– ರಾಯರು ಸಶರೀರವಾಗಿ ವೃಂದಾವನಸ್ಥರಾಗಿ ಇಂದಿಗೆ 350 ವರ್ಷ
ರಾಯಚೂರು: ರಾಯರ ಆರಾಧನೆಗೆ ಪಾದಯಾತ್ರೆ ಮೂಲಕ ಭಕ್ತರ ದಂಡು ಹರಿದು ಬರುತ್ತಿದೆ. ಮಂತ್ರಾಲಯದಲ್ಲಿ ನಡೆಯುತ್ತಿರುವ ಶ್ರೀಗುರು ರಾಘವೇಂದ್ರ ಸ್ವಾಮಿಗಳ ಏಳುದಿನಗಳ ಆರಾಧನಾ ಮಹೋತ್ಸವದಲ್ಲಿ ಇಂದು ಮುಖ್ಯವಾದ ದಿನ. ರಾಯರು ಸಶರೀರವಾಗಿ ವೃಂದಾವನಸ್ಥರಾಗಿ ಇಂದಿಗೆ 350 ವರ್ಷ ಸಂದಿವೆ.
ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ ಹಿನ್ನೆಲೆ ನಾನಾ ಕಡೆಗಳಿಂದ ಭಕ್ತರು ಬರಿಗಾಲಲ್ಲೆ ಪಾದಯಾತ್ರೆ ಮಾಡುತ್ತಿದ್ದಾರೆ. ಬಳ್ಳಾರಿ, ಕೊಪ್ಪಳ, ಯಾದಗಿರಿ, ರಾಯಚೂರು ಜಿಲ್ಲೆಯ ವಿವಿಧೆಡೆಯಿಂದ ಭಕ್ತರು ಮಂತ್ರಾಲಯಕ್ಕೆ ಪಾದಯಾತ್ರೆ ಬರುತ್ತಿದ್ದಾರೆ. ಇದನ್ನೂ ಓದಿ: ಬಹುಕಾಲದ ಗೆಳತಿ ಜೊತೆ ನಟ ಕಾರ್ತಿಕೇಯ ನಿಶ್ಚಿತಾರ್ಥ – ಫೋಟೋ ವೈರಲ್
ಭಜನಾ ಮಂಡಳಿಗಳು, ಭಕ್ತರ ತಂಡಗಳು ಪ್ರತೀವರ್ಷ ಆರಾಧನಾ ಮಹೋತ್ಸವದ ಸಂದರ್ಭದಲ್ಲಿ ರಾಯರ ಮಠವನ್ನು ಪಾದಯಾತ್ರೆ ಮೂಲಕ ತಲುಪುತ್ತವೆ. ಕಳೆದ ವರ್ಷ ಕೊರೊನಾ ಲಾಕ್‍ಡೌನ್ ಹಿನ್ನೆಲೆ ಆರಾಧನಾ ಮಹೋತ್ಸವವನ್ನ ಮಠದ ಸಿಬ್ಬಂದಿ ಅಷ್ಟೆ ಸರಳವಾಗಿ ಆಚರಿಸಿದ್ದರು. ಈ ಬಾರಿ ಆಂಧ್ರಪ್ರದೇಶದಲ್ಲಿ ಲಾಕ್‍ಡೌನ್ ಸಡಿಲಿಕೆ ಇರುವುದರಿಂದ ವಿಜೃಂಭಣೆಯಿಂದ ರಾಯರ 350 ನೇ ಆರಾಧನಾ ಮಹೋತ್ಸವ ಆಚರಿಸಲಾಗುತ್ತಿದೆ. ಹೀಗಾಗಿ ವಿವಿಧೆಡೆಯಿಂದ ಭಕ್ತರು ಪಾದಯಾತ್ರೆ ಮೂಲಕ ಬರುತ್ತಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನವನ್ನು ಬಿಟ್ಟು ಹೋಗುವುದಿಲ್ಲ, ದೇಹ ಇಲ್ಲೇ ಮಣ್ಣಾದರೂ ಸೈ: ಹಂಗಾಮಿ ಅಧ್ಯಕ್ಷ ಅಮರುಲ್ಲಾ ಸಲೇಹ್
ಪ್ರತೀವರ್ಷದಂತೆ ತಿರುಮಲ ತಿರುಪತಿ ದೇವಾಲಯದಿಂದ ಮಂತ್ರಾಲಯ ಮಠಕ್ಕೆ ವೆಂಕಟೇಶ್ವರ ಸ್ವಾಮಿ ಶೇಷವಸ್ತ್ರವನ್ನ ತರಲಾಗಿದೆ. ವಾದ್ಯಗೋಷ್ಠಿಯೊಂದಿಗೆ ತಿರುಮಲ ತಿರುಪತಿ ದೇವಾಲಯದ ಅಧಿಕಾರಿಗಳನ್ನ ಶ್ರೀ ಮಠದ ಶ್ರೀಗಳು ಹಾಗೂ ಆಡಳಿತ ಮಂಡಳಿ ಬರಮಾಡಿಕೊಂಡಿತು. ಮಂತ್ರಾಲಯ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ರಾಯರಿಗೆ ಶೇಷವಸ್ತ್ರ ಸಮರ್ಪಣೆ ಮಾಡಿದರು. ಇದನ್ನೂ ಓದಿ: ಯಾರ ಹಂಗಿನಲ್ಲೂ ಇರದ ಸರ್ಕಾರ ಕೊಡಿ: ಎಚ್.ಡಿ ಕುಮಾರಸ್ವಾಮಿ
350 ನೇ ಆರಾಧನಾ ಮಹೋತ್ಸವ ಹಿನ್ನೆಲೆ ರಾಯರ ವೃಂದಾವನಕ್ಕೆ ಪಂಚಾಮೃತ ಅಭಿಷೇಕ ನಡೆಯಿತು. ಪಂಚಾಮೃತ ಅಭಿಷೇಕ, ಶೇಷವಸ್ತ್ರ ಸಮರ್ಪಣೆ ಬಳಿಕ ಚಿನ್ನದ ರಥೋತ್ಸವ ನಡೆಯಲಿದೆ. ಮಠದ ಪ್ರಾಂಗಣದಲ್ಲಿ ಚಿನ್ನದ ರಥೋತ್ಸವ ನಡೆಯಲಿದ್ದು ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಭಾಗಿಯಾಗಲಿದ್ದಾರೆ.