ಬೆಂಗಳೂರು: ನಟಿ ಹಾಗೂ ಬಿಗ್ ಬಾಸ್ ಖ್ಯಾತಿಯ ನಯನಾ ಪುಟ್ಟಸ್ವಾಮಿ ಅವರ ಮನೆಗೆ ಹೊಸ ಅತಿಥಿ ಆಗಮನವಾಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಈ ಕುರಿತು ಅವರು ಇನ್‍ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇಟ್ ಇಸ್ ಎ ಬಾಯ್ ಎಂದು ಬರೆದುಕೊಂಡು ಮಗುವಿನ ಕೈ ಫೋಟೋ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಗಂಡು ಮಗು ಜನನವಾಗಿರುವುದನ್ನು ತಿಳಿಸಿದ್ದಾರೆ.
View this post on Instagram
ನಯನಾ ಪುಟ್ಟಸ್ವಾಮಿ ಬಿಗ್ ಬಾಸ್ 6 ಹಾಗೂ ಪ್ಯಾಟೆ ಹುಡ್ಗೀರ್ ಹಳ್ಳಿ ಲೈಫ್ ಸೀಸನ್ 1ರ ಮೂಲಕ ಸಹ ಜನಪ್ರಿಯರಾಗಿದ್ದಾರೆ. ಹಲವು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದು, ಸಿರಿಯಲ್‍ಗಳಲ್ಲಿ ಸಹ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ತಮ್ಮ ಪತಿ ಚರಣ್ ಪೆನ್ಸಿಲ್ವೇನಿಯಾದ ಫಿಲಡೆಲ್ಫಿಯಾದ ವಿಶ್ವವಿದ್ಯಾಲಯದಲ್ಲಿ ಕೆಲಸ ಮಾಡುತ್ತಿರುವುದಿರಿಂದ ಅಲ್ಲಿಗೇ ಶಿಫ್ಟ್ ಆಗಿದ್ದಾರೆ. ಇದೇ ವೇಳೆ ಅವರೂ ಸಹ ಫಿಲ್ಮ್ ಮೇಕಿಂಗ್ ಕೋರ್ಸ್ ಮಾಡುತ್ತಿದ್ದಾರಂತೆ. ಅಲ್ಲದೆ ಭಾರತಕ್ಕೆ ಮರಳಿ ಕನ್ನಡ ಚಿತ್ರರಂಗದಲ್ಲಿ ಸೇವೆ ಮಾಡಬೇಕೆಂಬ ಬಯಕೆಯನ್ನು ಸಹ ಅವರು ಈ ಹಿಂದೆ ತಿಳಿಸಿದ್ದರು.
View this post on Instagram
ಇತ್ತೀಚೆಗೆ ಅವರು ಪ್ರಗ್ನೆನ್ಸಿ ವಿಚಾರವನ್ನು ಸಹ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದರು. ಇದೀಗ ಗಂಡು ಮಗು ಜನನವಾಗಿರುವ ಕುರಿತು ಪೋಸ್ಟ್ ಮಾಡುವ ಮೂಲಕ ಅಭಿಮಾನಿಗಳಿಗೆ ಸಂತಸದ ವಿಚಾರ ತಿಳಿಸಿದ್ದಾರೆ.