ಕೊಲ್ಲೂರು ಸನ್ನಿಧಾನ ಪ್ರವೇಶಕ್ಕೆ ಆಧಾರ್ ಕಡ್ಡಾಯ – ಉಡುಪಿ ಜಿಲ್ಲಾಡಳಿತ ಆದೇಶ

Public TV
1 Min Read
kollur mookambika temple

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ನಿರಂತರವಾಗಿ ದಾಖಲಾಗುತ್ತಿದ್ದು, ಕೇರಳ ರಾಜ್ಯದಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬಿರುವ ಕಾರಣ ಉಡುಪಿ ಜಿಲ್ಲೆಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗಿದೆ. ದಕ್ಷಿಣ ಭಾರತದ ಪ್ರಸಿದ್ಧ ಶಕ್ತಿಪೀಠ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಪ್ರವೇಶಕ್ಕೆ ಆಧಾರ್ ಕಡ್ಡಾಯ ಮಾಡಲಾಗಿದೆ.

kollur mookambika temple

ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಮೂಕಾಂಬಿಕ ದೇವಸ್ಥಾನ ಪ್ರವೇಶಕ್ಕೆ ಆಧಾರ್ ಕಾರ್ಡ್ ಕಡ್ಡಾಯಗೊಳಿಸಲಾಗಿದ್ದು, ಆಧಾರ್ ಕಾರ್ಡ್ ಇಲ್ಲದೇ ಜನರನ್ನು ದೇವಸ್ಥಾನದ ಒಳಗೆ ಬಿಡದಿರಲು ನಿರ್ಧರಿಸಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆದಿದ್ದು, ಬಳಿಕ ನಿರ್ಧಾರ ಕೈಗೊಳ್ಳಲಾಗಿದೆ. ಹೊರ ರಾಜ್ಯ, ಹೊರ ಜಿಲ್ಲೆಯವರು ಮತ್ತು ಊರಿನವರು ಆಧಾರ್ ಕಾರ್ಡ್‍ಗಳನ್ನು ಕಡ್ಡಾಯವಾಗಿ ಹೊಂದಿರಬೇಕು. ಇಲ್ಲವಾದಲ್ಲಿ ಸಾಫ್ಟ್ ಕಾಪಿಯನ್ನಾದರೂ ತರಬೇಕು ಎಂದು ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

kollur mookambika temple

ಆಧಾರ್ ಕಾರ್ಡ್ ಪರೀಕ್ಷೆಗಳಿಗೆ ವಿಶೇಷ ಸಿಬ್ಬಂದಿಯನ್ನು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ನಿಯೋಜನೆ ಮಾಡಲಾಗಿದೆ. ಕೊರೊನಾ ವ್ಯಾಪಕವಾಗಿ ಹರಡುವುದನ್ನು ತಪ್ಪಿಸಲು ಈ ನಿಯಮ ಕೈಗೊಳ್ಳಲಾಗಿದೆ. ಕೇರಳದಿಂದ ಅತಿ ಹೆಚ್ಚು ಭಕ್ತರು ಉಡುಪಿ ಜಿಲ್ಲೆಗೆ ಭೇಟಿ ಕೊಡುತ್ತಾರೆ. ನಸಿರ್ಂಗ್ ವಿದ್ಯಾರ್ಥಿಗಳು ಅತೀ ಹೆಚ್ಚು ಸಂಖ್ಯೆಯಲ್ಲಿ ಉಡುಪಿಯ ಕಾಲೇಜುಗಳಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಹೀಗಾಗಿ ಕಟ್ಟುನಿಟ್ಟಿನ ಮಾರ್ಗಸೂಚಿಯನ್ನು ಉಡುಪಿ ಜಿಲ್ಲೆಯಲ್ಲಿ ಜಾರಿಗೆ ತರಲಾಗುತ್ತಿದೆ. ಇದನ್ನೂ ಓದಿ:ಬೊಮ್ಮಾಯಿಯವರು ಮಾಜಿ ಮುಖ್ಯಮಂತ್ರಿಗಳಂತೆ ನಮ್ಮ ಸಮಾಜಕ್ಕೆ ಮೋಸ ಮಾಡುವುದಿಲ್ಲ: ಯತ್ನಾಳ್

kollur mookambika temple

ಈ ಬಗ್ಗೆ ಮಾತನಾಡಿದ ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್, ಕೇರಳದಿಂದ ಉಡುಪಿ ಜಿಲ್ಲೆಗೆ ಬರುವ 72 ಗಂಟೆ ಮೊದಲು ನೆಗೆಟಿವ್ ವರದಿ ಬೇಕು. ಉಡುಪಿಗೆ ಬಂದು ಒಂದು ವಾರಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಆಗಬೇಕು. ಸಾಂಸ್ಥಿಕ ಕ್ವಾರಂಟೈನ್ ಮುಗಿದ ನಂತರ ಮತ್ತೆ ಕೊರೊನಾ ಟೆಸ್ಟ್ ಮಾಡಿಸಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಕೊಲ್ಲೂರು ಸನ್ನಿಧಾನ ಪ್ರವೇಶಕ್ಕೆ ಆಧಾರ್ ಕಡ್ಡಾಯ – ಉಡುಪಿ ಜಿಲ್ಲಾಡಳಿತ ಆದೇಶ

Share This Article
Leave a Comment

Leave a Reply

Your email address will not be published. Required fields are marked *