– ಪಾಸಿಟಿವಿಟಿ ರೇಟ್ ಶೇ.0.65ಕ್ಕೆ ಇಳಿಕೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಕೇಸ್ ಗಳ ಸಂಖ್ಯೆಯಲ್ಲಿ ನಿಧಾನವಾಗಿ ಏರಿಕೆಯಾಗ್ತಾ ಇದೆ. ಇಂದು ಒಂದು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಇಂದು ರಾಜ್ಯದಲ್ಲಿ 1,116 ಕೋವಿಡ್ ಕೇಸ್ ದಾಖಲಾಗಿದ್ದು, 08 ಜನ ಸಾವನ್ನಪ್ಪಿದ್ದಾರೆ. ಇನ್ನೂ ಪಾಸಿಟಿವಿಟಿ ರೇಟ್ ಶೇ.0.65ಕ್ಕೆ ಇಳಿಕೆಯಾಗಿದೆ. 100 ಜನರಿಗೆ ಟೆಸ್ಟ್ ಮಾಡಿದ್ರೆ ಒಬ್ಬರಿಗೆ ಪಾಸಿಟಿವ್ ಆಗ್ತಿದೆ.

ಬೆಂಗಳೂರಿನಲ್ಲಿ ಕೂಡ ಕೇಸ್ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 462 ಕೇಸ್ ದಾಖಲಾಗಿದ್ದು, ಬೆಂಗಳೂರಿನಲ್ಲಿ ಕೊರೊನಾಗೆ 05 ಸಾವಾಗಿದೆ. ಬಹಳ ದಿನಗಳ ನಂತರ ಬೆಂಗಳೂರಿನಲ್ಲಿ ಸ್ವಲ್ಪ ಮಟ್ಟಿಗೆ ಡೆತ್ ಕಂಟ್ರೋಲ್ ಗೆ ಬಂದಿದೆ. ಜೊತೆಗೆ ರಾಜ್ಯದಲ್ಲಿ ಇಂದು 970 ಜನ ಡಿಸ್ಚಾರ್ಜ್ ಆಗಿದ್ದು ಬೆಂಗಳೂರಿನಲ್ಲಿ 265 ಜನ ಇಂದು ಡಿಸ್ಚಾರ್ಜ್ ಆಗಿದ್ದಾರೆ. ಇದನ್ನೂ ಓದಿ: ಕ್ಷುಲ್ಲಕ ಕಾರಣಕ್ಕೆ ಗಲಾಟೆ- ಓರ್ವನ ಮೇಲೆ ನಾಲ್ವರಿಂದ ಹಲ್ಲೆ

ಇಂದು ರಾಜ್ಯದಲ್ಲಿ ಆ್ಯಕ್ಟೀವ್ ಕೇಸ್ ಗಳ ಸಂಖ್ಯೆ 15,892ಕ್ಕೆ ಏರಿಕೆಯಾಗಿದೆ. ಜೊತೆಗೆ ಇಂದು ಕೋವಿಡ್ ಟೆಸ್ಟ್ ಕೂಡ ಒಂದು ಲಕ್ಷಕ್ಕೂ ಹೆಚ್ಚು ಕೋವಿಡ್ ಟೆಸ್ಟ್ ಆಗಿದೆ. 170306 ಕೋವಿಡ್ ಟೆಸ್ಟ್ ಆಗಿದ್ದು, 1,116 ಪಾಸಿಟಿವ್ ಆಗಿರೋದು ಕೊರೊನಾ ಕಂಟ್ರೋಲ್ ನಲ್ಲಿ ಇರೋದು ಗೊತ್ತಾಗ್ತಿದೆ. ಇದನ್ನೂ ಓದಿ: ಮಗನಿಗೆ 6 ತಿಂಗಳು ತುಂಬಿರೋ ಸಂಭ್ರಮ- ಮುಯೂರಿ ಫೋಟೋಶೂಟ್

ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 10, ಬೆಂಗಳೂರು ಗ್ರಾಮಾಂತರ 15, ಬೆಂಗಳೂರು ನಗರ 462, ಬೀದರ್ 0, ಚಾಮರಾಜನಗರ 7, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 50, ಚಿತ್ರದುರ್ಗ 5, ದಕ್ಷಿಣ ಕನ್ನಡ 102, ದಾವಣಗೆರೆ 7, ಧಾರವಾಡ 4, ಗದಗ 0, ಹಾಸನ 81, ಹಾವೇರಿ 1, ಕಲಬುರಗಿ 1, ಕೊಡಗು 67, ಕೋಲಾರ 12, ಕೊಪ್ಪಳ 1, ಮಂಡ್ಯ 15, ಮೈಸೂರು 76, ರಾಯಚೂರು 0, ರಾಮನಗರ 0, ಶಿವಮೊಗ್ಗ 25, ತುಮಕೂರು 60, ಉಡುಪಿ 89, ಉತ್ತರ ಕನ್ನಡ 20, ವಿಜಯಪುರ 0 ಮತ್ತು ಯಾದಗಿರಿಯಲ್ಲಿ 0 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.
ಇಂದಿನ 15/09/2021 ಸಂಪೂರ್ಣ ಪತ್ರಿಕಾ ಪ್ರಕಟಣೆಗಾಗಿ ಇಲ್ಲಿ ನೀಡಲಾಗಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ.https://t.co/eQkxkEK0ce @CMofKarnataka @BSBommai @mla_sudhakar @BBMPCOMM @mysurucitycorp @mangalurucorp @WFRising @DDChandanaNews @AIRBENGALURU1 @KarnatakaVarthe @PIBBengaluru pic.twitter.com/1TXqs3HnXv
— Karnataka Health Department (@DHFWKA) September 15, 2021

