ಭೋಪಾಲ್: ಮಿಂಚಿನ ಹೊಡೆತಕ್ಕೆ ಐವರು ಬಲಿಯಾಗಿದ್ದು, 18 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ಪೆನ್ನಾ ಜಿಲ್ಲೆಯಲ್ಲಿ ನಡೆದಿದೆ.
ಪೆನ್ನಾ ಜಿಲ್ಲೆಯ ಉರೆಹಾ, ಪಿಪರಿಯಾ ದೌನ್, ಚೌಮುಖ ಮತ್ತು ಸಿಮ್ರಾಖುರ್ಡ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಉರೆಹಾ, ಪಿಪರಿಯಾ ದೌನ್, ಚೌಮುಖ ಗ್ರಾಮದಲ್ಲಿ ಇಬ್ಬರು ಮಹಿಳೆಯರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತೊಬ್ಬರು ಸಾವು- ಬದುಕಿನ ನಡುವೆ ಹೋರಾಡಿ ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಸಂಜಯ್ ಕುಮಾರ್ ಮಿಶ್ರ ಹೇಳಿದ್ದಾರೆ.
ಸಿಮ್ರಾಖುರ್ಡ್ ಗ್ರಾಮದ 70 ವರ್ಷದ ವ್ಯಕ್ತಿ ಜಾನುವಾರುಗಳನ್ನು ಹುಲ್ಲು ಮೇಯಿಸಲೆಂದು ಕಾಡಿಗೆ ಹೋಗಿದ್ದಾಗ ಮಿಂಚು ಹೊಡೆದಿದೆ. ಪಿಪರಿಯಾ ದೌನ್‍ನ ಮತ್ತೊಬ್ಬ ವ್ಯಕ್ತಿ ಮಿಂಚಿಗೆ ಬಲಿಯಾಗಿದ್ದಾರೆ. ಅಲ್ಲದೇ ಚೌಮುಖದಲ್ಲಿ 65 ವರ್ಷದ ವ್ಯಕ್ತಿ ಮೃತಪಟ್ಟಿದ್ದು, ಅವರನ್ನು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ರಚನಾ ಶರ್ಮಾ ಎಂದು ಹೇಳಲಾಗುತ್ತಿದೆ. ಅಲ್ಲದೇ ಈ ಮೂರು ಗ್ರಾಮದಲ್ಲಿ ಮಿಂಚಿನ ಹೊಡೆತಕ್ಕೆ ಒಟ್ಟು ಏಳು ಮಂದಿ ಗಾಯಗೊಂಡಿದ್ದಾರೆ. ಜೊತೆಗೆ ಉರೆಹಾ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ 20 ವರ್ಷದ ಇಬ್ಬರು ಯುವತಿಯರು ಮೃತಪಟ್ಟಿದ್ದಾರೆ ಎಂದು ಸಂಜಯ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ.
ಘಟನೆಯಲ್ಲಿ ಗಾಯಗೊಂಡ 11 ಮಂದಿಯನ್ನು ಪೆನ್ನಾ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಣ ಮಳೆಗೆ ಮಹಾರಾಷ್ಟ್ರದಲ್ಲಿ 100 ಮಂದಿ ಬಲಿ- 1,000ಕ್ಕೂ ಹೆಚ್ಚು ಮಂದಿ ಸ್ಥಳಾಂತರ