Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೋವಿಡ್‍ನಿಂದ ಮೃತಪಟ್ಟವರ ಮನೆಗಳಿಗೆ ಸುಧಾಕರ್ ಭೇಟಿ – 1 ಲಕ್ಷ ಪರಿಹಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkaballapur | ಕೋವಿಡ್‍ನಿಂದ ಮೃತಪಟ್ಟವರ ಮನೆಗಳಿಗೆ ಸುಧಾಕರ್ ಭೇಟಿ – 1 ಲಕ್ಷ ಪರಿಹಾರ

Chikkaballapur

ಕೋವಿಡ್‍ನಿಂದ ಮೃತಪಟ್ಟವರ ಮನೆಗಳಿಗೆ ಸುಧಾಕರ್ ಭೇಟಿ – 1 ಲಕ್ಷ ಪರಿಹಾರ

Public TV
Last updated: August 5, 2021 4:09 pm
Public TV
Share
3 Min Read
CKB SUDHAKAR
SHARE

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಸಾವಿನ ಪ್ರಮಾಣ ನಿಯಂತ್ರಣದಲ್ಲಿದ್ದು, ಮೂರನೇ ಅಲೆಯ ಆತಂಕವಿಲ್ಲ ಎಂದು ಸಚಿವ ಡಾ.ಕೆ ಸುಧಾಕರ್ ಸ್ಪಷ್ಟಪಡಿಸಿದರು.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ನಿಂದ ತಮ್ಮವರನ್ನು ಕಳೆದುಕೊಂಡ ಕುಟುಂಬಕ್ಕೆ ಸಾಯಿಕೃಷ್ಣ ಚಾರಿಟಬಲ್ ಟ್ರಸ್ಟ್ ನಿಂದ ‘ಆಸರೆ’ ಕಾರ್ಯಕ್ರಮದಡಿ 1 ಲಕ್ಷ ರೂ. ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಸಚಿವರು ಮಾತನಾಡಿದರು. ನೊಂದ ಕುಟುಂಬಗಳ ಮನೆಗೆ ಭೇಟಿ ಕೊಟ್ಟ ಸಚಿವರು ಪರಿಹಾರದ ಮೊತ್ತವನ್ನು ವಿತರಿಸಿ ಸಾಂತ್ವನ ಹೇಳಿದರು.

CKB 5

ಚಿಕ್ಕಬಳ್ಳಾಪುರ ಜನತೆಯ ಆಶೀರ್ವಾದದಿಂದ ಎರಡನೇ ಬಾರಿ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ. ಮೊದಲ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಕೋವಿಡ್ ನಿಯಂತ್ರಿಸುವ ಜವಾಬ್ದಾರಿ ವಹಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಕುರಿತು ಸಭೆ ನಡೆಸಲಾಗಿದೆ. ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಚಿಕ್ಕಬಳ್ಳಾಪುರದಲ್ಲಿ ಕೋವಿಡ್ ನಿಯಂತ್ರಣಕ್ಕೆ ಬಂದಿದೆ. 14 ದಿನಗಳಿಂದ ಪಾಸಿಟಿವಿಟಿ ದರ ಎರಡಂಕಿಯನ್ನೂ ದಾಟಿಲ್ಲ. ಮೂರನೇ ಅಲೆ ಆರಂಭದ ಮುನ್ಸೂಚನೆ ಕೆಲ ಜಿಲ್ಲೆಗಳಲ್ಲಿ ಕಂಡುಬರುತ್ತಿದೆ. ಆದರೆ ಅಂತಹ ಆತಂಕ ಚಿಕ್ಕಬಳ್ಳಾಪುರದಲ್ಲಿ ಇಲ್ಲ ಎಂದು ತಿಳಿಸಿದರು.

CKB 4 Copy

ಗುಡಿಬಂಡೆ, ಬಾಗೇಪಲ್ಲಿ, ಚಿಂತಾಮಣಿ, ಗೌರಿಬಿದನೂರು, ಶಿಡ್ಲಘಟ್ಟ ತಾಲೂಕು ಕೇಂದ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ಆಕ್ಸಿಜನ್ ಘಟಕ ನಿರ್ಮಿಸಲಾಗಿದೆ. ಜಿಲ್ಲಾಕೇಂದ್ರದ ಹೊಸ ಆಸ್ಪತ್ರೆ ಹಾಗೂ ಹಳೆ ಆಸ್ಪತ್ರೆಯಲ್ಲಿ ಒಟ್ಟು ಎರಡು ಘಟಕ ಆರಂಭಿಸಲಾಗುತ್ತಿದೆ. ಅದೇ ರೀತಿ ಮಕ್ಕಳ ವಿಶೇಷ ನಿಗಾ ಘಟಕವನ್ನು ಜಿಲ್ಲೆಯಲ್ಲಿ ಆರಂಭಿಸಲು ಸಿದ್ಧತೆ ನಡೆದಿದ್ದು, ಅದಕ್ಕೆ ಬೇಕಾದ ವೆಂಟಿಲೇಟರ್ ಗಳನ್ನು ಒಂದೆರಡು ದಿನಗಳಲ್ಲಿ ನೀಡಲಾಗುವುದು. ವೈದ್ಯರ ನೇರ ನೇಮಕಾತಿ ಮಾಡಿರುವುದರಿಂದ ಶೇ.90 ರಷ್ಟು ವೈದ್ಯರ ಕೊರತೆ ನೀಗಿದೆ ಎಂದರು.

CKB 1 Copy

ದೂರದೃಷ್ಟಿಯ ನಾಯಕತ್ವ ಗುಣದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ರಾಜ್ಯವನ್ನು ಎಲ್ಲಾ ಆಯಾಮಗಳಲ್ಲಿ ಅಭಿವೃದ್ಧಿಪಡಿಸುವ ಕನಸನ್ನು ಬಿಚ್ಚಿಟ್ಟಿದ್ದಾರೆ. ಇದಕ್ಕೆ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಫೂರ್ತಿಯಾಗಿದ್ದಾರೆ. ಈ ಸರ್ಕಾರದಿಂದ ಆರೋಗ್ಯ, ಶಿಕ್ಷಣ, ಕೈಗಾರಿಕೆಯ ಅಭಿವೃದ್ಧಿ, ಬಡವರ ಕಲ್ಯಾಣ, ಉದ್ಯೋಗ ಸೃಷ್ಟಿಯಾಗಲಿದೆ. ಮೊದಲ ದಿನ ರೈತರ ಮಕ್ಕಳಿಗೆ ವಿದ್ಯಾರ್ಥಿವೇತನ ಘೋಷಿಸಿರುವುದೇ ಮುಖ್ಯಮಂತ್ರಿಗಳ ರೈತಪರ ಕಾಳಜಿ ತೋರಿಸಿದೆ. ಅದೇ ರೀತಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲರ ವೇತನ ಹೆಚ್ಚಳದಿಂದ ಸಾಮಾಜಿಕ ಭದ್ರತೆ ದೊರೆತಿದೆ ಎಂದರು.

sudhakar

ಅಕ್ಕಿ ನೀಡಿದರೆ ಊಟ ಮಾಡಬಹುದು. ಆದರೆ ಮೀನು ಕೊಡುವ ಬದಲು ಮೀನುಗಾರಿಕೆಯನ್ನು ಕಲಿಸಬೇಕು ಎಂಬ ಮಾತಿದೆ. ಹಾಗೆಯೇ ನಮ್ಮ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡಿ ಬದುಕು ಕಟ್ಟಿಕೊಡುವ ಕೆಲಸ ಮಾಡುತ್ತಿದೆ. ಈ ರೀತಿ ಉನ್ನತ ಶಿಕ್ಷಣಕ್ಕೆ 1 ಸಾವಿರ ಕೋಟಿ ರೂ. ವಿದ್ಯಾರ್ಥಿವೇತನ ನೀಡಿರುವ ಬೇರೆ ಉದಾಹರಣೆ ಇಲ್ಲ. ಪರಿಶಿಷ್ಟ ಪಂಗಡದ ಜನರಿಗಾಗಿ ವಿಶೇಷ ಸಚಿವಾಲಯ ರೂಪಿಸಬೇಕೆಂಬ ಬೇಡಿಕೆ ಇದ್ದು, ಅದನ್ನು ಆರಂಭಿಸಲು ತೀರ್ಮಾನಿಸಲಾಗಿದೆ ಎಂದರು.

df2aed5d f381 4649 84f3 0932e1de79f1

ಮುಂದಿನ ಒಂದು ತಿಂಗಳಿಗಾಗಿ ಒಂದೂವರೆ ಕೋಟಿ ಲಸಿಕೆಯ ಬೇಡಿಕೆ ಇಡಲಾಗಿತ್ತು. ಈವರೆಗೆ ರಾಜ್ಯದಲ್ಲಿ 3.9 ಕೋಟಿ ಲಸಿಕೆ ನೀಡಿದ್ದು, ಆಗಸ್ಟ್ ಅಂತ್ಯಕ್ಕೆ 4 ಕೋಟಿ ಹಾಗೂ ಸೆಪ್ಟೆಂಬರ್ ಅಂತ್ಯಕ್ಕೆ ಐದೂವರೆ ಕೋಟಿ ಲಸಿಕೆ ನೀಡುವ ಕೆಲಸವನ್ನು ಸರ್ಕಾರ ಮಾಡಲಿದೆ. ಯಾವುದೇ ಜಿಲ್ಲೆಯಲ್ಲಿ ಪಾಸಿಟಿವಿಟಿ ದರ ಶೇ.5 ಕ್ಕಿಂತ ಹೆಚ್ಚಿಲ್ಲ. ಕೇರಳಕ್ಕೆ ಹೊಂದಿಕೊಂಡ ಜಿಲ್ಲೆಗಳಲ್ಲಿ ಹೆಚ್ಚಿನ ಎಚ್ಚರಿಕೆಯನ್ನು ಸರ್ಕಾರ ವಹಿಸಿದೆ. ಸರ್ಕಾರ ಯಾವ ರೀತಿ ಆಡಳಿತ ನೀಡಲಿದೆ ಎಂದು ಬೇಕಿದ್ದರೆ ವಿರೋಧ ಪಕ್ಷದವರು ವ್ಯಾಖ್ಯಾನ ಮಾಡಲಿ ಎಂದು ಹೇಳಿದರು.

ff8c96c4 076d 4e6c 8db8 6c26472a06e6

ಮಂಚೇನಹಳ್ಳಿಗೆ ತಾಯಿ ಮತ್ತು ಮಕ್ಕಳ ಎರಡು ಆಸ್ಪತ್ರೆ ಮಂಜೂರಾಗಿದೆ. ಮಿನಿ ವಿಧಾನಸೌಧ ಮಂಜೂರಾಗಿದೆ. ಎಲ್ಲ ಶಾಸಕರಿಗೆ ಸಚಿವರಾಗುವ ಅರ್ಹತೆ ಇದೆ. ಪ್ರಾದೇಶಿಕ ಸಮತೋಲನ ನೋಡಿಕೊಂಡು ಸಂಪುಟ ರಚನೆಯಾಗುತ್ತದೆ. ಅವಕಾಶ ವಂಚಿತರಿಗೆ ಮುಂದೆ ಸೂಕ್ತ ಸ್ಥಾನವನ್ನು ಪಕ್ಷ ನೀಡಲಿದೆ. ನಂದಿ ಬೆಟ್ಟ ಸೇರಿದಂತೆ ಪ್ರವಾಸಿ ತಾಣಗಳಲ್ಲಿ ಜನ ಸೇರದಂತೆ ಕ್ರಮ ವಹಿಸಲಾಗುವುದು ಎಂದು ತಿಳಿಸಿದರು.

TAGGED:ChikkaballapuraCorona VirusCovid 19Public TVSudhakarಕೊರೊನಾ ವೈರಸ್ಕೋವಿಡ್ 19ಚಿಕ್ಕಬಳ್ಳಾಪುರಪಬ್ಲಿಕ್ ಟಿವಿಸುಧಾಕರ್
Share This Article
Facebook Whatsapp Whatsapp Telegram

Cinema news

prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories
Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood

You Might Also Like

rahul gandhi kn rajanna
Bengaluru City

ರಾಹುಲ್ ಗಾಂಧಿಗೆ ಕೆ.ಎನ್.ರಾಜಣ್ಣ ಪತ್ರ – ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್

Public TV
By Public TV
16 minutes ago
Chitradurga Pregnant Suicide
Chitradurga

ಕೌಟುಂಬಿಕ ಕಲಹ – 2 ತಿಂಗಳ ಗರ್ಭಿಣಿ ನೇಣಿಗೆ ಶರಣು

Public TV
By Public TV
17 minutes ago
Hassan Retired soldier Suicide
Bengaluru City

ಮಾನಸಿಕ ಖಿನ್ನತೆ – ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

Public TV
By Public TV
22 minutes ago
virat kohli 4
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
53 minutes ago
Kannada professor thief arrested 262 grams of gold ornaments and cash worth Rs. 32 lakh seized from the arrested woman bengaluu Police
Bengaluru City

ವೀಕ್ ಡೇಸ್‌ನಲ್ಲಿ ಕನ್ನಡ ಪ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್‌!

Public TV
By Public TV
1 hour ago
Chamarajanagar Leopard Cage
Chamarajanagar

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?