ಸೆಪ್ಟೆಂಬರ್ 13 ರಿಂದ 10 ದಿನ ವಿಧಾನಮಂಡಲದ ಅಧಿವೇಶನ

Public TV
1 Min Read
Madhuswamy

ಬೆಂಗಳೂರು: ಸೆಪ್ಟೆಂಬರ್ 13 ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲದ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದ್ದಾರೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಂಪುಟ ಪುನಾರಚನೆ ಆಗಿದೆ. ಹೀಗಾಗಿ ಸಂಪುಟ ಉಪಸಮಿತಿಗಳ ಪುನರ್ ರಚನೆಗೆ ನಿರ್ಧರಿಸಲಾಗಿದೆ. ಮಾನಸಿಕ ಆರೋಗ್ಯ ಆರೈಕೆ ನಿಯಮ-2023ಕ್ಕೆ ಅನುಮೋದನೆ ನೀಡಲಾಗಿದೆ. 2020-21 ನೇ ಸಾಲಿನ ಸರ್ಕಾರಿ ಹಾಗೂ ಅನುದಾನಿತ ಶಾಲಾ- ಕಾಲೇಜುಗಳ ಹದಿಹರೆಯದ ಹೆಣ್ಣುಮಕ್ಕಳಿಗೆ “ಶುಚಿ” ಕಾರ್ಯಕ್ರಮದಡಿ ಒಂದು ಮಗುವಿಗೆ ಹತ್ತು ಪ್ಯಾಡ್ ಗಳ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

CM Bommai

ಸಂಪುಟ ಸಭೆಯ ನಿರ್ಧಾರಗಳು:
* ರಾಜ್ಯದಲ್ಲಿನ 2,859 ಆರೋಗ್ಯ ಉಪಕೇಂದ್ರಗಳನ್ನು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳನ್ನಾಗಿ ಉನ್ನತೀಕರಣಕ್ಕಾಗಿ 478.91 ಕೋಟಿ ರೂ ಮೊತ್ತ ಅನುದಾನ
* ಕಲಬುರಗಿ ಜಿಲ್ಲೆ, ಆಳಂದ ತಾಲೂಕು ಮಿನಿ ವಿಧಾನಸೌಧ ಕಟ್ಟಡಕ್ಕೆ ಕಾಮಗಾರಿಯ ರೂ. 12.48 ಕೋಟಿ ಪರಿಷ್ಕೃತ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.
* ಮಂಗಳೂರು ಮಹಾನಗರ ವ್ಯಾಪ್ತಿಯ ಪಚ್ಚನಾಡಿ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂಗ್ರಹವಾಗಿರುವ ಪಾರಂಪರಿಕ ತ್ಯಾಜ್ಯ ನಿರ್ವಹಣೆಗೆ ರೂ. 73.73 ಕೋಟಿಗಳ ವಿಸ್ತ್ರತ ಯೋಜನಾ ವರದಿಗೆ ಅನುಮೋದನೆ
* ಆಝಾದಿ ಅಮೃತ ಮಹೋತ್ಸವ ಹಿನ್ನೆಲೆ ಸಿಎಂ ಘೋಷಣೆ ಮಾಡಿದ ಕಾರ್ಯಕ್ರಮಗಳಿಗೆ ಅನುಮೋದನೆ. ಅಮೃತ ನಗರಿ ಕಾರ್ಯಕ್ರಮಕ್ಕೆ 75 ಕೋಟಿಗೆ ಅನುಮೋದನೆ ಇದನ್ನೂ ಓದಿ: ನಾಡಬಂದೂಕಿಗೆ ಸೈಕಲ್ ಬಾಲ್ಸ್ ಬಳಸಿ ಗುಂಡಿನ ದಾಳಿ- ವ್ಯಕ್ತಿ ಪ್ರಾಣಾಪಾಯದಿಂದ ಪಾರು

Share This Article
Leave a Comment

Leave a Reply

Your email address will not be published. Required fields are marked *