ನವದೆಹಲಿ: ರಾಜ್ಯದ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಉಡುಪಿ ಮತ್ತು ಚಿಕ್ಕಮಗಳೂರು ಜಿಲ್ಲಾಧಿಕಾರಿಗಳೊಂದಿಗೆ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಸಭೆ ನಡೆಸಿದರು.
ದೆಹಲಿಯ ಕೃಷಿ ಭವನದಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮಳೆಯಿಂದಾಗುತ್ತಿರುವ ತೊಂದರೆಗಳು, ಪ್ರಕೃತಿ ವಿಕೋಪಗಳ ಬಗ್ಗೆ ವರದಿ ಪಡೆದುಕೊಂಡರು. ಇದನ್ನೂ ಓದಿ:
ಇದೇ ವೇಳೆ ಕ್ಷಣ ಕ್ಷಣದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಜನರ ಕಷ್ಟ ನಷ್ಟಗಳಿಗೆ ನೆರವು ನೀಡುವ ಸಂದರ್ಭ ಒದಗಿ ಬಂದರೆ ತಕ್ಷಣವೇ ಸೂಕ್ತ ವ್ಯವಸ್ಥೆ ಹೊಂದಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲೆಯಲ್ಲಿನ ಕೋವಿಡ್ ನಿರ್ವಹಣೆ, ಮೂರನೇ ಅಲೆಗೆ ಜಿಲ್ಲೆಗಳು ನಡೆಸಿರುವ ತಯಾರಿಗಳು ಹಾಗೂ ಕೇಂದ್ರ ಪುರಸ್ಕೃತ ಯೋಜನೆಗಳ ಕುರಿತು ಚರ್ಚಿಸಿ ಶೋಭಾ ಕರಂದ್ಲಾಜೆ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ದರ್ಶನ್ ಬಹಳ ಮುಗ್ಧ, ಯಾವುದೇ ಕೆಟ್ಟ ಕೆಲಸ ಮಾಡಲ್ಲ: ಬಿ.ಸಿ ಪಾಟೀಲ್