ಚಿಕ್ಕಮಗಳೂರು: ಹೊಸ ಎಟಿಎಂ ಕಾರ್ಡ್ ನೀಡುವುದಾಗಿ ಹೇಳಿ 1 ಲಕ್ಷ ರೂ. ಪಂಗನಾಮ ಹಾಕಿರುವ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಜಾವಳಿ ಗ್ರಾಮದಲ್ಲಿ ನಡೆದಿದೆ.
ಕೃಷ್ಣೇಗೌಡ ಅವರ ಬ್ಯಾಂಕ್ ಖಾತೆಯಿಂದ ಹಣ ಕದ್ದಿದ್ದಾರೆ. ಓಟಿಪಿ ನಂಬರ್ ನೀಡುವಂತೆ ವಂಚಕನಿಂದ ಕೃಷ್ಣೇಗೌಡರಿಗೆ ಕರೆ ಬಂದಿದೆ. ತನ್ನನ್ನು ಬ್ಯಾಂಕ್ ಮ್ಯಾನೇಜರ್ ಎಂದು ಪರಿಚಯಿಸಿಕೊಂಡ ವಂಚಕ, ಮೊಬೈಲಿಗೆ ಬಂದ ಓಟಿಪಿ ನಂಬರ್ ಹೇಳಿ ಎಂದು ಕೃಷ್ಣೇಗೌಡರನ್ನು ಕೇಳಿದ್ದಾನೆ. ಕೆಲವೇ ಸೆಕೆಂಡುಗಳಲ್ಲಿ ಕೃಷ್ಣೇಗೌಡರ ಖಾತೆಯಿಂದ 1 ಲಕ್ಷ ರೂ. ಹಣ ಡ್ರಾ ಮಾಡಲಾಗಿದೆ. ಇದನ್ನೂ ಓದಿ: ಸೆ.5 ರವರೆಗೆ ರಾಜ್ಯದ ಹಲವೆಡೆ ಮಳೆ – ಯೆಲ್ಲೋ ಅಲರ್ಟ್ ಘೋಷಣೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರು ಸೈಬರ್ ಕ್ರೈಮ್ ಠಾಣೆಯಲ್ಲಿ ದೂರು ದಾಖಲಾಗಿದೆ. ಸೈಬರ್ ಕ್ರೈಂ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದು, ಹಣ ವಾಪಾಸ್ ಸಿಗುವ ಭರವಸೆ ನೀಡಿದ್ದಾರೆ.