ಗ್ಯಾಂಗ್‍ರೇಪ್ ಎಸಗಿ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ ಕಿರಾತಕರು!

Public TV
1 Min Read
MYS RAPE CASE 1

ಮೈಸೂರು: ಅರಮನೆ ನಗರಿಯ ಚಾಮುಂಡಿಬೆಟ್ಟದಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಟ್ವಿಸ್ಟ್ ದೊರೆತಿದ್ದು, ಕಾಮುಕರು ತಮ್ಮ ಕಾಮ ತೃಷೆ ತೀರಿಸಿಕೊಂಡ ಬಳಿಕ ವಿದ್ಯಾರ್ಥಿನಿಗೆ ಬೆದರಿಕೆ ಹಾಕಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದಿದೆ.

MYS RAPE CASE 2

ವಿದ್ಯಾರ್ಥಿನಿಯನ್ನ ರೇಪ್ ಮಾಡಿದ್ದಲ್ಲದೆ, ಆಕೆಯ ಬೆತ್ತಲೆ ವೀಡಿಯೋ ಕೂಡ ಮಾಡಿದ್ದಾರೆ. ರೇಪ್ ಮಾಡಿ ವೀಡಿಯೋ ಮಾಡಿಕೊಂಡಿದ್ದ ಕಾಮುಕರು ನಂತರ ಪೊಲೀಸರಿಗೆ ದೂರು ಕೊಡದಂತೆ ಬೆದರಿಕೆ ಹಾಕಿದ್ದಾರೆ. ಒಂದು ವೇಳೆ ಪೊಲೀಸರಿಗೆ ದೂರು ಕೊಟ್ಟರೆ ವೀಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದಾರೆ. ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ತೆ ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾಳೆ.

MYS RAPE CASE 4

ಮಂಗಳವಾರ ರಾತ್ರಿ 8 ಗಂಟೆ ಸುಮಾರಿಗೆ ವಿದ್ಯಾರ್ಥಿನಿ ತನ್ನ ಸ್ನೇಹಿತನ ಜೊತೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಮೋರಿ ಮೇಲೆ ಕುಳಿತಿದ್ದಳು. ಈ ವೇಳೆ ಪಾನಮತ್ತ ಯುವಕರ ತಂಡವೊಂದು ಅಲ್ಲಿಗೆ ಬಂದು ಯುವಕನಿಗೆ ಕಲ್ಲಿನಿಂದ ಹಲ್ಲೆ ಮಾಡಿದ್ದಾರೆ. ನಂತರ ವಿದ್ಯಾರ್ಥಿನಿಯನ್ನು ದೂರ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

MYS RAPE CASE

ಇತ್ತ ಪೊದೆಯಲ್ಲಿ ನಿತ್ರಾಣವಾಗಿದ್ದ ಜೋಡಿಯನ್ನು ನೋಡಿದ ಯುವಕನ ಸ್ನೇಹಿತರು ಕೂಡಲೇ ಪೊಲೀಸ್ ಠಾಣೆಗೆ ವಿಷಯ ಮುಟ್ಟಿಸಿದ್ದಾರೆ. ಅಲ್ಲದೆ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆ ಸಂಬಂಧ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

Share This Article
Leave a Comment

Leave a Reply

Your email address will not be published. Required fields are marked *