ಹಾವೇರಿ: ಜಿಲ್ಲೆಯಲ್ಲಿ ಮಳೆ ಕಡಿಮೆಯಾದ್ರೂ, ವರದಾ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿಲ್ಲ. ಹಾವೇರಿ ತಾಲೂಕಿನ ಕರ್ಜಗಿ ಗ್ರಾಮದ 25ಕ್ಕೂ ಅಧಿಕ ಮನೆಗಳು ಜಲಾವೃತಗೊಂಡಿವೆ.
ಕಳೆದ ಮೂರ್ನಾಲ್ಕು ದಿನಗಳಿಂದ ಮನೆ ಬಿಟ್ಟು ಸರ್ಕಾರದ ಕಾಳಜಿ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದ್ದಾರೆ. ವರದಾ ನದಿಯ ನೀರಿನಲ್ಲಿ ಮನೆ, ದೇವಸ್ಥಾನ, ಮಸೀದಿಗಳು ನಿಂತಿವೆ. ಮನೆಯಲ್ಲಿನ ಬಟ್ಟೆ, ದವಸಧಾನ್ಯಗಳು, ಆಹಾರ ಪದಾರ್ಥಗಳು ಸೇರಿದಂತೆ ಎಲ್ಲವೂ ನೀರಿನಲ್ಲಿ ಮುಳುಗಿ ಹಾನಿಯಾಗಿವೆ. ವರದಾ ನದಿ ನೀರಿನ ಆರ್ಭಟಕ್ಕೆ ಕರ್ಜಗಿ ಗ್ರಾಮದ ಜನರು ಸೇರಿದಂತೆ ನದಿ ಪಾತ್ರದ ಜನರು ತತ್ತರಿಸಿ ಹೋಗಿದ್ದಾರೆ. ಇದನ್ನೂ ಓದಿ: ಬಿಎಸ್‍ವೈ ರಾಜೀನಾಮೆ – ನೇಣಿಗೆ ಶರಣಾದ ಅಭಿಮಾನಿ
ನದಿ ಪಾತ್ರಕ್ಕೆ ಹೋಗದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ನೀರಿನ ಹರಿವು ಹೆಚ್ಚಾಗಿದ್ದು, ಜನರು ಹೆಚ್ಚು ಓಡಾಡುವ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಕಳೆದ ಮೂರು ವರ್ಷಗಳಿಂದ ಪ್ರವಾಹ ಪರಸ್ಥಿತಿ ಎದುರಿಸುತ್ತಿದ್ದೇವೆ. ಸರ್ಕಾರ ನಮ್ಮ ಸ್ಥಳಾಂತರ ಮಾಡಿ ಶಾಶ್ವತ ಸೂರು ಕೊಡಬೇಕೆಂದು ಕುಟುಂಬದ ಸದಸ್ಯರು ಆಗ್ರಹಿಸಿದ್ದಾರೆ.