Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ: ಸುಧಾಕರ್

Bengaluru City

ಪ್ರವಾಹಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗ ಹರಡದಂತೆ ಕ್ರಮ: ಸುಧಾಕರ್

Public TV
Last updated: July 23, 2021 7:16 pm
Public TV
Share
1 Min Read
SUDAKAR 1 1
SHARE

ಬೆಂಗಳೂರು: ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಇರುವುದರಿಂದ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

vlcsnap 2021 07 23 15h56m45s170

ಪ್ರವಾಹಪೀಡಿತ ಗ್ರಾಮಗಳು, ಸ್ಥಳಾಂತರಗೊಂಡಿರುವ ಗ್ರಾಮಗಳು, ಸಂತ್ರಸ್ತರಿಗೆ ತೆರೆಯುವ ಕಾಳಜಿ ಕೇಂದ್ರಗಳ ಬಳಿ ಕೈಗೊಳ್ಳಬೇಕಿರುವ ಕ್ರಮಗಳು ಹಾಗೂ ಮುಂದಿನ ದಿನಗಳಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಥವಾಗಿ ಎದುರಿಸಲು ಕೈಗೊಳ್ಳಬೇಕಿರುವ ಸಿದ್ಧತೆಗಳ ಬಗ್ಗೆ ಹಿರಿಯ ಅಧಿಕಾರಿಗಳ ಸಭೆ ನಡೆಸಿ ಶುಕ್ರವಾರ ಅಗತ್ಯ ಸೂಚನೆಗಳನ್ನು ನೀಡಿದರು.

NIMBALKAR 2

ಕಾಳಜಿ ಕೇಂದ್ರಗಳಲ್ಲಿ ಆಶ್ರಯಪಡೆದಿರುವ ಸಂತ್ರಸ್ತರಿಗೆ ಶುದ್ಧಕುಡಿಯುವ ನೀರು ಮತ್ತು ಗುಣಮಟ್ಟದ ಆಹಾರ ಪೂರೈಸಬೇಕು. ಒಂದು ವೇಳೆ ಶುದ್ಧಕುಡಿಯುವ ನೀರಿನ ಘಟಕಗಳು ಸಮೀಪದಲ್ಲಿ ಇಲ್ಲದಿದ್ದರೆ ಲಭ್ಯವಿರುವ ನೀರನ್ನೇ ಕಾಯಿಸಿ, ಶೋಧಿಸಿ ನೀಡಲು ಸೂಚಿಸಲಾಗಿದೆ. ಕೇಂದ್ರಗಳ ಒಳಗೆ ಮತ್ತು ಹೊರಭಾಗದಲ್ಲಿ ಶುಚಿತ್ವಕ್ಕೆ ಆದ್ಯತೆ ನೀಡಬೇಕು, ಪ್ರತಿದಿನ ರೋಗನಿರೋದಕ ದ್ರಾವಣ ಸಿಂಪಡಿಸಬೇಕು, ಕೇಂದ್ರದಲ್ಲಿರುವ ಎಲ್ಲರ ಆರೋಗ್ಯ ತಪಾಸಣೆ ಮಾಡಬೇಕು ಮತ್ತು ಅವರಿಗೆ ಕೋವಿಡ್ ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ತಜ್ಞರು ಅರಿವು ಮೂಡಿಸುವ ಕೆಲಸ ಮಾಡಲು ಆದೇಶಿಸಿದರು.

NIPANI 3

ಹಿರಿಯ ನಾಗರಿಕರು, ಬಾಣಂತಿಯರು, ಗರ್ಭಿಣಿಯರು ಮತ್ತು ಮಕ್ಕಳನ್ನು ಸಾಧ್ಯವಾದಷ್ಟು ಮಟ್ಟಿಗೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಘಟಕ ಅಥವಾ ತಾಲೂಕು ಆಸ್ಪತ್ರೆಗಳಿಗೆ ಸ್ಥಳಾಂತರಿಸಿ ವಿಶೇಷ ಕಾಳಜಿಯಿಂದ ಅವರನ್ನು ನೋಡಿಕೊಳ್ಳಬೇಕು. ಜ್ವರ ಹಾಗೂ ಇತರೆ ರೋಗಲಕ್ಷಣ ಇದ್ದವರಿಗೆ ತಕ್ಷಣ ಕೋವಿಡ್ ಪರೀಕ್ಷೆ ನಡೆಸಿ ಚಿಕಿತ್ಸೆ ನೀಡಲು ಸೂಚಿಸಲಾಗಿದ್ದು, ಕಾಳಜಿ ಕೇಂದ್ರಗಳಲ್ಲಿರುವ ಎಲ್ಲರಿಗೂ ಮಾಸ್ಕ್ ವಿತರಿಸಬೇಕು, ಸ್ಯಾನಿಟೈಸರ್ ನೀಡುವ ಜೊತೆಗೆ ಶುಚಿತ್ವದ ಬಗ್ಗೆ ಗಮನಹರಿಸರಿಸಲು ಸೂಚಿಸಿದ್ದಾರೆ.

ರಾಜ್ಯದ 18 ತಾಲೂಕು, 131 ಗ್ರಾಮಗಳು ಪ್ರವಾಹಕ್ಕೆ ಸಿಲುಕಿದ್ದು, 830 ಮನೆಗಳಿಗೆ ಹಾನಿಯಾಗಿದೆ. ಸದ್ಯ ರಾಜ್ಯದಲ್ಲಿ 80 ಕಾಳಜಿ ಕೇಂದ್ರ ತೆರೆಯಲಾಗಿದ್ದು, 8,733 ಜನರನ್ನು ಅಲ್ಲಿಗೆ ಸ್ಥಳಾಂತರಿಸಲಾಗಿದೆ.

 

TAGGED:CoronaCoronavirusCovid 19dr. k sudhakarfloodPublic TVಕೊರೊನಾಕೊರೊನಾ ವೈರಸ್ಕೋವಿಡ್ 19ಡಾ ಕೆ ಸುಧಾಕರ್ಪಬ್ಲಿಕ್ ಟಿವಿಪ್ರವಾಹಸಾಂಕ್ರಾಮಿಕ ರೋಗ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

BJP Leader Sukhbir Singh Jaunapuria
Latest

‘ನೀವು ಮೋದಿಯನ್ನು ನಿಂದಿಸುತ್ತೀರಿ..’: ಮುಸ್ಲಿಂ ಮಹಿಳೆಗೆ ಕಂಬಳಿ ಕೊಡಲು ನಿರಾಕರಿಸಿದ ಬಿಜೆಪಿ ನಾಯಕ

Public TV
By Public TV
8 minutes ago
Weather
Bagalkot

ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಅಧಿಕ ತಾಪಮಾನ ವರದಿ – ಹವಾಮಾನ ಇಲಾಖೆ ಎಚ್ಚರಿಕೆ

Public TV
By Public TV
28 minutes ago
T20 Team India
Cricket

Semifinal Scenario | ಪವಾಡವೇ ನಡೆಯಬೇಕು – ಭಾರತದ ಸೆಮಿಸ್‌ ಹಾದಿ ತುಂಬಾ ಕಠಿಣ

Public TV
By Public TV
31 minutes ago
Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ನಲ್ಲಿ ಜಾಲಿ ರೈಡ್ – ಹಂಪ್ಸ್‌ ಕಾಣದೇ ರಸ್ತೆಗೆ ಬಿದ್ದು ಯುವತಿ ಸಾವು

Public TV
By Public TV
55 minutes ago
Cyber Crime
Bengaluru City

ಸ್ನೇಹಿತನ ಅಕೌಂಟ್ ಬಳಸಿ ಸೈಬರ್ ವಂಚನೆ – ಬರೋಬ್ಬರಿ 7 ಕೋಟಿ ವರ್ಗಾವಣೆ

Public TV
By Public TV
56 minutes ago
g parameshwara 2
Bengaluru City

ಸಿದ್ದರಾಮಯ್ಯರ ರಾಜಕೀಯ ಅಡಿಪಾಯವೇ ಸಾಮಾಜಿಕ ನ್ಯಾಯ: ಪರಮೇಶ್ವರ್‌ ಬ್ಯಾಟಿಂಗ್‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?