Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೇಂದ್ರ ಅಧ್ಯಯನ ತಂಡ ಭೇಟಿ – ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಸಿಎಂ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೇಂದ್ರ ಅಧ್ಯಯನ ತಂಡ ಭೇಟಿ – ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಸಿಎಂ ಮನವಿ

Bengaluru City

ಕೇಂದ್ರ ಅಧ್ಯಯನ ತಂಡ ಭೇಟಿ – ಮಾರ್ಗಸೂಚಿ ಬದಲಿಸಿ ಹೆಚ್ಚುವರಿ ಅನುದಾನಕ್ಕೆ ಸಿಎಂ ಮನವಿ

Public TV
Last updated: September 4, 2021 7:50 pm
Public TV
Share
2 Min Read
CENTRAL TEAM
SHARE

ಬೆಂಗಳೂರು: ನಾಲ್ಕು ವರ್ಷದಿಂದ ಪ್ರವಾಹ, ಭೂಕುಸಿತದ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಎನ್.ಡಿ.ಆರ್.ಎಫ್ ಪರಿಹಾರ ಮಾರ್ಗಸೂಚಿಯಲ್ಲಿ ಬದಲಾವಣೆ ಮಾಡಿ, ಹೆಚ್ಚುವರಿ ಪರಿಹಾರ ಒದಗಿಸಲು ಶಿಫಾರಸು ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕೇಂದ್ರ ತಂಡಕ್ಕೆ ಮನವಿ ಮಾಡಿದರು.

ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ಕೇಂದ್ರ ಅಧ್ಯಯನ ತಂಡ ಇಂದು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ರಾಜ್ಯದಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಚರ್ಚೆ ನಡೆಸಿತು. ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಮಿತ್ ಶಾ ಅವರಿಗೆ ಕೇಂದ್ರ ತಂಡ ಕಳುಹಿಸಿರುವುದಕ್ಕೆ ಕೃತಜ್ಞತೆಗಳನ್ನು ಸಲ್ಲಿಸಿದ ಮುಖ್ಯಮಂತ್ರಿಗಳು, ರಕ್ಷಣೆ ಮತ್ತು ತುರ್ತು ಪರಿಹಾರ ಒದಗಿಸುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ಆದರೆ ಜನರ ಪುನರ್ವಸತಿಗೆ ಹೆಚ್ಚಿನ ನೆರವಿನ ಅಗತ್ಯವಿದೆ ಎಂದು ನುಡಿದರು.

ಕೇಂದ್ರ ಗೃಹ ಸಚಿವಾಲಯದ ಸುಶೀಲ್ ಪಾಲ್ ನೇತೃತ್ವದ ಕೇಂದ್ರ ಅಧ್ಯಯನ ತಂಡ ಇಂದು ಮುಖ್ಯಮಂತ್ರಿ @BSBommai ರವರನ್ನು ಭೇಟಿಯಾಗಿ ರಾಜ್ಯದಲ್ಲಿ ಪ್ರವಾಹದಿಂದ ಸಂಭವಿಸಿದ ಹಾನಿಯ ಕುರಿತು ಚರ್ಚೆ ನಡೆಸಿತು. (1/2)@HMOIndia pic.twitter.com/tufyoCFMH3

— CM of Karnataka (@CMofKarnataka) September 4, 2021

ಮೊದಲ ಬಾರಿಗೆ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಹಾನಿಯನ್ನು ಪರಿಶೀಲಿಸಿದ ಕೂಡಲೇ ನೂರು ಕೋಟಿ ರೂ. ಬಿಡುಗಡೆ ಮಾಡಿದ್ದು, ಮೂರು ದಿನಗಳೊಳಗೆ ಬೆಳಗಾವಿ ಉತ್ತರ ಕನ್ನಡ ಜಿಲ್ಲೆಗಳಿಗೆ 500 ಕೋಟಿ ರೂ. ಒದಗಿಸಲಾಗಿದೆ. ರಾಜ್ಯದ ವಾಸ್ತವಾಂಶಗಳನ್ನು ವಸ್ತುನಿಷ್ಠವಾಗಿ ಕೇಂದ್ರ ತಂಡದ ಮುಂದಿಡಲಾಗಿದೆ. ಇಂದು ಕ್ಷಣ ಕ್ಷಣದ ಮಾಹಿತಿ ಲಭ್ಯವಾಗುವ ಕಾರಣ, ಕೇಂದ್ರಕ್ಕೂ ಮಾಹಿತಿ ಲಭ್ಯವಿದೆ. ಕಳೆದ ನಾಲ್ಕು ವರ್ಷಗಳಿಂದ ಜನರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಪ್ರತಿವರ್ಷ ಕುಟುಂಬಗಳ ಸ್ಥಳಾಂತರ, ಮನೆ ಕಳೆದುಕೊಳ್ಳುವ ಪರಿಸ್ಥಿತಿ ಹೃದಯ ವಿದ್ರಾವಕವಾಗಿದೆ. ಇದನ್ನೂ ಓದಿ: ವಿದ್ಯುತ್ ಬಿಲ್‍ನಲ್ಲಿ ಅಕ್ರಮ, ಮೂವರ ಅಮಾನತು: ಸುನಿಲ್ ಕುಮಾರ್

BASAVARAJ BOMMAI

ರಸ್ತೆ ಮತ್ತಿತರ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ. ಕಳೆದ 15 ವರ್ಷಗಳಲ್ಲಿ ರಸ್ತೆ, ವಿದ್ಯುತ್ ಮತ್ತಿತರ ಸಾರ್ವಜನಿಕ ಸೌಲಭ್ಯಗಳಿಗೆ ಭಾರಿ ಪ್ರಮಾಣದಲ್ಲಿ ಹೂಡಿಕೆ ಮಾಡಿರುವ ಹಿನ್ನೆಲೆಯಲ್ಲಿ ಅವುಗಳನ್ನು ಮರು ಸ್ಥಾಪಿಸುವುದು ಸವಾಲಿನ ಕೆಲಸವಾಗಿದೆ. ರಾಜ್ಯ ಪ್ರಗತಿಪರ ಕೃಷಿ ರಾಜ್ಯವಾಗಿದ್ದು, ಈ ಬಾರಿ ಬಿತ್ತನೆ ಹೆಚ್ಚಾಗಿದ್ದು, ರೈತರು ಕೂಡ ಉತ್ಸಾಹದಿಂದ ಕೃಷಿ ಚಟುವಟಿಕೆಗಳಲ್ಲಿ ಹೂಡಿಕೆ ಮಾಡಿದ್ದರು. ಆದರೆ ಪ್ರವಾಹದಿಂದ ಬೆಳೆ ನಷ್ಟವಾಗಿ ತೊಂದರೆ ಅನುಭವಿಸಿದ್ದಾರೆ. ಆದ್ದರಿಂದ ರಾಜ್ಯಕ್ಕೆ ಗರಿಷ್ಠ ಪ್ರಮಾಣದ ನೆರವು ನೀಡುವಂತೆ ಮನವಿ ಮಾಡಿದರು. ಇದನ್ನೂ ಓದಿ: ರಾಜ್ಯದಲ್ಲಿ ಇನ್ನೆರಡು ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆ

ಕಂದಾಯ ಸಚಿವ @RAshokaBJP, ವಸತಿ ಸಚಿವ @VSOMANNA_BJP, ಕೃಷಿ ಸಚಿವ @bcpatilkourava, ಲೋಕೋಪಯೋಗಿ ಸಚಿವ @CCPatilBJP, ಪಶು ಸಂಗೋಪನಾ ಸಚಿವ @PrabhuChavanBJP ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. (2/2)

— CM of Karnataka (@CMofKarnataka) September 4, 2021

ರಾಜ್ಯವು ವಸ್ತುನಿಷ್ಠ ವರದಿ ಸಲ್ಲಿಸಿರುವುದಲ್ಲದೆ, ಅತ್ಯಂತ ಕ್ರಿಯಾಶೀಲವಾಗಿ ನಷ್ಟದ ವಿವರ ನೀಡಿದೆ ಎಂದು ಸುಶೀಲ್ ಪಾಲ್ ಮೆಚ್ಚುಗೆ ವ್ಯಕ್ತ ಪಡಿಸಿದರು. ಇದೇ ವೇಳೆ ಕಂದಾಯ ಸಚಿವ ಆರ್. ಅಶೋಕ, ವಸತಿ ಸಚಿವ ವಿ.ಸೋಮಣ್ಣ, ಕೃಷಿ ಸಚಿವ ಬಿ.ಸಿ.. ಪಾಟೀಲ, ಲೋಕೋಪಯೋಗಿ ಸಚಿವ ಸಿ.ಸಿ. ಪಾಟೀಲ, ಪಶು ಸಂಗೋಪನಾ ಸಚಿವ ಪ್ರಭು ಚೌವ್ಹಾಣ್ ಮತ್ತು ಸರ್ಕಾರದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Basavaraj BommaibengaluruCentral Teamflood relief fundPublic TVಕೇಂದ್ರ ತಂಡಪಬ್ಲಿಕ್ ಟಿವಿಪ್ರವಾಹ ಪರಿಹಾರಬಸವರಾಜ್ ಬೊಮ್ಮಾಯಿಬೆಂಗಳೂರು
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

Education Dept fails Karwar blind student by showing her absence even though she attended the exam
Districts

ಪರೀಕ್ಷೆಗೆ ಹಾಜರಾಗಿದ್ರೂ ಗೈರು ಅಂತ ತೋರಿಸಿ ಅಂಧ ವಿದ್ಯಾರ್ಥಿನಿ ಫೇಲ್ ಮಾಡಿ ಶಿಕ್ಷಣ ಇಲಾಖೆ ಯಡವಟ್ಟು 

Public TV
By Public TV
5 minutes ago
West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
27 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
41 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?