ಚಿಕ್ಕಬಳ್ಳಾಪುರ: ಫುಟ್ಬಾಲ್ ಆಟಗಾರರೊಬ್ಬರು ವಾಸವಾಗಿದ್ದ ವಿಲ್ಲಾವೊಂದರಲ್ಲಿ 22 ಲಕ್ಷ ಮೌಲ್ಯದ ವಜ್ರಾಭರಣಗಳು ಕಳ್ಳತನವಾಗಿರುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಂದಹಾಗೆ ದೇವನಹಳ್ಳಿ-ನಂದಿಬೆಟ್ಟ ಮಾರ್ಗದ ಪ್ರೆಸ್ಟೀಜ್ ಗಾಲ್ಪ್ ಶೈರ್ ರೆಸಾರ್ಟ್‍ನಲ್ಲಿ ಆಸ್ಟ್ರೇಲಿಯಾ ಮೂಲದ ಕ್ಲಬ್ ಫುಟ್ಬಾಲ್ ಆಟಗಾರ ವೊಹಾನ್ ಟ್ರೋಲಫಿ ವಾಸವಾಗಿದ್ದಾರೆ. ಈ ವೊಹಾನ್ ಟ್ರೊಲಫಿ ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಈ ವಿಲ್ಲಾದಲ್ಲಿ ವಾಸವಾಗಿದ್ದಾರೆ. ಆದರೆ ಈ ಫುಟ್ಬಾಲ್ ಆಟಗಾರನ ವಿಲ್ಲಾಗೆ ಕಳ್ಳರು ಪ್ರವೇಶ ಮಾಡಿ, ಪತ್ನಿಯ 22 ಲಕ್ಷ ಮೌಲ್ಯದ ವಜ್ರಾಭರಣಗಳನ್ನು ಕಳವು ಮಾಡಿದ್ದಾರೆ. ನಂತರ ವಿಲ್ಲಾಗೆ ಬಂದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ:ಪರಪ್ಪನ ಅಗ್ರಹಾರದಲ್ಲಿ ಕೃಷ್ಣಾಷ್ಟಮಿ ಆಚರಣೆ
ಈ ಬಗ್ಗೆ ರೆಸಾರ್ಟ್‍ಗೆ ಭಾರೀ ಭದ್ರತೆಯಿದ್ದು, ಸುತ್ತಲೂ ಸಿಸಿಟಿವಿ ಕಣ್ಗಾವಲು ಇದೆ. ರೆಸಾರ್ಟ್‍ಗೆ ಸಂಬಂಧಿಸಿದವರು, ಕೂಲಿ ಕಾರ್ಮಿಕರು, ಸಿಬ್ಬಂದಿ ಹೊರತುಪಡಿಸಿ ಬೇರೆ ಯಾರಿಗೂ ಒಳಗೆ ಪ್ರವೇಶವಿಲ್ಲ. ಹೀಗಾಗಿ ಅಲ್ಲಿನವರೇ ಯಾರೋ ಕಳವು ಮಾಡಿರಬೇಕು ಎಂಬ ಅನುಮಾನ ವ್ಯಕ್ತವಾಗುತ್ತಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ:ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್