– ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ಮಳೆ
ಬೆಂಗಳೂರು: ಸೆಪ್ಟೆಂಬರ್ 21 ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೆಪ್ಟೆಂಬರ್ 18 ರಿಂದ 21ರವರೆಗೆ ಭಾರೀ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವುದರಿಂದ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠಕ್ಕೆ ಇಂದು ಚಾಲನೆ – ಇಂದಿನ ಕಾರ್ಯಕ್ರಮಗಳು ಏನು?
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಸೆ.21 ರವರೆಗೆ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.