ಬೆಂಗಳೂರು: ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಅಂಗೀಕಾರವಾಗಿದ್ದು, ಸಂಪುಟ ವಿಸರ್ಜನೆಯಾಗಿದೆ. ಮುಂದಿನ ಸಿಎಂ ಆಗೋವರೆಗೂ ಯಡಿಯೂರಪ್ಪನವರೇ ಹಂಗಾಮಿ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ. ಇಂದು ರಾಜಭವನಕ್ಕೆ ತೆರಳಿದ ಯಡಿಯೂರಪ್ಪನವರು ರಾಜ್ಯಪಾಲ ಗೆಹ್ಲೋಟ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ಸದ್ಯ ಸಿಎಂ ಆಯ್ಕೆಯ ಕಸರತ್ತು ಮುಂದುವರಿದಿದೆ. ಉತ್ತರ ಕರ್ನಾಟಕದ ಲಿಂಗಾಯತ ಶಾಸಕರಿಗೆ ಸಿಎಂ ಸ್ಥಾನ ಸಿಗಲಿದೆ ಎಂದು ಹೇಳಲಾಗುತ್ತಿದ್ದು, ಮುರುಗೇಶ್ ನಿರಾಣಿ ಮತ್ತು ಅರವಿಂದ್ ಬೆಲ್ಲದ್ ಹೆಸರುಗಳೇ ಅಂತಿಮ ಪಟ್ಟಿಯಲ್ಲಿವೆ ಎಂಬ ಎಕ್ಸ್ ಕ್ಲೂಸಿವ್ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.
ಇತ್ತ ರಾಜೀನಾಮೆ ಬಳಿಕ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುವದಾಗಿ ಯಡಿಯೂರಪ್ಪನವರು ಹೇಳಿದ್ದಾರೆ. ಒಂದು ವೇಳೆ ಕೇಂದ್ರ ರಾಜ್ಯಪಾಲ ಹುದ್ದೆ ನೀಡಿದ್ರೂ ತಿರಸ್ಕರಿಸುವ ಮಾತುಗಳನ್ನಾಡಿದ್ದಾರೆ. ರಾಜೀನಾಮೆ ಬಳಿಕ ಮಾತನಾಡಿದ ಅವರು, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು ಸೂಚಿಸಿಲ್ಲ ಮತ್ತು ಸೂಚಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೇಂದ್ರ ಸಚಿವರಾಗುವಂತೆ ವಾಜಪೇಯಿ ಹೇಳಿದ್ದನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ