Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅವಳಿ ನಗರದ ರಸ್ತೆ ದುರಸ್ತಿ, ಒಳ ಚರಂಡಿ ನಿರ್ಮಾಣಕ್ಕೆ 240 ಕೋಟಿ ಅನುದಾನ: ಬಿ.ಎ ಬಸವರಾಜ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಅವಳಿ ನಗರದ ರಸ್ತೆ ದುರಸ್ತಿ, ಒಳ ಚರಂಡಿ ನಿರ್ಮಾಣಕ್ಕೆ 240 ಕೋಟಿ ಅನುದಾನ: ಬಿ.ಎ ಬಸವರಾಜ್

Dharwad

ಅವಳಿ ನಗರದ ರಸ್ತೆ ದುರಸ್ತಿ, ಒಳ ಚರಂಡಿ ನಿರ್ಮಾಣಕ್ಕೆ 240 ಕೋಟಿ ಅನುದಾನ: ಬಿ.ಎ ಬಸವರಾಜ್

Public TV
Last updated: June 30, 2021 3:15 pm
Public TV
Share
2 Min Read
byrathi basavaraj
SHARE

ಹುಬ್ಬಳ್ಳಿ: ಧಾರವಾಡ- ಹುಬ್ಬಳ್ಳಿ ನಗರದ ರಸ್ತೆಗಳ ದುರಸ್ತಿ, ಡಾಂಬರೀಕರಣ ಹಾಗೂ ಒಳಚರಂಡಿ ನಿರ್ಮಾಣಕ್ಕೆ 240 ಕೋಟಿ ಅನುದಾನ ಬೇಡಿಕೆಯನ್ನು ಪಾಲಿಕೆಯಿಂದ ನೀಡಲಾಗಿದೆ. ಶೀಘ್ರವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಬಿ.ಎ.ಬಸವರಾಜ್ ಹೇಳಿದರು.

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಮತ್ತು ಮಹಾನಗರ ಪಾಲಿಕೆ ಅಡಿಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಿಸಿದ ಅವರು, ಈ ಕುರಿತು ಡೆನಿಸನ್ಸ್ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

HBL 3 1 medium

ಸ್ಮಾರ್ಟ್ ಸಿಟಿ ಕಾಮಗಾರಿ ಆಮೆಗತಿ ಸಾಗುತ್ತಿದೆ. ಇಂದು ಕಾಮಗಾರಿ ಸ್ಥಳಗಳಿಗೆ ಭೇಟಿ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಲಾಗಿದೆ. ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಹಗಲು-ರಾತ್ರಿ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಿದ್ದೇನೆ. ನಗರದ ತೋಳನಕೆರೆ ಅಭಿವೃದ್ಧಿ ಕಾರ್ಯ ಮುಕ್ತಾಯ ಹಂತದಲ್ಲಿದೆ. ಇನ್ನು ಒಂದು ತಿಂಗಳೊಳಗಾಗಿ ಕೆಲಸವನ್ನು ಪೂರ್ಣಗೊಳಿಸುಲಾಗುವುದು ಎಂದರು.

ತೋಳನ ಕೆರೆಯಲ್ಲಿನ ಜೊಂಡನ್ನು ತೆಗೆದು ಶುದ್ಧೀಕರಣ ಮಾಡಿ ಕೆರೆಯ ಸುತ್ತಲೂ ಸಸಿಗಳನ್ನು ನೆಡುವಂತೆ ಸೂಚಿಸಿದ್ದೇನೆ. ರೇಣುಕಾ ನಗರದ ಸ್ಮಾರ್ಟ್ ರಸ್ತೆ ಪ್ಯಾಕೇಜ್ ಡಾಂಬರೀಕರಣ ಆಗಸ್ಟ್ ಅಂತ್ಯದೊಳಗಾಗಿ ಪೂರ್ಣಗೊಳ್ಳಲಿದೆ. ಬೆಂಗೇರಿ ಮಾರುಕಟ್ಟೆ ಅಭಿವೃದ್ಧಿ ಕಾಮಗಾರಿಯು ಸಹ ಮುಕ್ತಾಯ ಹಂತದಲ್ಲಿದೆ. ಜನತಾ ಬಜಾರ್ ಮಾರುಕಟ್ಟೆ ಕಾಮಗಾರಿಯ ಕೆಲಸ ಪ್ರಗತಿಯಲ್ಲಿದ್ದು ಡಿಸೆಂಬರ್ ತಿಂಗಳಿನೊಳಗಾಗಿ ಮುಗಿಸಿಕೊಡುವಂತೆ ಆದೇಶಿಸಲಾಗಿದೆ. ಗಣೇಶಪೇಟೆಯ ಹೊಸ ಮೀನು ಮಾರುಕಟ್ಟೆ ನಿರ್ಮಾಣ ಕಾಮಗಾರಿಯು ಸಪ್ಟೆಂಬರ್ ಅಂತ್ಯದೊಳಗೆ ಪೂರ್ಣಗೊಳ್ಳಿದೆ ಎಮದು ತಿಳಿಸಿದರು.

HBL 2 1 medium

ಪಾಲಿಕೆ ಆಸ್ತಿ ಕರ ಹೆಚ್ಚಳವಾಗಿರುವ ಕುರಿತು ಮನವಿಗಳು ಬಂದಿದೆ. ಇದನ್ನು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಮರುಪರಿಶೀಲನೆ ಮಾಡಲಾಗುವುದು. 140 ಕೋಟಿ ಮಹತ್ಮಾ ಗಾಂಧೀ ನಗರ ವಿಕಾಸ ಯೋಜನೆ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿ ಇದ್ದು, ಶೀಘ್ರವಾಗಿ ಚಾಲನೆ ನೀಡಲಾಗುವುದು. ಕೋವಿಡ್ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರ ಕೊರತೆಯಿಂದ ಅಭಿವೃದ್ಧಿ ಕೆಲಸದಲ್ಲಿ ವಿಳಂಬವಾಗಿದೆ. ಪಾಲಿಕೆಯ ಬಾಕಿ ಇರುವ ಪಿಂಚಣಿ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಲು ಸಹಮತವಿದೆ: ಆರ್.ಅಶೋಕ್

ಅವಳಿ ನಗರದಲ್ಲಿ ರೈತರ ಮನವೊಲಿಸಿ ಅವರಿಂದ ಭೂಮಿ ಪಡೆದು ಬಡಾವಣೆ ನಿರ್ಮಿಸಿ ಸಾರ್ವಜನಿಕರಿಗೆ ನಿವೇಶನಗಳನ್ನು ಮಾಡಿ ಕೊಡುವ ಯೋಜನೆ ಇದೆ. ಮುಕ್ತಾಯ ಹಂತಕ್ಕೆ ಬಂದಿರುವ ಮಹಾತ್ಮ ಗಾಂಧಿ (ಗ್ಲಾಸ್ ಹೌಸ್) ಉದ್ಯಾನವನ, ಸ್ಮಾರ್ಟ್ ಸಿಟಿ ರಸ್ತೆಗಳು ಹಾಗೂ ಇತರೆ ಕಾಮಗಾರಿಗಳನ್ನು ಮುಂದಿನ ತಿಂಗಳಲ್ಲಿ ಲೋಕಾರ್ಪಣೆಗೊಳಿಸಲಾಗುವುದು. 30 ಕೋಟಿ ವೆಚ್ಚದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಬಸ್ ನಿಲ್ದಾಣ, 150 ಕೋಟಿ ವೆಚ್ಚದಲ್ಲಿ ಕ್ರೀಡಾ ಸಮುಚ್ಚಯ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದರು.

HBL 1 1 medium

ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ ನವಲಗುಂದ ಶಾಸಕ ಶಂಕರ ಪಾಟೀಲ್, ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಕೆ.ಯು.ಡಿ.ಎಪ್.ಸಿ ಎಕ್ಸಿಕ್ಯೂಟಿವ್ ಡೈರೆಕ್ಟರ್ ಶ್ರೀನಿವಾಸ, ಪಾಲಿಕೆ ಆಯುಕ್ತ ಡಾ.ಸುರೇಶ್ ಇಟ್ನಾಳ, ಸ್ಮಾರ್ಟ್ ಸಿಟಿ ಯೋಜನೆ ವ್ಯವಸ್ಥಾಪಕ ನಿರ್ದೇಶಕ ಶಕೀಲ್ ಅಹ್ಮದ್ ಸೇರಿದಂತೆ ನಗರಾಭಿವೃದ್ಧಿ ಪ್ರಾಧಿಕಾರದ ಇತರೆ ಸದಸ್ಯರು ಉಪಸ್ಥಿತರಿದ್ದರು.

TAGGED:dharwadhubballiPublic TVಧಾರವಾಡಪಬ್ಲಿಕ್ ಟಿವಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post
Pooja Hegde Udupi
ಉಡುಪಿಯಲ್ಲಿ ನಾಗದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಟಿ ಪೂಜಾ ಹೆಗ್ಡೆ
Cinema Districts Karnataka Latest Top Stories Udupi

You Might Also Like

Sunrisers Hyderabad 2
Cricket

ವಾಂಖೆಡೆಯಲ್ಲಿ ಮುಂಬೈ ಹುರಿದು ಮುಕ್ಕಿದ ಸನ್‌ ರೈಸರ್ಸ್‌ – ಹೈದ್ರಾಬಾದ್‌ಗೆ 6 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
4 seconds ago
udupi accident
Latest

ಉಡುಪಿ| ರಸ್ತೆ ಬದಿ ನಿಂತಿದ್ದ ಟ್ಯಾಂಕರ್‌ಗೆ ಬಸ್ ಡಿಕ್ಕಿ – ಮೂರು ಮಂದಿ ದುರ್ಮರಣ

Public TV
By Public TV
9 minutes ago
Bengaluru Rain 2 1
Bengaluru City

Bengaluru Rain Alert | ಬೆಂಗಳೂರಲ್ಲಿ ರಣ ಮಳೆಗೆ ಮತ್ತೆರಡು ಬಲಿ

Public TV
By Public TV
31 minutes ago
Vaibhav Suryavanshi 1
Cricket

ನನ್ನ ಬ್ಯಾಟ್‌ಗೆ ದೇವರೇ AI ಚಿಪ್ ಅಂಟಿಸಿದ್ದಾನೆ, ಈಗ ಅದನ್ನೇ ಬಳಸ್ತಿದ್ದೀನಿ – ಪಾಕ್ ಕ್ರಿಕೆಟ್ ತಜ್ಞನ ಮಾತಿಗೆ ವೈಭವ್ ಕೌಂಟರ್

Public TV
By Public TV
40 minutes ago
01 23
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-1

Public TV
By Public TV
58 minutes ago
02 NEW
Big Bulletin

ಬಿಗ್‌ ಬುಲೆಟಿನ್‌ 29 April 2026 ಭಾಗ-2

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?