ಪ್ರಭಾಸ್ ಜೊತೆ ನಟಿಸ್ತಿದ್ದಾರಾ ಅಮಿತಾಬ್ ಬಚ್ಚನ್?

Public TV
1 Min Read
amithabh bachchan 2

ಮುಂಬೈ: ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರು ನಟ ಬಾಹುಬಲಿ ಪ್ರಭಾಸ್ ಜೊತೆ ಹೊಸ ಸಿನಿಮಾದಲ್ಲಿ ಅಭಿನಯಿಸುತ್ತಿದ್ದಾರೆ ಎಂಬ ಸುದ್ದಿ ಇದೀಗ ಬಿ-ಟೌನ್‍ನಲ್ಲಿ ಹರಿದಾಡುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ ಅಮಿತಾಬ್ ಬಚ್ಚನ್ ಶುಕ್ರವಾರ ಟ್ವೀಟ್ ಮಾಡಿದ್ದು, ಈ ಟ್ವೀಟ್ ಇದೀಗ ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.

FotoJet 16 1

ಹೌದು, ಬಿಗ್-ಬಿ ಅಮಿತಾಬ್ ಬಚ್ಚನ್ ಶುಕ್ರವಾರ ಹೊಸ ಸಿನಿಮಾದ ಮುಹೂರ್ತವೊಂದಕ್ಕೆ ಹಾಜರಾಗಿದ್ದು, ಈ ಕುರಿತಂತೆ ತಮ್ಮ ಟ್ವಿಟ್ಟರ್ ಖಾತೆಯಲ್ಲಿ, ಹೊಸ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಪ್ರಯಾಣಿಸಿದೆ. ಹೊಸ ಸಿನಿಮಾ, ಹೊಸ ಆರಂಭ, ಹೊಸ ವಾತಾವರಣ, ಹೊಸತು ಯಾವಾಗಲೂ ಉತ್ಸಾಹ ತುಂಬುತ್ತದೆ. ಹೊಸತು ಎಂಬುದು ಹಳತಾಗುವುದಿಲ್ಲ ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

amithabh bachchan 1

ಸದ್ಯ ಸಲಾರ್ ಹಾಗೂ ಅವತಾರ ಪುರುಷ ಸಿನಿಮಾಗಳಲ್ಲಿ ಬ್ಯುಸಿಯಾಗಿರುವ ನಟ ಪ್ರಭಾಸ್ ಈ ಸಿನಿಮಾಗಳ ನಂತರ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಜೊತೆ ಹೊಸ ಸಿನಿಮಾ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು, ಈ ಸಿನಿಮಾದಲ್ಲಿ ಅಮಿತಾಬ್ ಬಚ್ಚನ್ ಕೂಡ ಅಭಿನಯಿಸಲಿದ್ದಾರೆ ಎನ್ನಲಾಗುತ್ತಿದೆ. ಇನ್ನೂ ಈ ಚಿತ್ರದ ಮುಹೂರ್ತ ಶುಕ್ರವಾರ ನಡೆದಿದ್ದು, ಅಮಿತಾಬ್ ಬಚ್ಚನ್ ಈ ಸಿನಿಮಾದ ಮುಹೂರ್ತ ಕಾರ್ಯಕ್ರಮಕ್ಕೆ ಹೋಗಿದ್ದರು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ:ಕುಟುಂಬ ಸಮೇತರಾಗಿ ಈ ಸಿನಿಮಾ ನೋಡಿ: ಶಿಲ್ಪಾ ಶೆಟ್ಟಿ

Share This Article
Leave a Comment

Leave a Reply

Your email address will not be published. Required fields are marked *