Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾಂಗ್ರೆಸ್, ಜೆಡಿಎಸ್ ನಾಯಕರ ಸೆಲ್ಫ್ ಕ್ವಾರಂಟೈನ್ ಮುಗಿದಿಲ್ವಾ?: ಬೊಮ್ಮಾಯಿ ಲೇವಡಿ

Public TV
Last updated: June 28, 2021 7:52 pm
Public TV
Share
3 Min Read
Basavaraj Bommai Udupi2
SHARE

ಉಡುಪಿ: ಕೊರೊನಾ ಸಂದರ್ಭದಲ್ಲಿ ಕಾಂಗ್ರೆಸ್, ಜೆಡಿಎಸ್ ನಾಯಕರು ತಮ್ಮ ಮನೆಗಳಲ್ಲಿ ಸೆಲ್ಫ್ ಕ್ವಾರಂಟೈನ್ ಆಗಿದ್ದಾಗ ಬಿಜೆಪಿಯ ಕಾರ್ಯಕರ್ತರು ಫೀಲ್ಡಿಗೆ ಇಳಿದು ಜನಸಾಮಾನ್ಯರ ಸೇವೆಯಲ್ಲಿ ತೊಡಗಿದ್ದಾರೆ. ಕಾಂಗ್ರೆಸ್, ಜೆಡಿಎಸ್ ನಾಯಕರು ಮನೆಯಲ್ಲೆ ಕುಳಿತು ಕೊಂಡಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ವಿಪಕ್ಷಗಳಿಗೆ ಚಾಟಿ ಬೀಸಿದ್ದಾರೆ.

ಉಡುಪಿ ಜಿಲ್ಲಾ ಪ್ರವಾಸದ ಅಂಗವಾಗಿ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರ ಜತೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಲವು ವಿಷಯಗಳ ಕುರಿತು ಚರ್ಚಿಸಲಾಯಿತು. #BJPUdupi @BJP4Karnataka pic.twitter.com/dZnmFI8zqv

— Basavaraj S Bommai (@BSBommai) June 28, 2021

ಉಡುಪಿ ಜಿಲ್ಲಾ ಬಿಜೆಪಿ ಕಛೇರಿಗೆ ಭೇಟಿ ನೀಡಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಬಿಜೆಪಿ ಜಿಲ್ಲಾ ಪದಾಧಿಕಾರಿಗಳ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದರು. ಬಿಜೆಪಿ ಪದಾಧಿಕಾರಿಗಳು ಜನಪ್ರತಿನಿಗಳು, ಕಾರ್ಯಕರ್ತರು ಬಹಳ ದೊಡ್ಡ ಪ್ರಮಾಣದಲ್ಲಿ, ಅತ್ಯಂತ ಉತ್ತಮ ರೀತಿಯಲ್ಲಿ ಜನಸೇವೆಗೈದಿದ್ದಾರೆ. ಸಾಮಾನ್ಯ ನಾಗರಿಕರು ಕೋವಿಡ್‍ನಿಂದ ಹೆದರಿರುವ ಸಂದರ್ಭದಲ್ಲಿ ಹಾಗೂ ವಿರೋಧ ಪಕ್ಷಗಳು ಮನೆಯಲ್ಲೇ ಸೆಲ್ಪ್ ಕ್ವಾರೆಂಟೈನ್ ಮಾಡಿರುವ ಸನ್ನಿವೇಶದಲ್ಲಿ, ಬಿಜೆಪಿ ಕಾರ್ಯಕರ್ತರು ಪ್ರತಿಯೊಂದು ಬೂತ್‍ನಲ್ಲಿ ಕೋವಿಡ್ ಬಗ್ಗೆ ಜನಜಾಗೃತಿ ಮೂಡಿಸುವ ಜೊತೆಗೆ ಅಗತ್ಯ ಸಹಾಯದೊಂದಿಗೆ ಲಸಿಕೆ ವಿತರಣಾ ಅಭಿಯಾನದಲ್ಲೂ ಸರಕಾರ ಮತ್ತು ಅಕಾರಿಗಳ ಜೊತೆ ಕೈಜೋಡಿಸಿ ಸಾರ್ಥಕ ಸೇವೆ ಸಲ್ಲಿಸಿದ್ಧಾರೆ. ಅಂತಹ ಎಲ್ಲ ಕಾರ್ಯಕರ್ತರ ಸೇವಾ ಮನೋಭಾವ ಪ್ರಶಂಸನೀಯ ಎಂದು ರಾಜ್ಯ ಗೃಹ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಇದನ್ನೂ ಓದಿ:  ರಾಜ್ಯದಲ್ಲಿ 2,576 ಹೊಸ ಪ್ರಕರಣ, 93 ಸಾವು – 5,933 ಮಂದಿ ಡಿಸ್ಚಾರ್ಜ್

ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ನಿರ್ಮಿಸಿರುವ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ನೂತನ ಕಟ್ಟಡದ ಉದ್ಘಾಟನೆಯನ್ನು ಇಂದು ನೆರವೇರಿಸಲಾಯಿತು.
ಶಾಸಕ ಶ್ರೀ ಸುನಿಲ್ ಕುಮಾರ್, ಪುರಸಭೆ ಅಧ್ಯಕ್ಷರಾದ ಸುಮಾ ಕೇಶವ್, ಉಡುಪಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. pic.twitter.com/bVDmvwP1dw

— Basavaraj S Bommai (@BSBommai) June 28, 2021

ಡಾ ಶ್ಯಾಮಪ್ರಸಾದ್ ಮುಖರ್ಜಿ, ದೀನದಯಾಳ್ ಉಪಾಧ್ಯಾಯರವರಂತಹ ಹಿರಿಯರು ತ್ಯಾಗ ಬಲಿದಾನದಿಂದ, ಸಿದ್ಧಾಂತಗಳಡಿಯಲ್ಲಿ ಪಕ್ಷವನ್ನು ಕಟ್ಟಿದ್ದಾರೆ. ಅವರ ದೂರದರ್ಶಿತ್ವದ ಚಿಂತನೆಗಳು ಮತ್ತು ತತ್ವಾದರ್ಶಗಳನ್ನು ಮೈಗೂಡಿಸಿಕೊಂಡು ಪಕ್ಷವನ್ನು ಬೆಳೆಸುವ ಗುರುತರವಾದ ಜವಾಬ್ದಾರಿ ಎಲ್ಲ ಕಾರ್ಯಕರ್ತರ ಮೇಲಿದೆ. ದಕ್ಷಿಣ ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಜನಸಂಘದ ನೇತೃತ್ವದಲ್ಲಿ ಉಡುಪಿ ನಗರಸಭೆ ಅಕಾರಕ್ಕೇರಿದೆ. ಬಿಜೆಪಿ ಕಾರ್ಯಕರ್ತರು ಸೇವಾ ಪ್ರವೃತ್ತಿಯಿಂದ ತೊಡಗಿಸಿಕೊಂಡಿರುವವರು. ಜನತೆ ಬಿಜೆಪಿಯೊಂದಿಗೆ ಬಹಳಷ್ಟು ನಿರೀಕ್ಷೆಯನ್ನು ಇಟ್ಟುಕೊಂಡಿರುವ ಈ ಕಾಲಘಟ್ಟದಲ್ಲಿ ದಣಿವರಿಯದೆ ಸೇವೆಯಲ್ಲಿ ತೊಡಗಿಸಿಕೊಂಡು ಜನತೆಯ ಆಶೋತ್ತರಗಳನ್ನು ಈಡೇರಿಸಿದಾಗ ನಿಗದಿತ ಗುರಿಯನ್ನು ತಲುಪಲು ಸಾಧ್ಯ ಎಂದರು.

ಹಾವೇರಿ ಜಿಲ್ಲೆಯ ಮಾದರಿಯಲ್ಲಿ ಮಕ್ಕಳನ್ನು ಕೋವಿಡ್ 3ನೇ ಅಲೆಯಿಂದ ರಕ್ಷಣೆ ಮಾಡಲು ಉಡುಪಿ ಜಿಲ್ಲೆಯಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಕಾರ್ಕಳದಲ್ಲಿ ಚಾಲನೆ ನೀಡಲಾಯಿತು.ಮಕ್ಕಳಿಗೆ ಪೌಷ್ಠಿಕಾಂಶ ಆಹಾರದ ಪೊಟ್ಟಣ, ಆಹಾರ ಸಾಮಗ್ರಿಯ ಕಿಟ್ ಗಳನ್ನು ಇದೇ ಸಂದರ್ಭದಲ್ಲಿ ವಿತರಣೆ ಮಾಡಲಾಯಿತು. ಶಾಸಕ ವಿ. ಸುನಿಲ್ ಕುಮಾರ್ ಉಪಸ್ಥಿತರಿದ್ದರು. pic.twitter.com/2U2gCyin2r

— Basavaraj S Bommai (@BSBommai) June 28, 2021

ಕಿಂಡಿ ಅಣೆಕಟ್ಟುಗಳಿಗೆ ಮೊದಲ ಪ್ರಾಶಸ್ತ್ಯ:

ಉಡುಪಿ ಜಿಲ್ಲೆಯಲ್ಲಿ ನಿಯಮಿತವಾಗಿ ಮಳೆ ಸುರಿಯುತ್ತದೆ ಆದರೆ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಉಂಟಾಗುತ್ತದೆ. ಬಿದ್ದ ಮಳೆ ನೀರನ್ನು ಸಂರಕ್ಷಿಸುವುದು ನಮ್ಮ ಜವಾಬ್ದಾರಿ. ಸಾರ್ವಜನಿಕ ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ನಿಯಮಿತವಾಗಿ ಭಾಗವಹಿಸಲಾಗುವುದು. ಉಡುಪಿ ಜಿಲ್ಲೆಯಾದ್ಯಂತ ಕಿಂಡಿ ಅಣೆಕಟ್ಟುಗಳ ನಿರ್ಮಾಣ ಪ್ರಗತಿಯಲ್ಲಿದ್ದು, ರಸ್ತೆಗಳ ಅಭಿವೃದ್ಧಿ, ಆಸ್ಪತ್ರೆಗಳನ್ನು ಮೇಲ್ದರ್ಜೆಗೇರಿಸುವುದು ಎಂದರು.

Basavaraj Bommai Udupi medium

ಕರಾವಳಿ ಅಭಿವೃದ್ಧಿ ಪ್ರಾಕಾರದ ಮುಖಾಂತರ ಪ್ರವಾಸೋದ್ಯಮಕ್ಕೆ ವಿಶೇಷ ಒತ್ತು ನೀಡಿ ಕಡಲ ತೀರ ಕೊರತೆಗೆ ಸಮಸ್ಯೆಗೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳುವುದರ ಜೊತೆಗೆ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.

Basavaraj Bommai Udupi4 medium

ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಶಾಸಕರಾದ ಕೆ.ರಘುಪತಿ ಭಟ್, ವಿ.ಸುನೀಲ್ ಕುಮಾರ್, ಲಾಲಾಜಿ ಆರ್. ಮೆಂಡನ್, ಕರಾವಳಿ ಅಭಿವೃದ್ಧಿ ಪ್ರಾಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ್ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಗುರ್ಮೆ ಸುರೇಶ್ ಶೆಟ್ಟಿ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

TAGGED:Basavaraj Bommaipublictvudupiಉಡುಪಿಕಾಂಗ್ರೆಸ್ಕೊರೊನಾಜೆಡಿಎಸ್ಪಬ್ಲಿಕ್ ಟಿವಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

You Might Also Like

Sidharth Malhotra Kiara
Bollywood

ಸಿದ್ಧಾರ್ಥ್ ಮಲ್ಹೋತ್ರಾ, ಕಿಯಾರಾ ಅಡ್ವಾಣಿ ದಂಪತಿಗೆ ಹೆಣ್ಣು ಮಗು ಜನನ

Public TV
By Public TV
5 hours ago
bakery
Bengaluru City

ಬೇಕರಿ, ದಿನಸಿ ಅಂಗಡಿಗಳಿಗೆ ಲಕ್ಷ ಲಕ್ಷ ಟ್ಯಾಕ್ಸ್‌ – ಬಂದ್‌ ಎಚ್ಚರಿಕೆ ಕೊಟ್ಟ ಮಾಲೀಕರು

Public TV
By Public TV
5 hours ago
fauja singh Dead
Crime

ವಾಕಿಂಗ್ ವೇಳೆ ಕಾರು ಡಿಕ್ಕಿ – ಮ್ಯಾರಥಾನ್ ಓಟಗಾರ ಶತಾಯುಷಿ ಫೌಜಾ ಸಿಂಗ್ ಸಾವು

Public TV
By Public TV
5 hours ago
rowdy sheeter murder
Bengaluru City

ಬೆಂಗಳೂರಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್ ಹತ್ಯೆ

Public TV
By Public TV
5 hours ago
01 6
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-1

Public TV
By Public TV
5 hours ago
02 7
Big Bulletin

ಬಿಗ್‌ ಬುಲೆಟಿನ್‌ 15 July 2025 ಭಾಗ-2

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?