ತುಮಕೂರು: ಎತ್ತಿನಹೊಳೆ ಯೋಜನೆ ತ್ವರಿತವಾಗಿ ಜಾರಿ ಮಾಡಲು ಸರ್ಕಾರಕ್ಕೆ ಬದ್ಧತೆಯೇ ಇಲ್ಲ ಎಂದು ಜಿ.ಪರಮೇಶ್ವರ್ ಹೇಳಿದ್ದಾರೆ.
ಮಧುಗಿರಿ ಪಟ್ಟಣದ ಹಾಲು ಶೇಖರಣ ಉಪಕೇಂದ್ರ ಆವರಣದಲ್ಲಿ ತುಮುಲ್ ಕಲ್ಯಾಣ ಟ್ರಸ್ಟ್ ಮತ್ತು ತುಮುಲ್‍ನಿಂದ ಕೋವಿಡ್‍ನಿಂದ ಮೃತಪಟ್ಟ ಹಾಲು ಉತ್ಪಾದಕ ಕುಟುಂಬಗಳಿಗೆ ಚೆಕ್ ವಿತರಿಸಿ ಮಾತನಾಡಿದ ಅವರು, ಎತ್ತಿನಹೊಳೆ ಯೋಜನೆಯ ಕಾಮಗಾರಿ ಪೂರ್ಣಗೊಳಿಸಲು ಸರ್ಕಾರ ಹಣ ಬಿಡುಗಡೆ ಮಾಡುತ್ತಿಲ್ಲ. ಕೊರಟಗೆರೆ ತಾಲ್ಲೂಕಿನ ಬೈರಗೊಂಡ್ಲು ಕೆರೆ ನಿರ್ಮಾಣಕ್ಕೆ ಸರ್ಕಾರ ಸಹಕಾರ ನೀಡುತ್ತಿಲ್ಲ. ಭೂಮಿ ಕಳೆದುಕೊಳ್ಳುತ್ತಿರುವ ರೈತರಿಗೆ ಪರಿಹಾರದ ವ್ಯತ್ಯಾಸವನ್ನು ಸರಿಪಡಿಸುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಆರೋಪಿಸಿದರು. ಇದನ್ನೂ ಓದಿ: ಮೋದಿ ಆಪ್ತ ಭೂಪೇಂದ್ರ ಪಟೇಲ್ ಗುಜರಾತಿನ ಮುಂದಿನ ಸಿಎಂ
ಕೋವಿಡ್‍ನಿಂದ ಮೃತಪಟ್ಟ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಸರ್ಕಾರ ಘೋಷಿಸಿದ್ದರೂ, ಈವರೆಗೂ ಪರಿಹಾರ ನೀಡಿಲ್ಲ. ಆದರೆ ತುಮುಲ್ ಘೋಷಣೆ ಮಾಡದೇ ಕೋವಿಡ್ ಮೃತರ ಕುಟುಂಬಗಳಿಗೆ 1 ಲಕ್ಷ ಪರಿಹಾರ ನೀಡಿದೆ ಎಂದು ಇದು ಹೆಮ್ಮೆಯ ವಿಷಯ ಎಂದು ಹೇಳಿದರು. ಇದನ್ನೂ ಓದಿ:ಮೈಸೂರಿನತ್ತ ಪ್ರಯಾಣ ಬೆಳೆಸಿದ ದಸರಾ ಗಜಪಡೆ