ಕೌಟುಂಬಿಕ ಕಲಹ ಶಂಕೆ – 3 ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆ

Public TV
1 Min Read
dvg police station 2

ದಾವಣಗೆರೆ: ಕೌಟುಂಬಿಕ ಕಲಹ ಶಂಕೆ ಹಿನ್ನೆಲೆಯಲ್ಲಿ ಮೂರು ವರ್ಷದ ಮಗುವಿನೊಂದಿಗೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬನ್ನಿಕೋಡು ಗ್ರಾಮದಲ್ಲಿ ಜರುಗಿದೆ.

crime medium

ಹರ್ಷಿತಾ(3), ಚಂದ್ರಮ್ಮ (25), ಮೃತ ದುರ್ದೈವಿಗಳು ಎಂದು ತಿಳಿದುಬಂದಿದೆ. ಮೃತರಾದ ಚಂದ್ರಮ್ಮನ ಪತಿ ಮಂಜಪ್ಪ ಡಿ.ಆರ್ ಪೊಲೀಸ್ ಕಾನ್ಸ್‌ಟೇಬಲ್‌ ಆಗಿ ಸೇವೆ ಸಲ್ಲಿಸುತ್ತಿದ್ದು, ಇಂದು ಬೆಳಗ್ಗೆ ಕೆಲಸ ಮುಗಿಸಿ ಮನೆಗೆ ಬಂದಾಗ ಪತ್ನಿ, ಮಗು ಸಹಿತ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಪ್ರಕರಣ ಬೆಳಕಿಗೆ ಬಂದಿದೆ.

dvg police station 1 medium

ಮೂರು ವರ್ಷದ ಹೆಣ್ಣು ಮಗುವಿನೊಂದಿಗೆ ತಾನು ಆತ್ಮಹತ್ಯೆ ಮಾಡಿಕೊಂಡ ಚಂದ್ರಮ್ಮ ಮೃತ ನೋಡಿ ಪತ್ನಿ ಮಂಜಪ್ಪನಿಗೆ ಸಿಡಿಲು ಹೊಡೆದಂತಾಗಿದೆ. ಪೊಲೀಸ್ ಪೇದೆ ಮಂಜಪ್ಪ ಹಾಗು ಚಂದ್ರಮ್ಮನ ಕಳೆದ ಐದು ವರ್ಷಗಳ ಹಿಂದೆ ವಿವಾಹವಾಗಿದ್ದು, ಅನ್ಯೋನ್ಯವಾಗಿ ಇದ್ದರು ಎನ್ನಲಾಗಿದೆ. ಆದರೆ ಕಳೆದ ದಿನ ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ್ದು, ಮನನೊಂದು ಈ ರೀತಿಯಾಗಿ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

Police Jeep 1 2 medium

ಸದ್ಯ ಈ ಸಂಬಂಧ ಸ್ಥಳಕ್ಕೆ ಹರಿಹರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪೊಲೀಸರ ತನಿಖೆ ಬಳಿಕ ಸತ್ಯಾಸತ್ಯತೆ ಹೊರಬೀಳಲಿದೆ. ಇದನ್ನೂ ಓದಿ : ಬರ್ತ್ ಡೇ ಪಾರ್ಟಿಗೆ ತೆರಳಿದ್ದ ಯುವಕರು ನೀರುಪಾಲು

Share This Article