133 ವರ್ಷ ಹಳೆಯ ಸರ್ಕಾರಿ ಶಾಲೆ ದತ್ತು ಪಡೆದ ಕಿಚ್ಚ ಸುದೀಪ್

Public TV
1 Min Read
sudeep 8

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಕಿಚ್ಚ ಸುದೀಪ್‍ವರು 133 ವರ್ಷ ಹಳೆಯ ಶಾಲೆಯನ್ನು ದತ್ತು ಪಡೆಯುವ ಮೂಲಕವಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

sudeep 5 1

ಶಿವಮೊಗ್ಗ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಸರ್ಕಾರಿ ಕನ್ನಡ ಪ್ರಧಾನ ಹಿರಿಯ ಪ್ರಾಥಮಿಕ ಶಾಲೆಯನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ದತ್ತು ಪಡೆದುಕೊಂಡಿದೆ. ಈ ಶಾಲೆ ಅಂದಾಜು 133 ವರ್ಷಗಳಷ್ಟು ಹಳೆಯದು ಎನ್ನಲಾಗಿದೆ. ಶಾಲೆಗಾಗಿ ನಾವು ನೀವು ಯೋಜನೆ ಅಡಿಯಲ್ಲಿ ಇದನ್ನು ದತ್ತು ಪಡೆಯಲಾಗಿದೆ. ಶಾಲೆಯ ಶೈಕ್ಷಣಿಕ ಚಟುವಟಿಕೆಗಳಿಗೆ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗುವಂತಹ ಕೆಲಸಗಳನ್ನು ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಮಾಡಲಿದೆ. ಇದನ್ನೂ ಓದಿ: ಬಿಎಸ್‍ವೈ ಮಾತನ್ನೇ ಬಿಜೆಪಿ ಹೈಕಮಾಂಡ್ ಕೇಳಲಿಲ್ಲ, ಜನತಾದಳ ಮೂಲದ ಬೊಮ್ಮಾಯಿ ಮಾತು ಕೇಳುತ್ತಾರ? – ಸಿದ್ದರಾಮಯ್ಯ ಟೀಕೆ

sudeep 2 2

ಈ ಹಿಂದೆ ಕೂಡ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಕೆಲವು ಶಾಲೆಗಳನ್ನು ದತ್ತು ಪಡೆಯಲಾಗಿತ್ತು. ಹಲವು ಸರ್ಕಾರಿ ಶಾಲೆಗಳು ಅಳಿವಿನ ಅಂಚಿನಲ್ಲಿವೆ. ಮಕ್ಕಳ ಸಂಖ್ಯೆ ಕೊರತೆಯ ಕಾರಣ ನೀಡಿ ಕೆಲವೆಡೆ ಶಾಲೆಗಳನ್ನು ಮುಚ್ಚಲಾಗಿದೆ. ಇದರಿಂದ ಬಡಮಕ್ಕಳ ಶಿಕ್ಷಣಕ್ಕೆ ತೊಂದರೆ ಆಗಲಿದೆ. ಹಾಗಾಗಿ ಸರ್ಕಾರಿ ಶಾಲೆಗಳನ್ನು ಉಳಿಸಬೇಕು ಎಂದು ಅನೇಕ ಸೆಲೆಬ್ರಿಟಿಗಳು ಪ್ರಯತ್ನಿಸುತ್ತಿದ್ದಾರೆ. ಇದನ್ನೂ ಓದಿ: ಅಶೋಕ್ ಜೊತೆ ವೈಮನಸ್ಸು ಇಲ್ಲ- ವಿ ಸೋಮಣ್ಣ

 

SUDEEP

ಕಿಚ್ಚ ಸುದೀಪ್ ಅವರು ಮಾಡಿರುವ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ಹಗಲಿರುಳು ಕೆಲಸ ಮಾಡುತ್ತಿರುವ ಈ ಟ್ರಸ್ಟ್ ಸದಸ್ಯರು ಅನೇಕರಿಗೆ ನೆರವಾಗುತ್ತಿದ್ದಾರೆ. ರಾಜ್ಯದ ಹಲವು ಭಾಗಗಳಲ್ಲಿ ಅಗತ್ಯ ಇರುವವರಿಗೆ ಸಹಾಯ ನೀಡುವಲ್ಲಿ ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ತೊಡಗಿಕೊಂಡಿದೆ. ಈಗ ಕನ್ನಡ ಶಾಲೆಯೊಂದನ್ನು ದತ್ತು ಪಡೆಯುವ ಮೂಲಕ ಮತ್ತೆ ಸುದ್ದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *