Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೂರು ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ- ಡಿ.ಕೆ.ಶಿವಕುಮಾರ್ ಒತ್ತಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೂರು ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ- ಡಿ.ಕೆ.ಶಿವಕುಮಾರ್ ಒತ್ತಾಯ

Bengaluru City

ಮೂರು ತಿಂಗಳೊಳಗೆ ಶೇ.80 ಜನರಿಗೆ ಕೋವಿಡ್ ಲಸಿಕೆ ಹಾಕಿಸಿ- ಡಿ.ಕೆ.ಶಿವಕುಮಾರ್ ಒತ್ತಾಯ

Public TV
Last updated: July 4, 2021 3:00 pm
Public TV
Share
3 Min Read
DK Shivakumar 4
SHARE

ಬೆಂಗಳೂರು: ಕೋವಿಡ್ 3ನೇ ಅಲೆಯಿಂದ ಜನರನ್ನು ರಕ್ಷಿಸಲು ಸೆಪ್ಟೆಂಬರ್ ಅಂತ್ಯದೊಳಗೆ ರಾಜ್ಯದ ಶೇ.80 ಜನರಿಗೆ ಲಸಿಕೆ ಹಾಕುವ ಸವಾಲಿಗೆ ಸಿದ್ದವಾಗುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸರ್ಕಾರಕ್ಕೆ ತಾಕೀತು ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು ಮೂರು ತಿಂಗಳೊಳಗೆ ರಾಜ್ಯದ ಶೇ. 80 ವಯಸ್ಕರಿಗೆ ಎರಡು ಡೋಸ್ ಲಸಿಕೆ ಹಾಕಿದರೆ ಕೊರೊನಾ 3ನೇ ಅಲೆಯಿಂದ ರಾಜ್ಯದ ರಕ್ಷಣೆ ಮಾಡಬಹುದಾಗಿದೆ ಎಂದು ಹೇಳಿದರು.

ಅಕ್ಟೋಬರ್ ತಿಂಗಳಲ್ಲಿ ಕೊರೊನಾ 3ನೇ ಅಲೆ ತೀವ್ರವಾಗುವ ಸೂಚನೆಯನ್ನು ತಜ್ಞರು ನೀಡಿದ್ದಾರೆ. ಶೇ.80 ವಯಸ್ಕರಿಗೆ ಸೆಪ್ಟೆಂಬರ್ 30 ರೊಳಗೆ ಎರಡು ಡೋಸ್ ಲಸಿಕೆ ನೀಡಿದರೆ 3ನೇ ಅಲೆಯಿಂದ ರಕ್ಷಣೆ ಪಡೆಯಬಹುದು ಮತ್ತು ಅದರ ತೀವ್ರತೆ ತಡೆಯಬಹುದು. ಅದಕ್ಕಾಗಿಯೇ ಈ ಸವಾಲಿಗೆ ಸರ್ಕಾರ ಸಿದ್ಧವಿದೆಯೇ? ಎಂದು ಪ್ರಶ್ನೆ ಮಾಡುತ್ತಿದ್ದೇನೆ ಎಂದರು.

corona virus koppala munirabad village model of Covid control 3 medium

ವ್ಯಾಕ್ಸಿನೇಷನ್ ಬಗ್ಗೆ ಕೇವಲ ಮಾತನಾಡಿದರೆ ಸಾಲದು. ರಾಜ್ಯ ಸರ್ಕಾರ ಈವರೆಗೆ ಶೇ.80 ಜನರಿಗೆ ಮಾತ್ರವೇ ಲಸಿಕೆ ನೀಡಿದೆ. ಕೇವಲ ಒಂದು ಡೋಸ್ ಲಸಿಕೆ ಹಾಕಿದರೆ ಕೋವಿಡ್ ತೀವ್ರತೆಯನ್ನು ತಗ್ಗಿಸಲಾಗದು. ಕೊರೊನಾದಿಂದ ಪೂರ್ಣ ರಕ್ಷಣೆ ಸಾಧ್ಯವಾಗಲು ಎರಡೂ ಡೋಸ್ ಪಡೆದಿರಬೇಕು ಎಂಬುದು ಅಧ್ಯಯನದಿಂದ ಸಾಬೀತಾಗಿದೆ. ಹೀಗಾಗಿ ಸೆಪ್ಟೆಂಬರ್ ಅಂತ್ಯದೊಳಗೆ ಶೇ.80 ವಯಸ್ಕರಿಗೆ ಎರಡೂ ಡೋಸ್ ಹಾಕುವ ಹೊಣೆಗಾರಿಕೆ ಯನ್ನು ಸರ್ಕಾರ ನಿರ್ವಹಿಸಲೇಬೇಕು. ಈ ಸವಾಲಿನಲ್ಲಿ ವಿಫಲವಾದರೆ, 3ನೇ ಅಲೆಯ ಪರಿಣಾಮಗಳಿಗೆ ಸರ್ಕಾರವೇ ಜವಾಬ್ದಾರಿಯಾಗಬೇಕಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷರು ಎಚ್ಚರಿಸಿದರು. ಇದನ್ನೂ ಓದಿ : ನಿತ್ಯ ಹಿಂಬಾಲಿಸಿ ಚೂಡಾಯಿಸುತ್ತಿದ್ದ ಕಾಮುಕನಿಗೆ ಚಪ್ಪಲಿ ಏಟು ನೀಡಿದ ಮಹಿಳೆ

ಈ ಸವಾಲು ಅಸಾಧ್ಯವಾದುದೇನೂ ಅಲ್ಲ. ವಿದೇಶಗಳಿಗೆ ಲಸಿಕೆ ಕಳಿಸುವುದನ್ನು ತಗ್ಗಿಸಿ ನಮ್ಮ ಜನರಿಗೆ ವ್ಯಾಕ್ಸಿನೇಷನ್ ಮಾಡಲು ಒತ್ತು ಕೊಡಬೇಕು. ಬಿಜೆಪಿ ನಾಯಕರು ಲಸಿಕೆ ನೀಡಿಕೆಯಲ್ಲೂ ಅಪರ- ತಪರಾ ಮಾಡುವುದನ್ನು ನಿಲ್ಲಿಸಿ, ಎಲ್ಲರಿಗೂ ಲಸಿಕೆ ಹಾಕಿಸಿ ಜನರನ್ನು ರಕ್ಷಣೆ ಮಾಡುವ ಕೆಲಸಕ್ಕೆ ಮುಂದಾಗಬೇಕು ಎಂದು ತಾಕೀತು ಮಾಡಿದರು.

Vaccine 4 medium

ಕೇಂದ್ರದಲ್ಲಿ ಅವರದೇ ಪಕ್ಷದ ಸರ್ಕಾರ ಇದ್ದರೂ ರಾಜ್ಯ ಬಿಜೆಪಿ ಸರ್ಕಾರಕ್ಕೆ ಅವಶ್ಯಕ ಪ್ರಮಾಣದ ಲಸಿಕೆ ಪಡೆದುಕೊಳ್ಳಲು ಸಾಧ್ಯವಾಗಿಲ್ಲ. ವ್ಯಾಕ್ಸಿನೇಷನ್ ಬಗ್ಗೆ ಒಂದು ದಿನದ ಅಬ್ಬರದ ಪ್ರಚಾರ ಪಡೆದು ಸರ್ಕಾರ ಸುಮ್ಮನಾದರೆ ಹೇಗೆ? ಲಸಿಕೆ ಹಾಕುವ ಪ್ರಮಾಣ ಕಡಿಮೆಯಾಗಿದೆ. ಲಸಿಕೆ ಹಾಕುವಲ್ಲಿ ಉತ್ತರ ಕರ್ನಾಟಕದ ಜನರನ್ನು ಮಲತಾಯಿ ಮಕ್ಕಳಂತೆ ನೋಡಲಾಗುತ್ತಿದೆ. ಬೆಂಗಳೂರು ನಗರದಲ್ಲೂ ಲಸಿಕೆ ದಾಸ್ತಾನು ಕೊರತೆಯಿದೆ. ಜನ ಲಸಿಕೆಗಾಗಿ ಕ್ಯೂ ನಿಲ್ಲುವುದು ತಪ್ಪಿಲ್ಲ. ಅವಶ್ಯಕ ಪ್ರಮಾಣದಲ್ಲಿ ಲಸಿಕೆ ಪೂರೈಕೆ ಆಗಿಲ್ಲವಾದ ಕಾರಣ ದಿಲ್ಲಿಗೆ ಹೋಗುವುದಾಗಿ ಆರೋಗ್ಯ ಸಚಿವರು ಹೇಳುತ್ತಿದ್ದಾರೆ. ಈ ಸರ್ಕಾರ ಈಗಲಾದರೂ ಎಚ್ಚೆತ್ತು ಬದ್ದತೆಯಿಂದ ಕೆಲಸ ಮಾಡುತ್ತಾ ನೋಡೋಣ” ಎಂದು ಶಿವಕುಮಾರ್ ಹೇಳಿದರು.

ಡೆಲ್ಟಾ ರೂಪಾಂತರಿ ವೈರಾಣು ವಿರುದ್ದ ರಕ್ಷಣೆಗಾಗಿ ಕೋವಿಶೀಲ್ಡ್ 2ನೇ ಲಸಿಕೆಯನ್ನು 8 ವಾರಗಳೊಳಗೆ ಕೊಡಬೇಕು. ಅದಕ್ಕಾಗಿ ಸರ್ಕಾರ ಮಾರ್ಗಸೂಚಿಯಲ್ಲಿ ಸೂಕ್ತ ಬದಲಾವಣೆ ಮಾಡಿಕೊಳ್ಳಲಿ ಎಂದು ಸಲಹೆ ಮಾಡಿದರು.

Vaccine 2 1 medium

ಕಾಂಗ್ರೆಸ್ ಪಕ್ಷದ ನಾಯಕರು ಸ್ವಂತ ಖರ್ಚಿನಲ್ಲಿ ವ್ಯಾಕ್ಸಿನೇಷನ್ ಶಿಬಿರಗಳನ್ನು ನಡೆಸಿ, 1 ಲಕ್ಷ ಮಂದಿಗೆ ಉಚಿತವಾಗಿ ಲಸಿಕೆ ಹಾಕಿಸಿದ್ದಾರೆ. ಉತ್ಪಾದಕರಿಂದ ನೇರವಾಗಿ ಲಸಿಕೆ ಖರೀದಿಸಲು ಅನುಮತಿ ಕೇಳಿದರೂ ಸರ್ಕಾರ ಕೊಡಲಿಲ್ಲ. ಈ ಉದ್ದೇಶಕ್ಕೆ ಶಾಸಕರ ನಿಧಿ ಬಳಸುವ ಸದಾಶಯಕ್ಕೆ ಸರ್ಕಾರ ಸಮ್ಮತಿಸಲಿಲ್ಲ. ನಮ್ಮ ಸಹಾಯ ಅಗತ್ಯವಿಲ್ಲ ಎಂದರೆ ತೊಂದರೆ ಇಲ್ಲ. ಕಾಲಮಿತಿಯಲ್ಲಿ ಸರ್ಕಾರ ತ್ವರಿತವಾಗಿ ಎಲ್ಲರಿಗೂ ಲಸಿಕೆ ಹಾಕಿಸಿ, ಜನರನ್ನು ರಕ್ಷಣೆ ಮಾಡಲಿ ಎಂದು ಶಿವಕುಮಾರ್ ಹೇಳಿದರು.

Vaccine 6 medium

ಲಸಿಕೆ ಹಾಕಿಸಿಕೊಳ್ಳುವ ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸಲು ಕೆಪಿಸಿಸಿ ಮಕ್ಕಳಿಗಾಗಿ ವ್ಯಾಕ್ಸಿನೇಟ್ ಕರ್ನಾಟಕ ಅಭಿಯಾನ ನಡೆಸಿದೆ. ವಯಸ್ಕರು ವ್ಯಾಕ್ಸಿನ್ ಪಡೆಯಲು ಪ್ರೇರಣೆಯಾಗುವಂತೆ 20 ಸಾವಿರಕ್ಕೂ ಹೆಚ್ಚು ಮಕ್ಕಳು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ಉತ್ತಮ ವಿಡಿಯೋ ಮಾಡಿದ 22 ಮಕ್ಕಳಿಗೆ ???ಂಡ್ರಾಯ್ಡ್ ಟ್ಯಾಬ್ ಗಳನ್ನು ಬಹುಮಾನವಾಗಿ ಪಕ್ಷದ ವತಿಯಿಂದ ನೀಡಲಾಗಿದೆ. ನಾವಂತೂ ಜನರನ್ನು ಲಸಿಕೆ ಪಡೆಯಲು ಪ್ರೇರೇಪಿಸುತ್ತಿದ್ದೇವೆ. ಆದರೆ, ಲಸಿಕೆ ದಾಸ್ತಾನು ಕೊರತೆಯೇ ಪ್ರಮುಖ ಸಮಸ್ಯೆಯಾಗಿದೆ. ಆಡಳಿತ ನಡೆಸುವವರು ಎಚ್ಚೆತ್ತುಕೊಂಡು ಕೆಲಸ ಮಾಡಲಿ ಎಂದು ಕಿವಿಮಾತು ಹೇಳಿದರು.

ಮೂರು ತಿಂಗಳೊಳಗೆ ಶೇಕಡ 80 ಜನರಿಗೆ ಎರಡು ಡೋಸ್ ಲಸಿಕೆ ಹಾಕಿಸಿ, ಕೋವಿಡ್ 3 ನೇ ಅಲೆಯಿಂದ ಜನರನ್ನು ರಕ್ಷಣೆ ಮಾಡುವಂತೆ ಸರ್ಕಾರಕ್ಕೆ ತಾಕೀತು ಮಾಡಲು ಪಕ್ಷದ ವತಿಯಿಂದ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಲಾಗುವುದು ಎಂದು ಶಿವಕುಮಾರ್ ತಿಳಿಸಿದರು.

TAGGED:CoronaCorona VirusCovid19DK Shivakumarಕೆಪಿಸಿಸಿಕೊರೊನಾಕೊರೊನಾ ವೈರಸ್ಕೋವಿಡ್ 19ಡಿಕೆ ಶಿವಕುಮಾರ್
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

CSK 3
Cricket

ಕೋಲ್ಕತ್ತಾಗೆ 4ನೇ ಸೋಲು- ಚೆನ್ನೈಗೆ 32 ರನ್‌ಗಳ ಸೂಪರ್‌ ಜಯ, ಮುಂಬೈ ಹಿಂದಿಕ್ಕಿದ ಕಿಂಗ್ಸ್‌

Public TV
By Public TV
2 hours ago
Rayareddy
Districts

25 ಸಚಿವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಿ: ಬಸವರಾಜ ರಾಯರೆಡ್ಡಿ

Public TV
By Public TV
2 hours ago
IPL all teams captains
Cricket

ಆಸ್ಟ್ರೇಲಿಯಾದಲ್ಲಿ ಐಪಿಎಲ್‌, ಭಾರತದಲ್ಲಿ ಬಿಗ್‌ ಬ್ಯಾಷ್‌ ಲೀಗ್‌ – ಆಡಿಲೇಡ್‌ನಲ್ಲಿ ಪಂದ್ಯ ಆಯೋಜನೆಗೆ ಭಾರೀ ಚರ್ಚೆ

Public TV
By Public TV
3 hours ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೀಶ್ ಗೌಡ ಕೊಲೆ ಕೇಸ್; 10 ವರ್ಷಗಳ ಬಳಿಕ ಬುಧವಾರ ಕೋರ್ಟ್ ತೀರ್ಪು – ವಿನಯ್ ಕುಲಕರ್ಣಿಗೆ ಟೆನ್ಷನ್

Public TV
By Public TV
3 hours ago
AYODHYA
Bengaluru City

ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ರಾಜ್ಯದ 10 ಕಾಂಗ್ರೆಸ್‌ ಶಾಸಕರು

Public TV
By Public TV
4 hours ago
PM Narendra Modi Inaugurates Delhi Dehradun Expressway
Latest

ದೆಹಲಿ-ಡೆಹ್ರಾಡೂನ್‌ ಎಕ್ಸ್‌ಪ್ರೆಸ್‌ವೇ ಲೋಕಾರ್ಪಣೆ – ಸಂಚಾರ 6 ಗಂಟೆಯಿಂದ 2.5 ಗಂಟೆಗೆ ಇಳಿಕೆ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?