ ಸಿನಿಮಾದ ಹೊಸ ಅಪ್ಡೇಟ್ಸ್ ಅನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಅಡುಗೆ ಮಾಡುವ ವರ ಬೇಕಾಗಿದ್ದಾನೆ- ಜಾಹೀರಾತು ವೈರಲ್
ಕಿಚ್ಚ ಅಭಿನಯದ ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣದ ಡಬ್ಬಿಂಗ್ ಕಾರ್ಯ ಶುರುವಾಗಿದೆ. ಬಹುದಿನಗಳ ನಂತರ ಸಿನಿಮಾ ಡಬ್ಬಿಂಗ್ಗಾಗಿ ಮೈಕ್ ಮುಂದೆ ನಿಂತಿರೋದಾಗಿ ಕಿಚ್ಚ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
View this post on Instagram
ಅನುಪ್ ಭಂಡಾರಿ ನಿರ್ದೇಶನದ ವಿಕ್ರಾಂತ್ ರೋಣ ಸಿನಿಮಾ ಕನ್ನಡದ ಜೊತೆಗೆ ತಮಿಳು, ತೆಲುಗು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ ತೆರೆಕಾಣಲಿದೆ. ಕನ್ನಡದ ಜೊತೆಗೆ ತೆಲುಗು, ತಮಿಳು ಹಾಗೂ ಹಿಂದಿ ಭಾಷೆಗೆ ಸುದೀಪ್ ತಮ್ಮ ಪಾತ್ರಕ್ಕೆ ಡಬ್ಬಿಂಗ್ ಮಾಡಲಿದ್ಧಾರೆ. ತ್ರಿಡಿ ಟೆಕ್ನಾಲಜಿಯಲ್ಲಿ ಜಾಕ್ ಮಂಜು ನಿರ್ಮಾಣದಲ್ಲಿ ಈ ಬಿಗ್ ಬಜೆಟ್ ಸಿನಿಮಾ ಮೂಡಿಬರುತ್ತಿದೆ.
ಸುದೀಪ್ ನಟನೆಯ ಮತ್ತೋಂದು ಸಿನಿಮಾ ಕೋಟಿಗೊಬ್ಬ3 ಅಗಸ್ಟ್ ತಿಂಗಳು ತೆರೆಕಾಣುವ ಸಾಧ್ಯತೆ ಇದೆ. ಕಿಚ್ಚನ ಅಭಿನಯವನ್ನು ತೆರೆ ಮೇಲೆ ಕಾಣಲು ಅಭಿಮಾನಿಗಳು ಕಾತುರರಾಗಿದ್ದಾರೆ.