ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ: ಹೆಚ್.ಡಿ.ಕುಮಾರಸ್ವಾಮಿ

Public TV
2 Min Read
Kumaraswamy

ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಮ್ಮ ಪಕ್ಷ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಈ ಬಾರಿ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಮುಂದಿನ ತಿಂಗಳು ನಡೆಯಲಿರುವ ಮಹಾನಗರ ಪಾಲಿಕೆ ಚುನಾವಣೆ ಕುರಿತಂತೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಪ್ರತಿನಿತ್ಯ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ. ಅವರ ಅವಧಿಯಲ್ಲಿ ಏನಾಗಿದೆ ಅಂತ ಎಲ್ಲರಿಗೂ ಗೊತ್ತಿದೆ ಎಂದು ವ್ಯಂಗ್ಯವಾಡಿದ್ದಾರೆ.

HDK 2

ಕುಮಾರಸ್ವಾಮಿ ರೈತರು ಬೆಳೆಯುವ ಬೆಳೆಯನ್ನು ರಫ್ತು ಮಾಡಲು ಉತ್ತೇಜನ ನೀಡಲು ಸಂಸ್ಥೆ ಪ್ರಾರಂಭ ಮಾಡಬೇಕು ಎಂಬ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿಕೆ ಕುರಿತಂತೆ, ರಾಜ್ಯದಿಂದ ಸಾವಿರಾರು ಕೋಟಿ ರೂಪಾಯಿ ಕೃಷಿ ಉತ್ಪನ್ನ ರಫ್ತಾಗುತ್ತದೆ. ಅದರ ಪರಿಜ್ಞಾನವೇ ಕೇಂದ್ರ ಸಚಿವರಿಗೆ ಇಲ್ಲ, ಅಧಿಕಾರಿಗಳಿಗೂ ಇಲ್ಲ ಒಟ್ಟಿನಲ್ಲಿ ಈ ಸರ್ಕಾರದಲ್ಲಿ ಅಭಿವೃದ್ಧಿಪರ ಕಾರ್ಯಕ್ರಮ ಕಾಣಲು ಸಾಧ್ಯವಿಲ್ಲ ಎಂದು ಕುಟುಕಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್‍ಗೆ ಅಧಿಕಾರಕ್ಕೆ ಬರುವ ಹಗಲುಗನಸು ಕಾಣುವ ನೈತಕತೆ ಇಲ್ಲ: ಸಿ.ಟಿ.ರವಿ

SHOBA 1

ಕೋವಿಡ್ ಕಾರಣದಿಂದಾಗಿ ಸರ್ಕಾರದ ಜನ ವಿರೋಧಿ ಧೋರಣೆಯನ್ನು ಖಂಡಿಸಲು ಬೀದಿಗಿಳಿದು ಹೋರಾಟ ಮಾಡಲು ಆಗಲಿಲ್ಲ. ಆದರೆ ಆಡಳಿತರೂಢ ಬಿಜೆಪಿ ಸರ್ಕಾರದ ಪರವಾಗಿಯೂ ನಾನಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷರು ಯಡಿಯೂರಪ್ಪ ಪರವಾಗಿ ಸಾಫ್ಟ್ ಕಾರ್ನರ್ ಮಾತುಗಳನ್ನು ಹೇಳಿದ್ದಾರೆ. ಆದರೆ ನಮಗೆ ಸಾಫ್ಟ್ ಕಾರ್ನರ್ ಅವಶ್ಯಕತೆ ಇಲ್ಲ. ಅವಶ್ಯಕತೆ ಬಂದಾಗ ಹೋರಾಟಕ್ಕೆ ಧುಮುಕುತ್ತೇವೆ. ರಾಜಕಾರಣದಲ್ಲಿ ಇತ್ತೀಚೆಗೆ ಸಿದ್ಧಾಂತಗಳಲ್ಲಿ ಬೆನ್ನು ತಟ್ಟಿಕೊಳ್ಳೋ ಸ್ಥಿತಿ ಇಲ್ಲ. ಅಲ್ಲದೇ ಮೈಸೂರು ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕರೇ ನಮ್ಮ ಜೊತೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಇರಲಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:ಕಾಂಗ್ರೆಸ್ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಭಗವಂತ ಖೂಬಾ

BSY 7 medium

ಯಡಿಯೂರಪ್ಪವನರ ಬಗ್ಗೆ ಮಾತನಾಡಿದ ಅವರು, ಪಕ್ಷ ಸಂಘಟನೆ ವಿಚಾರವಾಗಿ ನಾನು ತಪ್ಪು ಅಂತ ಹೇಳಲ್ಲ ಮತ್ತು ಅದರ ಬಗ್ಗೆ ಸಣ್ಣದಾಗಿ ಮಾತನಾಡುವುದಿಲ್ಲ. ಪ್ರಸ್ತುತ ಕೋವಿಡ್ ಮಾರ್ಗಸೂಚಿ ಪಾಲಿಸಬೇಕು ಅಂತಾರೆ, ಆದರೆ ಚುನಾವಣೆಗಳಲ್ಲಿ ಎಲ್ಲಿಂದ ಈ ಮಾರ್ಗಸೂಚಿ ಜಾರಿಯಾಗುತ್ತಿದೆ? ಎಂದ ಅವರು ಧಿಡೀರನೆ ಚುನಾವಣಾ ಆಯೋಗ ಚುನಾವಣೆ ಘೋಷಣೆ ಮಾಡಿದ್ದರಿಂದ ಚುನಾವಣೆ ಅನಿವಾರ್ಯವಾಯಿತು. ಸದ್ಯ ಹೊಸದಾಗಿ ಪಕ್ಷ ಸಿದ್ಧಾಂತ ಒಪ್ಪಿಕೊಂಡು ಬರುವವರಿಗೆ ಜೆಡಿಎಸ್ ಬಾಗಿಲು ತೆರೆದಿದೆ. ಹೋಗುವವರು ಹೋಗಬೇಕೆಂದರೆ ಹೋಗಬಹುದು, ಇರುವವರು ಇರಬಹುದು ಎಂದು ಹೇಳಿದ್ದಾರೆ.  ಇದನ್ನೂ ಓದಿ:ಈ ಬಾರಿಯ ಮೊಬೈಲ್ ಆ್ಯಪ್ ಬೆಳೆ ಸಮೀಕ್ಷೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ: ಬಿ.ಸಿ.ಪಾಟೀಲ್

MYS RAPE CASE 2

ಇದೇ ವೇಳೆ, ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ಸರ್ಕಾರದ ವೈಫಲ್ಯತೆ ಇದೆ. ಆರೋಪಿಗಳು ಈ ಹಿಂದೆ ಇದೇ ರೀತಿ ಅನೇಕ ಕೃತ್ಯವೆಸಗಿದ್ದಾರೆ ಎಂದು ಹೇಳುವ ಪೊಲೀಸ್ ಅಧಿಕಾರಿಗಳು ಇಷ್ಟು ದಿನ ಏನು ಮಾಡ್ತಿದ್ದರು ಎಂದು ಪ್ರಶ್ನಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *