ಹಾಸನ: ಆಕಸ್ಮಿಕವಾಗಿ ಕಾರಿನಲ್ಲಿ ಬೆಂಕಿ ಹೊತ್ತಿಕೊಂಡು, ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿರೋ ಘಟನೆ ಜಿಲ್ಲೆಯ ಅರಕಲಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ನಡೆದಿದೆ.
ಶಿಕ್ಷಕ ಲೋಕೇಶ್ ಅವರಿಗೆ ಸೇರಿದ ಕಾರಿಗೆ ಬೆಂಕಿ ತಗುಲಿದೆ. ಲಾಕ್‍ಡೌನ್ ಕಾರಣ ಕಾರನ್ನು ಬಹಳ ದಿನಗಳಿಂದ ಶೆಡ್ ನಲ್ಲಿಯೇ ನಿಲ್ಲಿಸಿದ್ದರು. ಇಂದು ಹೊರಗೆ ಹೋಗಲು ಕಾರನ್ನು ಸ್ಟಾರ್ಟ್ ಮಾಡುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ. ಆದರೂ ಕಾರು ಸಂಪೂರ್ಣ ಹಾಳಾಗಿದ್ದು, ಅರಕಲಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.