ಬೆಳಗಾವಿ: ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.
ಬೆಳಗಾವಿ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 36 ವಾರ್ಡ್ ಗಳಲ್ಲಿ ಭರ್ಜರಿ ಗೆಲುವು ಸಾಧಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದು, ಮೊದಲ ಬಾರಿಗೆ ಪಾಲಿಕೆಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಂತಾಗಿದೆ. ಈ ಮೂಲಕ ಎಂಇಎಸ್ ಪುಂಡಾಟಕ್ಕೆ ಸಂಪೂರ್ಣ ಕಡಿವಾಣ ಬಿದ್ದಂತಾಗಿದೆ. ಇದನ್ನೂ ಓದಿ: ವ್ಯಾಕ್ಸಿನ್ ಪಡೆದ ನಂತರ ಮಗನ ಸಾವು – ಪೋಷಕರ ಆರೋಪ
ಬಿಜೆಪಿ 35, ಕಾಂಗ್ರೆಸ್ 10, ಎಂಇಎಸ್ 2, ಪಕ್ಷೇತರ 10 ಹಾಗೂ ಎಐಎಂಐಎಂ 1 ವಾರ್ಡ್ ನಲ್ಲಿ ಗೆಲುವು ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿಗಳು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಇದನ್ನೂ ಓದಿ: ಮಗನ ಪ್ರಾಣ ಉಳಿಸಿಕೊಳ್ಳಲು ವೈದ್ಯರ ಕಾಲು ಹಿಡಿದ ತಾಯಿ
ಬಿಜೆಪಿ ವಿಜಯೋತ್ಸವದ ವೇಳೆ ನೂಕು ನುಗ್ಗಲು ಹೆಚ್ಚಾಗಿದ್ದು, ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಈ ಪರಿಣಾಮ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಬೈಕ್ ಗಳು ಜಖಂಗೊಂಡಿವೆ.