ಯಾದಗಿರಿ: ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಸಮರ್ಪಣ ಸಿ.ಎಸ್.ಆರ್ ಇನ್ಪೋಸಿಸ್ ಬೆಂಗಳೂರು, ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಚಿಕ್ಕಬಳ್ಳಾಪುರ, ಜಿಲ್ಲಾಡಳಿತ ಯಾದಗಿರಿ ವತಿಯಿಂದ ಕೋವಿಡ್ -19 ಮೂರನೇ ಅಲೆ ಹಿನ್ನೆಲೆಯಲ್ಲಿ ಅಪೌಷ್ಠಿಕಾಂಶದಿಂದ ಕೂಡಿದ ಮಕ್ಕಳ ಸಂರಕ್ಷಣೆಗಾಗಿ ಮುನ್ನೆಚ್ಚರಿಕೆ ಹಿನ್ನಲೆಯಲ್ಲಿ ಪೌಷ್ಠಿಕ ಆಹಾರ ವಿತರಣೆ ಯೋಜನೆಗೆ ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚಾಲನೆ ನೀಡಲಾಯಿತು.
ಜಿಲ್ಲಾಧಿಕಾರಿ ಡಾ.ರಾಗಪ್ರಿಯಾ ಆರ್. ಮಾತನಾಡಿ, ಯಾದಗಿರಿ ಜಿಲ್ಲೆಯು ಕರ್ನಾಟಕದಲ್ಲಿ ಅತೀ ಹಿಂದುಳಿದ ಜಿಲ್ಲೆಗಳಲ್ಲಿ ಒಂದಾಗಿದೆ. ಕೇಂದ್ರ ಸರ್ಕಾರವು ಯಾದಗಿರಿಯನ್ನು ಮಹತ್ವಾಕಾಂಕ್ಷೆಯ ಜಿಲ್ಲೆಯಾಗಿ ಗುರುತಿಸಿದೆ. ಕೇಂದ್ರ ಸರ್ಕಾರ ಮಹತ್ವಾಕಾಂಕ್ಷೆಯ ಜಿಲ್ಲೆಯ ಅಭಿವೃದ್ಧಿಗಾಗಿ 2 ಕೋಟಿ ರೂಪಾಯಿ ಅನುದಾನ ಘೋಷಿಸಿದೆ ಎಂದರು. ಇದನ್ನೂ ಓದಿ: ವೀಕೆಂಡ್ ಕರ್ಫ್ಯೂ ಇರಲ್ಲ, ಸಭೆ ಸಮಾರಂಭಕ್ಕೆ ಅವಕಾಶವಿಲ್ಲ – ಲಾಕ್‍ಡೌನ್ ಇನ್ನಷ್ಟು ಸಡಿಲ
ಇದರಲ್ಲಿ 75 ಲಕ್ಷ ರೂಪಾಯಿಗಳನ್ನು ಅಪೌಷ್ಠಿಕತೆ ಹೋಗಲಾಡಿಸುವುದಕ್ಕೆ ಕಾದಿರಿಸಲಾಗುವುದು ಎಂದು ಜಿಲ್ಲಾಧಿಕಾರಿ ಘೋಷಿಸಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪ್ರಭಾಕರ್ ಎಸ್ ಕವಿತಾಳ, ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಲಕ್ಷ್ಮೀಕಾಂತ್, ಇನ್ನಿತರರು ಉಪಸ್ಥಿತರಿದ್ದರು.