ಬೆಂಗಳೂರು/ಬೀದರ್: ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕಾಗಿದೆ. ಬೀದರ್‍ನ ಔರಾದ್ ತಾಲೂಕಿನಲ್ಲಿ ವರುಣರಾಯ ಅವಾಂತರ ಸೃಷ್ಟಿಸಿದ್ದಾನೆ.
ಮಳೆಯಿಂದಾಗಿ ಚಟ್ನಾಳ ಟು ಹೆಡಗಾಪೂರ್ ಗ್ರಾಮಗಳ ಸಂಪರ್ಕ ಕಡಿತವಾಗಿದೆ. ಹೊಲಗಳಿಗೆ ಹೋಗಿದ್ದ ರೈತರು ಹಳ್ಳದಾಟಲು ಹರಸಾಹಸ ಪಟ್ರು. ಹಗ್ಗದ ನೆರವಿನಲ್ಲಿ ಒಬ್ಬರ ಕೈ ಇನ್ನೊಬ್ಬರು ಹಿಡಿದು ರೈತಾಪ ಜನ ಜೀವ ಕೈಯಲ್ಲಿ ಹಿಡಿದು ಹಳ್ಳದಾಟಿದ್ರು.
ರಾಯಚೂರಿನ ಮಸ್ಕಿ ತಾಲೂಕಿನ ಗೋನವಾರ ಗ್ರಾಮದಲ್ಲಿ ಕೆರೆ ಕೊಡಿ ಒಡೆದು ನೂರಾರು ಎಕರೆ ಜಮೀನಿಗೆ ನೀರು ನಿಗ್ಗಿದ್ದು, ರೈತರು ಅಪಾರ ನಷ್ಟ ಅನುಭವಿಸಿದ್ದಾರೆ. ಇಂದು ಮತ್ತು ನಾಳೆ ಉತ್ತರ ಕನ್ನಡಮ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಸೂಟುಬೂಟಿನ ಕಳ್ಳ – ಸಭ್ಯಸ್ಥನ ವೇಷದಲ್ಲಿ ಬಂದು ಕಳ್ಳತನ
ಕರಾವಳಿ ಭಾಗದಲ್ಲಿ ಇದೇ 15ರವರೆಗೆ ಧಾರಾಕಾರ ಮಳೆ ಆಗಲಿದೆ. ದಕ್ಷಿಣ ಒಳನಾಡು, ಉತ್ತರ ಒಳನಾಡಿನ 12 ಜಿಲ್ಲೆಗಳಲ್ಲಿ ಜುಲೈ 13ರವರೆಗೂ ಯೆಲ್ಲೋ ಅಲರ್ಟ್ ಪ್ರಕಟಿಸಲಾಗಿದೆ.