ಕೋಲಾರ: ರಾಜ್ಯದ ಸರ್ಕಾರಿ ಶಾಲೆಗಳು ಸುಧಾರಿಸಿವೆ, ದೆಹಲಿ ಮಾದರಿಯನ್ನ ಅಳವಡಿಸಿಕೊಳ್ಳಬೇಕಿದೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.
ಕೋಲಾರದ ಶ್ರೀನಿವಾಸಪುರ ಪಟ್ಟಣದಲ್ಲಿ ಮಾರುತಿ ಸಮುದಾಯ ಭವನದಲ್ಲಿ ಎಸ್‍ಎಸ್‍ಎಲ್ ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಬಗ್ಗೆ ಕೀಳರಿಮೆ ಪಡುವುದು ಬೇಡ, ರಾಜ್ಯದಲ್ಲಿಯೂ ಸಹ ದೆಹಲಿ ಶಿಕ್ಷಣ ಮಾದರಿಯಲ್ಲಿ ಅಭಿವೃದ್ಧಿ ಹೊಂದಬೇಕು. ರಾಜ್ಯದಲ್ಲಿ ಸರ್ಕಾರಿ ಶಾಲೆಗಳು ಉನ್ನತಮಟ್ಟದ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿವೆ. ಸರ್ಕಾರಿ ಶಾಲೆಗಳು ಯಾವುದೆ ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲವೆಂಬುದನ್ನ ಪೋಷಕರು ಅರಿಯಬೇಕು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ರಾಹುಲ್ ಗಾಂಧಿಯ ಪೋಸ್ಟ್ ತೆಗೆದು ಹಾಕಿದ ಫೇಸ್‍ಬುಕ್
ಈ ವೇಳೆ ಸರ್ಕಾರಿ ಶಾಲೆಗಳ ಕಟ್ಟಡಗಳನ್ನ ದುರುಪಯೋಗ ಮಾಡಿಕೊಳ್ಳುತ್ತಿದ್ದು, ಅವು ದೇವಾಲಯಗಳು ಇಂತಹ ಪವಿತ್ರವಾದ ಸ್ಥಳದಲ್ಲಿ ಆಕ್ಷೇಪಾರ್ಹ ಚಟುವಟಿಕೆಗಳು ನಡೆಸಲು ಅವಕಾಶ ನೀಡಬಾರದು. ಅಲ್ಲದೆ ಸರ್ಕಾರಿ ಶಾಲೆಗಳಿಗೆ ಕಾಂಪೌಂಡ್ ನಿರ್ಮಾಣ ಮಾಡಿ, ಸಿಸಿ ಟಿವಿಗಳನ್ನ ಅಳವಡಿಸುವಂತೆ ಶಿಕ್ಷಣ ಇಲಾಖೆಗೆ ಸಲಹೆ ನೀಡಿದ್ದಾರೆ. ಇದೆ ವೇಳೆ ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಅತಿ ಹೆಚ್ಚು ಅಂಕ ಪಡೆದು ವಿದ್ಯಾರ್ಥಿಗಳನ್ನ ಆತ್ಮೀಯವಾಗಿ ರಮೇಶ್ ಕುಮಾರ್ ಅಭಿನಂದಿಸಿದ್ದಾರೆ. ಇದೆ ವೇಳೆ ತಾಲೂಕಿನ ಅಧಿಕಾರಿಗಳು ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.